ಹುಬ್ಬಳ್ಳಿ:  ಅವಳಿ ನಗರಗಳಾದ ಹುಬ್ಬಳ್ಳಿ-ಧಾರವಾಡಕ್ಕೆ ಶೀಘ್ರವಾಗಿ ಸಂಪರ್ಕ ಮಾಡುವ ನಿಟ್ಟಿನಲ್ಲಿ ರಾಜ್ಯದಲ್ಲಿಯೇ ಮೊದಲ ಬಾರಿ ಐಷಾರಾಮಿ ಎಸಿ ಬಸ್ ಸಂಚಾರಕ್ಕೆ ಚಿಗರಿ ಸಂಪರ್ಕ ವ್ಯವಸ್ಥೆ ಮಾಡಲಾಗಿದೆ. ನಿತ್ಯ ನೂರಾರು ಚಿಗರಿ ಬಸ್‌ಗಳು ಅವಳಿ ನಗರಗಳ ಮಧ್ಯೆ ಓಡಾಡುತ್ತವೆ. ಈ ಚಿಗರಿ ಬಸ್‌ಗಳು ಹವಾನಿಯಂತ್ರಿತವಾಗಿದ್ದು, ಮಹಿಳೆಯರ ಉಚಿತ ಬಸ್ ಪ್ರಯಾಣ ಯೋಜನೆಗೆ ಈಗ ಇದೆ ಮುಳುವಾಗಿ ಪರಿಣಿಮಿಸಿದೆ.ಒಂದು ಕಡೆ ಜನರ ಒತ್ತಾಯ ಮತ್ತೊಂದು ಕಡೆ ಸರ್ಕಾರದ ಜಾಣ ನಡೆಯಿಂದ ಅಧಿಕಾರಿಗಳು ಇಕ್ಕಟ್ಟಿಗೆ ಸಿಲುಕುವಂತೆ ಮಾಡಿದೆ.


COMMERCIAL BREAK
SCROLL TO CONTINUE READING

ಕಾಂಗ್ರೆಸ್ ಸರ್ಕಾರ 5 ಗ್ಯಾರಂಟಿ ಹೆಸರು ಹೇಳಿಕೊಂಡು ಅಧಿಕಾರದ ಚುಕ್ಕಾಣಿ ಹಿಡಿದಿದೆ. ಆದರೆ ಈಗ 5 ಯೋಜನೆ ಜಾರಿಗೆ ದಿನಕ್ಕೆ ಒಂದೊಂದು ಷರತ್ತು ಹಾಕುತ್ತಿರುವುದು ಜನರ ಅಸಮಾಧಾನಕ್ಕೆ ಸಹ ಕಾರಣವಾಗಿದೆ.ಈ ತಿಂಗಳ 11 ರಿಂದ ಮಹಿಳೆಯರು ಉಚಿತವಾಗಿ ಬಸ್ ಪ್ರಯಾಣ ಮಾಡಬಹುದಾಗಿದ್ದು, ಇದು ರಾಜ್ಯದ ಮಹಿಳೆಯರಿಗೆ ಕೊಂಚ ಸಮಾಧಾನಕರ ವಿಷಯ. ಆದರೆ ಈ ಸಂತಸ ಹುಬ್ಬಳ್ಳಿ ಧಾರವಾಡದ ಮಹಿಳೆಯರಿಗೆ ಕೊಟ್ಟು ಕಸಿದಂತಾಗಿದೆ. ಬಹು ಕೋಟಿ ವೆಚ್ಚದ ಮತ್ತು ಜನ ಬಹಳಷ್ಟು ನೆಚ್ಚಿಕೊಂಡಿರುವ ಬಿಆರ್‌ಟಿಎಸ್ ಸಾರಿಗೆಯಲ್ಲಿ ಉಚಿತ ಪ್ರಯಾಣ ಇನ್ನೂ ಕಗ್ಗಂಟಾಗಿದೆ.


ಇದನ್ನೂ ಓದಿ: ಮೆದುಳು ಕ್ಯಾನ್ಸರ್ ವಿರುದ್ಧದ ಸಮರ; ಭಾರತದಲ್ಲಿ ಶೀಘ್ರ ಪತ್ತೆಮಾಡಬೇಕಾದ ತುರ್ತು ಅಗತ್ಯ


ಸರ್ಕಾರದ ಆದೇಶದಲ್ಲಿ ಹವಾನಿಯಂತ್ರಿತ, ರಾಜಹಂಸ ಸೇರಿ ಕೆಲ ಬಸ್‌ಗಳಲ್ಲಿ ಉಚಿತ ಪ್ರಯಾಣ ಇಲ್ಲ. ಆದರೆ ಚಿಗರಿ ಬಸ್ ವ್ಯವಸ್ಥೆ ರಾಜ್ಯದಲ್ಲಿ ಮೊದಲ ವಿಭಿನ್ನ ಸಿಟಿ ಬಸ್ ಸಂಚಾರವಾಗಿದೆ. ನಿತ್ಯ ಸಾವಿರಾರು ಜನ ಇದರ ಪ್ರಯೋಜನ ಪಡೆಯುತ್ತಿದ್ದಾರೆ. ಇಂತಹ ಸಂಪರ್ಕ ಯೋಜನೆ ಉಚಿತ ಬಸ್ ಪ್ರಯಾಣ ಯೋಜನೆ ವ್ಯಾಪ್ತಿಗೆ ಬಾರದೆ ಇರುವುದು ಜಿಲ್ಲೆಯ ಮಹಿಳೆಯರ ಅಸಮಾಧಾನಕ್ಕೆ ಕಾರಣವಾಗಿದೆ. ನಿತ್ಯ ಸುಮಾರು 96 ಚಿಗರಿ ಬಸ್‌ಗಳಲ್ಲಿ 80 ಸಾವಿರ ಪ್ರಯಾಣಿಕರು ಸಂಚಾರ ಮಾಡುತ್ತಾರೆ. ಹೀಗಾಗಿ ಚಿಗರಿ ಬಸ್‌ಗಳಲ್ಲಿ ಮಹಿಳೆಯರು ಫ್ರೀ ಸಂಚಾರಕ್ಕೆ ಅವಕಾಶ ಕೊಡಬೇಕು‌. ಇಲ್ಲ ಹುಬ್ಬಳ್ಳಿ ಧಾರವಾಡ ನಡುವೆ ಕೆಂಪು ಬಣ್ಣದ ಬಸ್ ಹಾಗೂ ನಿಲುಗಡೆ ಬಸ್ ಹೆಚ್ಚಳ ಮಾಡಬೇಕು ಎನ್ನುತ್ತಾರೆ ಮಹಿಳೆಯರು.


ಬಿಆರ್‌ಟಿಎಸ್ ವ್ಯಾಪ್ತಿಯ ಚಿಗರಿ ಬಸ್ ಸೇವೆಗೆ ಮೊದಲಿಂದಲೂ ಒಂದಲ್ಲಾ ಒಂದು ಸಮಸ್ಯೆಗಳಿದ್ದು, ವ್ಯವಸ್ಥೆ ಈಗ ನಷ್ಟದಲ್ಲಿ ನಡೆಯುತ್ತಿದೆ. ಮಾಹಿತಿ ಪ್ರಕಾರ ತಿಂಗಳಿಗೆ 2 ಕೋಟಿ ರೂ. ಯಷ್ಟು ನಷ್ಟದ ಹೊರೆ ಬಿಆಆರ್‌ಟಿಎಸ್ ಇಲಾಖೆ ಮೇಲೆ ಬೀಳುತ್ತಿದೆ. ಇಂತಹ ಸಂದರ್ಭದಲ್ಲಿ ಶಕ್ತಿ ಯೋಜನೆಯ ವ್ಯಾಪ್ತಿಗೆ ಚಿಗರಿ ಬಸ್ ಒಳಪಡಿಸಿದರೆ ಇದು ಗಾಯದ ಮೇಲೆ ಬರೆ ಎಳೆದಂತಾಗುತ್ತದೆ ಎಂಬುವುದು ಅಧಿಕಾರಿಗಳ ವಾದವಾಗಿದೆ. ಹೀಗಿದ್ದರೂ ಸಹ ಜನರ ಒತ್ತಾಯದ ಮೇರೆಗೆ ಬಿಆರ್‌ಟಿಎಸ್ ಎಂಡಿ ಭರತ್ ಶಕ್ತಿ ಯೋಜನೆಯಲ್ಲಿ ಚಿಗರಿ ಬಸ್ ತರಲು ಅನುಮತಿ ನೀಡಿ ಎಂದು ಸರ್ಕಾರಕ್ಕೆ ಕೋರಿಕೊಂಡಿದ್ದಾರೆ. ಆದರೆ ಸರ್ಕಾರ ಇದುವರೆಗೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 
Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.