ನವದೆಹಲಿ : ರಾಜ್ಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿರುವ ಸಿಎಂ ಬದಲಾವಣೆ ಕುರಿತಂತೆ ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಪ್ರತಿಕ್ರಿಯೆ ನೀಡಿದ್ದು, ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಸಿಎಂ ಹಾಗೂ ರಾಜ್ಯಾಧ್ಯಕ್ಷರ ಬದಲಾವಣೆ ಇಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅರುಣ್ ಸಿಂಗ್(Arun Singh), ರಾಜ್ಯದ ಸಿಎಂ ಬಿಎಸ್ ಯಡಿಯುರಪ್ಪ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಅವರನ್ನು ಬದಲಿಸುವ ಯಾವುದೇ ಪ್ರಸ್ತಾಪ ಇಲ್ಲ. ಇದು ಕೇವಲ ಕಾಲ್ಪನಿಕ. ಯಡಿಯೂರಪ್ಪ ಉತ್ತಮ ಕೆಲಸ ಮಾಡುತ್ತಿದ್ದಾರೆ. ಯಡಿಯೂರಪ್ಪ ಬದಲಾವಣೆ ಹೈಕಮಾಂಡ್ ನಿರ್ಧಾರ ಮಾಡಿಲ್ಲ ಎಂದು ಊಹಾಪೋಹಗಳಿಗೆ ಅರುಣ್ ಸಿಂಗ್ ಸ್ಪಷ್ಟನೆ ನೀಡಿದ್ದಾರೆ.
It's rumour. Such rumours shouldn't be spread. Under the party's present state chief, org's work is going on well. We're doing good work on ground. There's no change, it is an imagination: Arun Singh, Karnataka BJP incharge when asked if there would be a change of state BJP chief pic.twitter.com/l7JhXY1s23
— ANI (@ANI) June 10, 2021
ಇದನ್ನೂ ಓದಿ : Heavy Rain in Karnataka : ರಾಜ್ಯದಲ್ಲಿ ಮುಂದಿನ ವಾರ ಭಾರೀ ಮಳೆ : ಕರಾವಳಿ ಜಿಲ್ಲೆಗಳಲ್ಲಿ 'ರೆಡ್' ಅಲರ್ಟ್'
ಸಿಎಂ ಬಿಎಸ್ ಯಡಿಯೂರಪ್ಪ(BS Yediyurappa)ನವರು ಕೋವಿಡ್-19 ಸಂಕಷ್ಟದ ಸಮಯದಲ್ಲಿ ಸಾಕಷ್ಟು ಉತ್ತಮ ಕೆಲಸ ಮಾಡಿದ್ದಾರೆ, ಕೋವಿಡ್ ಸಮಸ್ಯೆಗಳನ್ನು ಚೆನ್ನಾಗಿ ನಿರ್ವಹಿಸಿಕೊಂಡು ಹೋಗುತ್ತಿದ್ದಾರೆ, ಅವರ ಕೆಲಸದ ಬಗ್ಗೆ ವರಿಷ್ಠರಿಗೆ ಸಮಾಧಾನವಿದೆ, ಹೀಗಾಗಿ ಮುಖ್ಯಮಂತ್ರಿಯ ಬದಲಾವಣೆಯ ಪ್ರಶ್ನೆ ಉದ್ಭವಿಸುವುದಿಲ್ಲ ಎಂದಿದ್ದಾರೆ.
ಇದನ್ನೂ ಓದಿ : Unlock in Karnataka : ಜೂ.14 ರಿಂದಲೇ ರಾಜ್ಯದಲ್ಲಿ 'ಅನ್ ಲಾಕ್' ಫಿಕ್ಸ್!
ಇನ್ನು ರಾಜ್ಯಾಧ್ಯಕ್ಷ ಸ್ಥಾನದಿಂದ ನಳಿನ್ ಕುಮಾರ್ ಕಟೀಲ್(Nalin Kumar Kateel) ಅವರನ್ನು ಕೂಡ ತೆಗೆಯುವುದಿಲ್ಲ, ಇವೆಲ್ಲಾ ಸುದ್ದಿಗಳು ಕೇವಲ ಕಾಲ್ಪನಿಕ ಎಂದಿದ್ದಾರೆ.
ಇದನ್ನೂ ಓದಿ : ಪ್ರಯಾಣಿಕರ ಸುರಕ್ಷತೆಗಾಗಿ ಕೆ.ಎಸ್.ಆರ್.ಟಿ.ಸಿ ವಾಹನಗಳಿಗೆ ಎ.ಐ ಟೆಕ್ನಾಲಜಿ ಅಳವಡಿಕೆ
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.