ಕಾಂಗ್ರೆಸ್ ಪಕ್ಷದಲ್ಲಿ ಯಾವುದೇ ಭಿನ್ನಮತ ಇಲ್ಲ: ಸಿದ್ದರಾಮಯ್ಯ
ಕಾಂಗ್ರೆಸ್ ಪಕ್ಷದ ನಾಯಕರಲ್ಲಿ ಯಾವುದೇ ಭಿನ್ನಮತ ಇಲ್ಲ. ಇವೆಲ್ಲ ಸತ್ಯಕ್ಕೆ ದೂರವಾದ ಮಾತು ಎಂದು ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.
ಬೆಂಗಳೂರು: ಕಾಂಗ್ರೆಸ್ ಪಕ್ಷದಲ್ಲಿ ಯಾವುದೇ ಭಿನ್ನಮತ ಇಲ್ಲ, ಮಾಧ್ಯಮದವರು ಇದನ್ನೆಲ್ಲಾ ಸೃಷ್ಟಿಸುತ್ತಿದ್ದಾರೆ ಎಂದು ಶಾಸಕಾಂಗ ಪಕ್ಷದ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ಕಾಂಗ್ರೆಸ್ ಪಕ್ಷದ ನಾಯಕರಲ್ಲಿ ಯಾವುದೇ ಭಿನ್ನಮತ ಇಲ್ಲ. ಇವೆಲ್ಲ ಸತ್ಯಕ್ಕೆ ದೂರವಾದ ಮಾತು. ಕೇವಲ ಮಾಧ್ಯಮಗಳು ಈ ವದಂತಿ ಹಬ್ಬಿಸುತ್ತಿವೆ. ಸಚಿವ ಸ್ಥಾನದ ವಿಚಾರವಾಗಿ, ನಿಗಮ ಮಂಡಳಿ ಅಧ್ಯಕ್ಷ ಸ್ಥಾನದ ಆಕಾಂಕ್ಷಿಗಳಿರುವುದು ಸತ್ಯ, ಆದರೆ ಯಾವುದೇ ಭಿನ್ನಾಭಿಪ್ರಾಯ ಇಲ್ಲ ಎಂದು ಹೇಳಿದ್ದಾರೆ.
ಕಾಂಗ್ರೆಸ್ ಪಕ್ಷದ ಹಲವರನ್ನು ಬಿಜೆಪಿ ಲಜ್ಜೆಗೆಟ್ಟು ಸಂಪರ್ಕಿಸಿರುವುದು ಬಹಿರಂಗವಾಗಿದೆ. ಬಿಜೆಪಿ ಸರ್ಕಾರ ಬೀಳಿಸಲು ಯತ್ನಿಸಿರುವುದಕ್ಕೆ ಇದಕ್ಕಿಂತ ಬೇರೆ ಸಾಕ್ಷಿ ಬೇಕೆ ಎಂದು ಪ್ರಶ್ನಿಸಿದರು. ಸಮ್ಮಿಶ್ರ ಸರ್ಕಾರಕ್ಕೆ ಯಾವುದೇ ಪರಿಣಾಮ ಬೀರುವುದಿಲ್ಲ.ಸರ್ಕಾರ ಸುಭದ್ರವಾಗಿರಲಿದೆ ಎಂದರು.