ಬೆಂಗಳೂರು: ನಗರದ ರಾಜರಾಜೇಶ್ವರಿ ನಗರ ಹಾಗೂ ತುಮಕೂರು ಜಿಲ್ಲೆಯ ಶಿರಾ ವಿಧಾನಸಭೆ ಚುನಾವಣೆ ಅಭ್ಯರ್ಥಿಗಳ ಬಗ್ಗೆ ಬಿಜೆಪಿಯಲ್ಲಿ ಯಾವುದೇ ಗೊಂದಲ ಇಲ್ಲ. ಶೀಘ್ರವೇ ಪಕ್ಷದ ಕೋರ್ ಕಮಿಟಿ ಸಭೆಯು ಬಿಜೆಪಿ ಅಭ್ಯರ್ಥಿಗಳ ಆಯ್ಕೆಯನ್ನು ಮಾಡುತ್ತದೆ ಎಂದು ಹೇಳಿರುವ ಉಪ ಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವತ್ಥನಾರಾಯಣ (Dr CN Ashwathnarayan) ಸ್ಪಷ್ಪಡಿಸಿದರು.


EVM ಸ್ಪರ್ಶಿಸದೆಯೇ ವೋಟಿಂಗ್-ಸಿರಿಂಜ್ ಮೂಲಕ ಶಾಹಿ ಗುರುತು, ವಿಶೇಷವಾಗಿರಲಿದೆಯೇ ಈ ಬಾರಿಯ Bihar Election!


COMMERCIAL BREAK
SCROLL TO CONTINUE READING

COVID-19 ಕಾರಣಕ್ಕೆ ಮನೆಯಲ್ಲೇ ಚಿಕಿತ್ಸೆ ಪಡೆದು, ಗುಣಮುಖರಾಗಿ ಬಂದ ಅಶ್ವಥನಾರಾಯಣ್ ಗುರುವಾರ ಸಂಪುಟ ಸಭೆಯಲ್ಲಿ ಭಾಗವಹಿಸಿದ್ದರು. ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಅವರು, ರಾಜರಾಜೇಶ್ವರಿ ನಗರದಲ್ಲಿ ಮಾಜಿ ಶಾಸಕ ಮುನಿರತ್ನ ಅವರಿಗೇ ಟಿಕೆಟ್ ಕೊಡಬೇಕಾ? ಬೇಡವಾ? ಎನ್ನುವುದನ್ನು ಪಕ್ಷದ ನಾಯಕತ್ವವೇ ನಿರ್ಧರಿಸುತ್ತದೆ. ಈ ವಿಷಯವನ್ನು ಬಹಿರಂಗವಾಗಿ ಚರ್ಚೆ ಮಾಡಲಾಗದು. ಪಕ್ಷದ ಮಟ್ಟದಲ್ಲಿ ಎಲ್ಲವೂ ಸಮಾಲೋಚನೆ ನಡೆಯುತ್ತಿದೆ. ಶೀಘ್ರದಲ್ಲೇ ಅಧಿಕೃತವಾಗಿ ಪ್ರಕಟಣೆ ಹೊರಬೀಳುತ್ತದೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.


ಮಂಡ್ಯ ಜಿಲ್ಲೆಯಲ್ಲಿ ಬಿಜೆಪಿ ಖಾತೆ ತೆರೆದದ್ದೇ ನಮ್ಮ ಗೆಲುವು!


ಒಂದು ವರ್ಷದಿಂದ ರಾಜ್ಯ ಸರಕಾರ ಉತ್ತಮವಾಗಿ ಕೆಲಸ ಮಾಡಿದೆ. ಕೋವಿಡ್‌ ನಿರ್ವಹಣೆ, ನೆರೆ ಸೇರಿ ಎಲ್ಲಾ ಸವಾಲುಗಳನ್ನು ಸಮರ್ಥವಾಗಿ ಎದುರಿಸಿದೆ. ಅನೇಕ ಸುಧಾರಣೆಗಳನ್ನು ಜಾರಿಗೆ ತಂದಿದೆ. ಹೀಗಾಗಿ ರಾಜರಾಜೇಶ್ವರಿ ನಗರ ಮತ್ತು ಶಿರಾ ಹಾಗೂ ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ (BJP) ಪಕ್ಷವೇ ಗೆಲ್ಲುತ್ತದೆ ಎಂಬ ವಿಶ್ವಾಸ ನನಗಿದೆ. ಚುನಾವಣೆಗೆ ಪಕ್ಷ ಉತ್ತಮವಾಗಿ ಸಿದ್ಧತೆ ಮಾಡಿಕೊಂಡಿದೆ ಎಂದು ಡಿಸಿಎಂ ತಿಳಿಸಿದರು.