K Sudhakar: `ರಾಜ್ಯದಲ್ಲಿ ಯಾವುದೇ ನೈಟ್ ಕರ್ಫ್ಯೂ-ಲಾಕ್‌ಡೌನ್ ಸದ್ಯಕ್ಕೆ ಇಲ್ಲ`
ದಿನದಿಂದ ದಿನಕ್ಕೆ ಕೊರೋನಾ ಸೋಂಕಿತರ ಸಂಖ್ಯೆ ಏರಿಕೆ.
ಬೆಂಗಳೂರು: ರಾಜ್ಯದಲ್ಲಿ ಮತ್ತೆ ಕೊರೋನಾ ಆತಂಕ ಶುರುವಾಗಿದ್ದು, ದಿನದಿಂದ ದಿನಕ್ಕೆ ಕೊರೋನಾ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿದೆ.
ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಲಾಕ್ ಡೌನ್(Lockdown) ಆಗುತ್ತೆ ಎನ್ನುವ ಆತಂಕ ಎಲ್ಲರಲ್ಲೂ ಮನೆ ಮಾಡಿದೆ. ಅಲ್ಲದೇ ಈ ಬಗ್ಗೆ ಹಳ್ಳಿಗಳಲ್ಲಿ ಸುದ್ದಿ ಹರಿದಾಡುತ್ತಿದೆ.
Govt of Karnataka: ಎಲ್ಲಾ ಸರ್ಕಾರಿ ಅಧಿಕಾರಿ, ನೌಕರರಿಗೆ ರಾಜ್ಯ ಸರ್ಕಾರದಿಂದ 'ಖಡಕ್ ಆದೇಶ'..!
ಅಲ್ಲದೇ ಸಾಮಾಜಿಕ ಜಾಲತಾಣಗಳಲ್ಲಿ ಯಾವುದೇ ಸಭೆ ಸಮಾರಂಭಕ್ಕೆ ಅವಕಾಶವಿಲ್ಲ. ಕಾರ್ಯಕ್ರಮಗಳನ್ನು ಕೂಡ ರದ್ದು ಪಡಿಸಲಾಗಿದೆ. ಒಂದು ವಾರ ಸಂಪೂರ್ಣ ಲಾಕ್ ಡೌನ್ ರಾಜ್ಯದಲ್ಲಿ ಜಾರಿಗೆ ತರಲಾಗುತ್ತಿದೆ ಎನ್ನುವ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ(BS Yediyurappa) ಸುದ್ದಿಗೋಷ್ಠಿಯ ವೀಡಿಯೋ ವೈರಲ್ ಆಗುತ್ತಿದೆ.
Sa Ra Mahesh: ರಾಜಕೀಯ ನಿವೃತ್ತಿಗೆ ಮುಂದಾದ ಸಾರಾ ಮಹೇಶ್..!
ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಮತ್ತೆ ಲಾಕ್ ಡೌನ್ ಜಾರಿಯಾಗಲಿದ್ಯಾ ಎನ್ನುವ ಗೊಂದಲಕ್ಕೂ ಅನೇಕರು ಒಳಗಾಗಿದ್ದಾರೆ. ಆದ್ರೆ, ಈ ವೀಡಿಯೋ(Video) ಹಳೇಯದಾಗಿದೆ.
ಯಾವುದೇ ನೈಟ್ ಕರ್ಫ್ಯೂ ಅಥವಾ ಲಾಕ್‌ಡೌನ್ ಸದ್ಯಕ್ಕೆ ಇಲ್ಲ ಎಂದು ಸಿಎಂ ಹಾಗೂ ರಾಜ್ಯ ಆರೋಗ್ಯ ಸಚಿವ ಡಾ.ಕೆ.ಸುಧಾಕರ್(K Sudhakar) ಮಾಹಿತಿ ನೀಡಿದ್ದಾರೆ. ಜನರು ಯಾವುದೇ ಊಹಾಪೋಹಗಳಿಗೆ ಕಿವಿಗೊಡುವುದು ಬೇಡ.. ಯಾವುದೇ ಆತಂಕಪಡಬೇಕಿಲ್ಲ. ಕಡ್ಡಾಯವಾಗಿ ಮಾಸ್ಕ್ ಧರಸಿ ಕೊರೋನಾ ನಿಯಮಗಳನ್ನು ಪಾಲಿಸಿದ್ರೆ ಸಾಕು.
'CD ಪ್ರಕರಣ'ಕ್ಕೆ ಬಿಗ್ ಟ್ವಿಸ್ಟ್: ವಿಡಿಯೋದಲ್ಲಿದ್ದ ಯುವತಿ ಕಿಡ್ನಾಪ್..!
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.