ಮುಡಾ ಪ್ರಕರಣದ ತನಿಖೆಯಲ್ಲಿ ಹಸ್ತಕ್ಷೇಪ ಇಲ್ಲ - ಮುಖ್ಯಮಂತ್ರಿ ಸಿದ್ದರಾಮಯ್ಯ

ಮುಡಾ ಪ್ರಕರಣದ ತನಿಖೆ ಪ್ರಸ್ತುತ ಲೋಕಾಯುಕ್ತದಲ್ಲಿದ್ದು, ನಾನು ಅದರಲ್ಲಿ ಯಾವುದೇ ರೀತಿಯ ಹಸ್ತಕ್ಷೇಪ ಮಾಡುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

Written by - Prashobh Devanahalli | Last Updated : Sep 29, 2024, 03:59 PM IST
  • ಮುಡಾ ಪ್ರಕರಣದ ತನಿಖೆ ಪ್ರಸ್ತುತ ಲೋಕಾಯುಕ್ತದಲ್ಲಿದೆ
  • ನಾನು ಅದರಲ್ಲಿ ಯಾವುದೇ ರೀತಿಯ ಹಸ್ತಕ್ಷೇಪ ಮಾಡುವುದಿಲ್ಲ
  • ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆ
ಮುಡಾ ಪ್ರಕರಣದ ತನಿಖೆಯಲ್ಲಿ ಹಸ್ತಕ್ಷೇಪ ಇಲ್ಲ - ಮುಖ್ಯಮಂತ್ರಿ ಸಿದ್ದರಾಮಯ್ಯ title=

ಮೈಸೂರು: ಮುಡಾ ಪ್ರಕರಣದ ತನಿಖೆ ಪ್ರಸ್ತುತ ಲೋಕಾಯುಕ್ತದಲ್ಲಿದ್ದು, ನಾನು ಅದರಲ್ಲಿ ಯಾವುದೇ ರೀತಿಯ ಹಸ್ತಕ್ಷೇಪ ಮಾಡುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಮುಡಾ ಪ್ರಕರಣ ಸಂಬಂಧ ಸಿಎಂ ವಿರುದ್ಧ ಇಡಿಯಲ್ಲಿ ದೂರು ದಾಖಲಾಗಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಇಡಿಯಲ್ಲಿ ದೂರು ದಾಖಲಾಗಿದ್ದರೆ, ಕಾನೂನು ರೀತಿ ಕ್ರಮ ಜರುಗಿಸಲಾಗುತ್ತದೆ ಎಂದರು.

ಅಧಿಕಾರಿಗಳ ವಿರುದ್ಧ ಟೀಕೆ ಸರಿಯಲ್ಲ

ಕುಮಾರಸ್ವಾಮಿಯವರು ಲೋಕಾಯುಕ್ತ ಎಡಿಜಿಪಿ ಮೇಲೆಯೂ ಟೀಕೆ ಮಾಡುತ್ತಿರುವ ಬಗ್ಗೆ ಬಗ್ಗೆ ಪ್ರತಿಕ್ರಿಯೆ ನೀಡಿ, ಕುಮಾರಸ್ವಾಮಿಯವರು ತಪ್ಪೆಸೆಗಿಸಿದ್ದು, ಅಧಿಕಾರಗಳ ವಿರುದ್ಧ ಟೀಕೆ ಮಾಡುವುದು ಸರಿಯಲ್ಲ. ಇಂತಹ ಹೇಳಿಕೆಗಳ ಮೇಲೆ ನಾನು ಪ್ರತಿಕ್ರಿಯೆ ನೀಡುವುದಿಲ್ಲ

ಇದನ್ನೂ ಓದಿ: Radhika Kumaraswamy: 14 ನೇ ವಯಸ್ಸಿಗೆ ಮೊದಲ ಮದುವೆ.. ಬಳಿಕ ಮಾಜಿ ಸಿಎಂ ಜೊತೆ ಎರಡನೇ ವಿವಾಹ! ನಟಿ ರಾಧಿಕಾ ಕುಮಾರಸ್ವಾಮಿ ಮೊದಲ ಪತಿ ಯಾರು ಗೊತ್ತಾ ?

ರೇವ್ ಪಾರ್ಟಿ ವಿರುದ್ದ ಪೊಲೀಸರ ಕ್ರಮ

ಮೈಸೂರಿನಲ್ಲಿ ರೇವ್ ಪಾರ್ಟಿ ನಡೆದಿರುವ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿ, ರೇವ್ ಪಾರ್ಟಿ ನಡೆದಿರುವ ಬಗ್ಗೆ ಮಾಹಿತಿ ಬಂದಿದ್ದು,ಈ ಬಗ್ಗೆ ಪೊಲೀಸರು ಸೂಕ್ತ ಕ್ರಮ ಕೈಗೊಳ್ಳಲಿದ್ದಾರೆ ಎಂದರು.

ಅಕ್ಟೋಬರ್ 2 ರಂದು ದಸರಾ ಸಿದ್ದತೆ ಗಳ ವೀಕ್ಷಣೆ

ದಸರಾ ಉತ್ಸವದ ಸಿದ್ಧತೆಗಳ ಪರ್ತಕರ್ತರಿಗೆ ಮಾಹಿತಿ ನೀಡುತ್ತಾ, ದಸರಾ ಉತ್ಸವಗಳ ಸಿದ್ದತೆಗಳಿಗೆ ಅಧಿಕಾರಿಗಳಿಗೆ ಈಗಾಗಲೇ ಸೂಚನೆ ನೀಡಲಾಗಿದ್ದು, ಸಿದ್ಧತೆಗಳನ್ನು ವೀಕ್ಷಿಸಲು ಅಕ್ಟೋಬರ್ 2 ರಂದು ಮೈಸೂರಿಗೆ ಆಗಮಿಸಲಿದ್ದೇನೆ ಎಂದರು.

ಇದನ್ನೂ ಓದಿ: Sudeep: ಬಿಗ್‌ ಬಾಸ್‌ ಕನ್ನಡ 11 ಗ್ರ್ಯಾಂಡ್‌ ಓಪನಿಂಗ್ ಕಿಚ್ಚ ಸುದೀಪ್‌ ಲುಕ್‌ ರಿವೀಲ್!

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

Trending News