ಬೆಂಗಳೂರು : ಹಿಂದಿನ ಬಿಜೆಪಿ ಸರ್ಕಾರದಲ್ಲಿ ಸುಮಾರು 21 ಹಗರಣಗಳು ನಡೆದಿದ್ದು,ಈ ಎಲ್ಲಾ ಹಗರಣಗಳ ತನಿಖೆಗೆ ತ್ವರಿತವಾಗಿ ಚಾಲನೆ ನೀಡಲು ಹಾಗೂ ಈ ಬಗ್ಗೆ ತೆಗೆದುಕೊಳ್ಳಬೇಕಾದ ಮುಂದಿನ ಕ್ರಮಗಳ ಬಗ್ಗೆ ಸಲಹೆ ನೀಡಲು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅಧ್ಯಕ್ಷತೆಯಲ್ಲಿ ಸಚಿವಸಂಪುಟ ಉಪ ಸಮಿತಿ ರಚಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. 


COMMERCIAL BREAK
SCROLL TO CONTINUE READING

ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿನ ಹಗರಣಗಳ ಕುರಿತ ತನಿಖೆಗಳ ಪ್ರಗತಿ ಹಾಗೂ ಸಮನ್ವಯ ಸಂಬಂಧ ಕ್ರಮ ವಹಿಸುವ ನಿಟ್ಟಿನಲ್ಲಿ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅಧ್ಯಕ್ಷತೆಯಲ್ಲಿ ಸಚಿವಸಂಪುಟ ಉಪಸಮಿತಿಯನ್ನು ರಚಿಸಲಾಗಿದೆ.ಈ ಸಮಿತಿಯಲ್ಲಿ ಸಚಿವರಾದ ಕೃಷ್ಣಭೈರೇಗೌಡ, ಪ್ರಿಯಾಂಕ ಖರ್ಗೆ, ಸಂತೋಷ್ ಲಾಡ್ ಹಾಗೂ ಎಚ್.ಕೆ.ಪಾಟೀಲ್ ರವರು ಸದಸ್ಯರಾಗಿದ್ದಾರೆ.


ಇದನ್ನೂ ಓದಿ : ಇದು ಅಂಗನವಾಡಿಯೋ.. ದನ-ಕರು ಕಟ್ಟುವ ಕೊಟ್ಟಿಗೆಯೋ.?


ಸಮಿತಿಯು ವರದಿಯನ್ನು ನೀಡಲು ಒಂದರಿಂದ ಎರಡು ತಿಂಗಳ ಅವಧಿಯನ್ನು ನೀಡಲಾಗಿದೆ.ಪಿಎಸ್ ಐ ಹಗರಣ, 40% ಕಮಿಷನ್ ಹಗರಣ, ಕೋವಿಡ್ 19, ಬಿಟ್ ಕಾಯಿನ್ ಹಗರಣಗಳಿಗೆ ಮಾತ್ರ ತನಿಖಾ ಆಯೋಗಗಳನ್ನು ರಚಿಸಲಾಗಿದೆ.ಅದರಲ್ಲಿ ಕೋವಿಡ್ 19 ಬಗ್ಗೆ ತನಿಖಾ ಆಯೋಗ ಪೂರ್ವಭಾವಿ ವರದಿಯನ್ನು ನೀಡಿದ್ದು, ಅಧಿಕಾರಿಗಳ ಪರಿಶೀಲನೆಯ ನಂತರ ಈ ಬಗ್ಗೆ ಸಚಿವ ಸಂಪುಟದಲ್ಲಿ ಸೂಕ್ತ ನಿರ್ಣಯ ಕೈಗೊಳ್ಳಲಾಗುವುದು ಎಂದರು.


ತಪ್ಪಿತಸ್ಥರ ವಿರುದ್ಧ ಕ್ರಮ ಖಂಡಿತ : 
ಸರ್ಕಾರ ತನಿಖೆಗೆ ಸೂಚಿಸುವ ಮೂಲಕ ದ್ವೇಷದ ರಾಜಕೀಯ ಮಾಡುತ್ತಿದೆ ಎಂದು ಬಿಜೆಪಿ ಆರೋಪಿಸಿರುವುದಕ್ಕೆ ಪ್ರತಿಕ್ರಿಯೆ ನೀಡಿದ ಸಿಎಂ,ಬಿಜೆಪಿಯವರು ನನ್ನ ಮೇಲೆ ದ್ವೇಷದ ರಾಜಕಾರಣ ಮಾಡುತ್ತಿದ್ದಾರೆ.ನಮ್ಮ ಸರ್ಕಾರ ದ್ವೇಷದ ರಾಜಕಾರಣ ಮಾಡುವುದಿಲ್ಲ.ಆದರೆ ತಪ್ಪು ಮಾಡಿದವರ ಮೇಲೆ ಖಂಡಿತ ಕ್ರಮ ಕೈಗೊಳ್ಳಲಾಗುವುದು ಎಂದರು.


ಪಿಎಸ್ ಐ ಹಗರಣ :ಎಸ್ ಐಟಿ ಕ್ರಮಕ್ಕೆ ಸೂಚನೆ
ಪಿಎಸ್ ಐ ಹಗರಣದ ತನಿಖೆಗೆ ಸಂಬಂಧಿಸಿದಂತೆ ನ್ಯಾಯಮೂರ್ತಿ ಬಿ.ವೀರಪ್ಪ ಆಯೋಗ ವರದಿಯನ್ನು ನೀಡಿದ್ದು, ಯಾವುದೇ ಕ್ರಮವಾಗಿಲ್ಲದಿರುವ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿ, ಈ ಹಗರಣದ ಬಗ್ಗೆ ವಿಶೇಷ ತನಿಕಾ ತಂಡ ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ ಎಂದರು.


ಇದನ್ನೂ ಓದಿ : ಅಮೆರಿಕದಲ್ಲಿ ರಾಹುಲ್ ಗಾಂಧಿ ಭೇಟಿಯಾದ ಡಿಸಿಎಂ ಡಿಕೆ


ನ್ಯಾಯಾಲಯ ತೀರ್ಮಾನ ಕೈಗೊಳ್ಳಲಿದೆ : 
ವಾಲ್ಮೀಕಿ ಹಗರಣಕ್ಕೆ ಸಂಬಂಧಿಸಿದಂತೆ ಎಸ್ ಐ ಟಿ ಹಾಗೂ ಕೇಂದ್ರ ಜಾರಿ ನಿರ್ದೇಶನಾಲಯದ ತನಿಖೆಗಳು ನಡೆದಿರುವ ಬಗ್ಗೆ ಪ್ರತಿಕ್ರಿಯೆ ನೀಡಿ,ಈ ಪ್ರಕರಣದ ಬಗ್ಗೆ ಎಸ್ ಐ ಟಿಯವರೂ ತನಿಖೆ ಮಾಡಿ ಚಾರ್ಜ್ ಶೀಟ್ ಸಲ್ಲಿಸಿದ್ದು,ಈ ಬಗ್ಗೆ ನ್ಯಾಯಾಲಯ ತೀರ್ಮಾನ ಕೈಗೊಳ್ಳಲಿದೆ ಎಂದರು.


ಮುಖ್ಯಮಂತ್ರಿ ಸ್ಥಾನ ವಿಚಾರವಾಗಿ ಇತರ ಸಚಿವರು ಹೇಳಿಕೆಗಳನ್ನು ನೀಡುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿದ್ದರಾಮಯ್ಯ, ಮುಖ್ಯಮಂತ್ರಿ ಸ್ಥಾನ ಖಾಲಿಯಿಲ್ಲದಿರುವಾಗ, ಈ ಪ್ರಶ್ನೆಯೇ ಉದ್ಭವಿಸುವುದಿಲ್ಲ.ನಾನೇ ಮುಖ್ಯಮಂತ್ರಿಯಾಗಿ ಮುಂದುವರೆಯುವುದರಲ್ಲಿ ಯಾವುದೇ ಸಂಶಯವಿಲ್ಲ ಎಂದು  ತಿಳಿಸಿದ್ದಾರೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Facebook Link - https://bit.ly/3Hhqmcj 
Youtube Link - https://www.youtube.com/watch?v=kr-YIH866cM
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm 
Twitter Link - https://bit.ly/3n6d2R8 ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.