ಬೆಂಗಳೂರು: ರಾಜ್ಯದಲ್ಲಿರುವ ಕೇಂದ್ರ ಸರ್ಕಾರದ ಕಚೇರಿಗಳಲ್ಲಿ 'ತ್ರಿಭಾಷಾ ಸೂತ್ರ'ದ (Three Languages Policy)  ಅಡಿ ಕನ್ನಡ ನಾಮಫಲಕ ಹಾಕದಿರುವ ಬಗ್ಗೆ ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ (HD Kumaraswamy) ಕಿಡಿ ಕಾರಿದ್ದಾರೆ. ಕೇಂದ್ರ ಗೃಹ ಸಚಿವ ಅಮಿತ್ ಷಾ (Amit Shah) ಶಿವಮೊಗ್ಗದ ಭದ್ರಾವತಿಯಲ್ಲಿ  ಶನಿವಾರ ಅನಾವರಣಗೊಳಿಸಿದ RAF ಘಟಕದ ಫಲಕದಲ್ಲೂ ಕನ್ನಡ ಇಲ್ಲದಿರುವ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.


COMMERCIAL BREAK
SCROLL TO CONTINUE READING

ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಕುಮಾರಸ್ವಾಮಿ, 'ಶಿವಮೊಗ್ಗದ ಭದ್ರಾವತಿಯಲ್ಲಿ  ಶನಿವಾರ RAF ಘಟಕಕ್ಕೆ ಗೃಹಸಚಿವರಾದ ಅಮಿತ್ ಷಾ ಅವರು ಶಂಕುಸ್ಥಾಪನೆ ನೆರವೇರಿಸಿದ್ದು, ಅಡಿಗಲ್ಲು ಫಲಕ ಅನಾವರಣಗೊಳಿಸಿದ್ದಾರೆ. ಅಡಿಗಲ್ಲು ಫಲಕಗಳು ಹಿಂದಿ ಮತ್ತು ಆಂಗ್ಲಭಾಷೆಯಲ್ಲಿವೆ. ಇಲ್ಲಿ ಕನ್ನಡದ ಅವಗಣನೆ ನಿಚ್ಚಳವಾಗಿ ಕಾಣುತ್ತದೆ' ಎಂದಿದ್ದಾರೆ. ಜೊತೆಗೆ ಈ ಟ್ವೀಟ್ ಅನ್ನು @AmitShah, @BSYBJP ಮತ್ತು @CMofKarnatakaಕ್ಕೆ ಟ್ಯಾಗ್ ಮಾಡಿದ್ದಾರೆ.


JDS: ಮಹತ್ವದ ಬದಲಾವಣೆಯತ್ತ ಜೆಡಿಎಸ್: ಹೊಸ ಕೋರ್ ಕಮಿಟಿ ರಚನೆಗೆ 'ಜೆಡಿಎಸ್' ನಿರ್ಧಾರ!


ತ್ರಿಭಾಷಾ ಸೂತ್ರವನ್ನು ನೆನಪಿಸಿರುವ ಎಚ್‌.ಡಿ. ಕುಮಾರಸ್ವಾಮಿ (HD Kumaraswamy), 'ವೈವಿಧ್ಯಮಯ ಭಾರತ ತ್ರಿಭಾಷಾ ಸೂತ್ರ ಅಳವಡಿಸಿಕೊಂಡಿದ್ದು,ಆಯಾ ರಾಜ್ಯ ಭಾಷೆ ಗೌರವಿಸುವುದು ಕೇಂದ್ರ ಸರ್ಕಾರದ ಕರ್ತವ್ಯ. ಗೃಹ ಸಚಿವರೆ ತ್ರಿಭಾಷಾ ಸೂತ್ರವನ್ನು ಧಿಕ್ಕರಿಸಿರುವುದು ಕನ್ನಡಕ್ಕೆ, ಕನ್ನಡಿಗರಿಗೆ ಮಾಡಿದ ಅಗೌರವ. ಈ ಸಂದರ್ಭದಲ್ಲಿ ರಾಜ್ಯದ ಮುಖ್ಯಮಂತ್ರಿಗಳು, ಉಪಮುಖ್ಯಮಂತ್ರಿಗಳು ನಾಡು-ನುಡಿಯ ಘನತೆಯನ್ನು ಮರೆತದ್ದು ಅತ್ಯಂತ ಖಂಡನೀಯ' ಎಂದಿದ್ದಾರೆ.


'ಹಿಂದಿ-ಆಂಗ್ಲ ಭಾಷೆಯ ನಿಷ್ಠ ಧೋರಣೆಯಲ್ಲಿ ಕನ್ನಡ ಭಾಷೆಯನ್ನು ಅವಗಣನೆ ಮಾಡಿರುವ ಅಮಿತ್ ಷಾ ಅವರ ಧೋರಣೆ ಕನ್ನಡ ವಿರೋಧಿತನವನ್ನು ತೋರಿಸುತ್ತದೆ. ಇದು ಕನ್ನಡಿಗರ ಸ್ವಾಭಿಮಾನಕ್ಕೆ ಮಾಡಿದ ಅವಮಾನ' ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.


ಇದನ್ನೂ ಓದಿ - JDS: ‘ಪಂಚ​ರತ್ನ’ ಅಸ್ತ್ರದೊಂದಿಗೆ ಪಕ್ಷ ಸಂಘಟನೆಗೆ ಮುಂದಾದ HDK..!


'ಕೇಂದ್ರ ಸರ್ಕಾರದ ಅಧೀನದಲ್ಲಿರುವ RAF ಘಟಕ ಸ್ಥಾಪನೆಗೆ ಕನ್ನಡದ ನೆಲವನ್ನೆ ಕೊಟ್ಟಿದ್ದು, ಈ ಪರಿಜ್ಞಾನವಿಲ್ಲದೆ ಕನ್ನಡದಲ್ಲಿ ಅಡಿಗಲ್ಲು ಫಲಕ ಇಲ್ಲದಿರುವುದು ಅಕ್ಷಮ್ಯ. ಅಮಿತ್ ಷಾ ಅವರು ತ್ರಿಭಾಷಾ ಸೂತ್ರ ಉಲ್ಲಂಘಿಸಿರುವುದಕ್ಕೆ ಕನ್ನಡಿಗರಿಗೆ ಸ್ಪಷ್ಟನೆ ನೀಡಬೇಕು' ಎಂದು ಒತ್ತಾಯಿಸಿದ್ದಾರೆ.


https://bit.ly/3hDyh4G
Apple Link - https://apple.co/3loQYe 
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.