ರಾತ್ರಿ 10 ರಿಂದ ಬೆಳಿಗ್ಗೆ 6ರವರೆಗೆ ಧಾರ್ಮಿಕ ಸ್ಥಳ, ಪಬ್ & ರೆಸ್ಟೋರೆಂಟ್‌ಗಳಲ್ಲಿ ಧ್ವನಿವರ್ಧಕ ಬ್ಯಾನ್: ಹೈಕೋರ್ಟ್
ವಿಶೇಷ ಸಂದರ್ಭಗಳಾದ ಸಾಂಸ್ಕೃತಿ, ಧಾರ್ಮಿಕ ಉತ್ಸವ, ಸಭೆ-ಸಮಾರಂಭ ಮತ್ತು ಹಬ್ಬ-ಹರಿದಿನಗಳಲ್ಲಿ ವರ್ಷದಲ್ಲಿ 15 ದಿನಗಳ ಮಟ್ಟಿಗೆ ಮಾತ್ರ ರಾತ್ರಿ 10ರಿಂದ ಮಧ್ಯರಾತ್ರಿ 12ರವರೆಗೆ ಧ್ವನಿವಧಕ ಬಳಕೆಗೆ ವಿಶೇಷ ಅನುಮತಿ ನೀಡಲಾಗುತ್ತದೆ.
ಬೆಂಗಳೂರು: ರಾತ್ರಿ 10 ರಿಂದ ಬೆಳಗ್ಗೆ 6 ಗಂಟೆಯವರೆಗೆ ಧ್ವನಿವರ್ಧಕಗಳ ಬಳಕೆಗೆ ಈ ಹಿಂದೆ ಹೊರಡಿಸಿದ್ದ ನಿಷೇಧವನ್ನು ಜಾರಿಗೊಳಿಸುವಂತೆ ಕರ್ನಾಟಕ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ. ಪಬ್‌ಗಳು, ರೆಸ್ಟೋರೆಂಟ್‌ಗಳು ಮತ್ತು ಧಾರ್ಮಿಕ ಸ್ಥಳಗಳು ಸೇರಿದಂತೆ ಎಲ್ಲಾ ಧ್ವನಿವರ್ಧಕಗಳ ಮೇಲೆ ನಿಷೇಧ ಹೇರಲಾಗಿದೆ
ರಾಜ್ಯದಲ್ಲಿನ ದೇವಸ್ಥಾನ, ಮಸೀದಿ, ಗುರುದ್ವಾರ, ಚರ್ಚ್ ಹಾಗೂ ಪಬ್-ರೆಸ್ಟೋರೆಂಟ್‌ಗಳಲ್ಲಿ ಧ್ವನಿವರ್ಧಕ ಹಾಗೂ ಶಬ್ದ ಹೊರಸೂಸುವ ಇತರೆ ಉಪಕರಣಗಳ ದುರ್ಬಳಕೆ ತಡೆಯಲು ಅಭಿಯಾನ ಕೈಗೊಳ್ಳಬೇಕು. ಪರವಾನಗಿಯಿಲ್ಲದೆ ಉಪಯೋಗಿಸುತ್ತಿರುವ ಅಥವಾ ನಿಗದಿತ ಡೆಸಿಬಲ್‌ನಲ್ಲಿ ಹೆಚ್ಚಿನ ಶಬ್ದ ಹೊರಸೂಸುತ್ತಿರುವ ಧ್ವನಿವರ್ಧಕಗಳನ್ನು ಪತ್ತೆ ಹಚ್ಚಬೇಕು. ಅದಕ್ಕಾಗಿ ಧಾರ್ಮಿಕ ಸ್ಥಳಗಳ ಸರ್ವೇ ನಡೆಸಬೇಕು ಎಂದು ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ತಿ ಮತ್ತು ನ್ಯಾಯಮೂರ್ತಿ ಅಶೋಕ್ ಎಸ್ ಕಿಣಗಿ ಅವರಿದ್ದ ವಿಭಾಗೀಯ ಪೀಠವು ಸರ್ಕಾರ ಮತ್ತು ಪೊಲೀಸ್ ಇಲಾಖೆಗೆ ಸೂಚಿಸಿದೆ.
ಇದನ್ನೂ ಓದಿ: SBI Recruitment 2022 : SBI ನಲ್ಲಿ 211 ಹುದ್ದೆಗಳಿಗೆ ಅರ್ಜಿ ಆಹ್ವಾನ, ವಿವರಗಳಿಗೆ ಇಲ್ಲಿ ನೋಡಿ!
ಈ ಅರ್ಜಿಯ ಹಿಂದಿನ ವಿಚಾರಣೆಯ ಸಂದರ್ಭದಲ್ಲಿ, ಅಧಿಕಾರಿಗಳು ಕೆಲವು ಸಂಸ್ಥೆಗಳು ಮತ್ತು ಧಾರ್ಮಿಕ ಸ್ಥಳಗಳಿಗೆ ಧ್ವನಿವರ್ಧಕಗಳನ್ನು ಬಳಸಲು ಕಾನೂನುಬಾಹಿರವಾಗಿ ‘ಶಾಶ್ವತ ಪರವಾನಗಿ’ ನೀಡಿದ್ದಾರೆ ಎಂದು ನ್ಯಾಯಾಲಯಕ್ಕೆ ತಿಳಿಸಲಾಯಿತು. ಆದರೆ, ಶಬ್ದ ಮಾಲಿನ್ಯ (Regulation and Control) ನಿಯಮಗಳು ಮತ್ತು ಪೊಲೀಸ್ ಕಾಯ್ದೆಯಡಿ ಅಂತಹ ಯಾವುದೇ ಪರವಾನಗಿಯನ್ನು ನೀಡಲಾಗಿಲ್ಲ ಎಂದು ಸರ್ಕಾರಿ ವಕೀಲರು ನ್ಯಾಯಾಲಯಕ್ಕೆ ತಿಳಿಸಿದರು.
ಹೈಕೋರ್ಟ್ ಈ ಹೇಳಿಕೆಯನ್ನು ದಾಖಲಿಸಿಕೊಂಡಿದ್ದು, ಅಭಿಯಾನ ನಡೆಸಿ ವರದಿ ಸಲ್ಲಿಸುವಂತೆ ಅಧಿಕಾರಿಗಳಿಗೆ ಸೂಚಿಸಿದೆ. ಅರ್ಜಿಯ ವಿಚಾರಣೆಯನ್ನು 3 ವಾರಗಳ ಕಾಲ ಮುಂದೂಡಲಾಗಿದೆ. 2021ರಲ್ಲಿ ಈ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ರಾಕೇಶ್ ಪಿ ಎಂಬುವರು ಸಲ್ಲಿಸಿದ್ದರು. ‘ಸರ್ಕಾರದ ನಿಯಂತ್ರಣದಲ್ಲಿರುವ ದೇವಾಲಯಗಳು, ಗುರುದ್ವಾರಗಳು ಮತ್ತು ಪಬ್‌ಗಳು ಮತ್ತು ರೆಸ್ಟೋರೆಂಟ್‌ಗಳು ಸೇರಿದಂತೆ ವಿವಿಧ ಧಾರ್ಮಿಕ ಸ್ಥಳಗಳಾದ ಮಸೀದಿಗಳು, ದೇವಾಲಯಗಳು ಮತ್ತು ಇತರ ಸ್ಥಳಗಳಲ್ಲಿ ಧ್ವನಿವರ್ಧಕಗಳನ್ನು ಬಳಸಲಾಗುತ್ತಿದೆ’ ಎಂದು ನ್ಯಾಯಾಲಯ ತಿಳಿಸಿದೆ.
ಇದನ್ನೂ ಓದಿ: ಮದುವೆಯಾಗಿ ಒಂದೂವರೆ ತಿಂಗಳಿಗೆ ಯುವತಿ 4 ತಿಂಗಳ ಗರ್ಭಿಣಿ: ನವ ವಿವಾಹಿತನಿಗೆ ಶಾಕ್!
ರಾಜ್ಯದಲ್ಲಿ ಶಬ್ದಮಾಲಿನ್ಯ ನಿಯಂತ್ರಣ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲು ಮತ್ತು ಬೆಂಗಳೂರು ನಗರದಲ್ಲಿ ಮಸೀದಿಗಳು ಅನಧಿಕೃತವಾಗಿ ಧ್ವನಿವರ್ಧಕ ಬಳಸಿ ಶಬ್ಧ ಮಾಲಿನ್ಯವನ್ನುಂಟು ಮಾಡುತ್ತಿರುವುದನ್ನು ಆಕ್ಷೇಪಿಸಿ ಹೈಕೋರ್ಟ್ ಗೆ ಹಲವು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಕೆಯಾಗಿವೆ. ಈ ಹಿನ್ನೆಲೆ ಅರ್ಜಿಗಳ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ ನೇತೃತ್ವದ ವಿಭಾಗೀಯ ಪೀಠ ರಾಜ್ಯ ಸರ್ಕಾರ ಮತ್ತು ಪೊಲೀಸ್ ಇಲಾಖೆಗೆ ಈ ನಿರ್ದೇಶನ ನೀಡಿ ವಿಚಾರಣೆ ಮುಂದೂಡಿದೆ.
ರಾತ್ರಿ 10ರಿಂದ ಬೆಳಗ್ಗೆ 6ರ ವರೆಗೆ ಧ್ವನಿವರ್ಧಕ ಬಳಕೆಗೆ ಸಂಪೂರ್ಣ ನಿಷೇಧವಿದೆ. ವಿಶೇಷ ಸಂದರ್ಭಗಳಾದ ಸಾಂಸ್ಕೃತಿ, ಧಾರ್ಮಿಕ ಉತ್ಸವ, ಸಭೆ-ಸಮಾರಂಭ ಮತ್ತು ಹಬ್ಬ-ಹರಿದಿನಗಳಲ್ಲಿ ವರ್ಷದಲ್ಲಿ 15 ದಿನಗಳ ಮಟ್ಟಿಗೆ ಮಾತ್ರ ರಾತ್ರಿ 10ರಿಂದ ಮಧ್ಯರಾತ್ರಿ 12ರವರೆಗೆ ಧ್ವನಿವಧಕ ಬಳಕೆಗೆ ವಿಶೇಷ ಅನುಮತಿ ನೀಡಲಾಗುತ್ತದೆ ಎಂದು ಇದೇ ವೇಳೆ ಮಾಹಿತಿ ನೀಡಿದರು.
https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.