ಸರ್ವಾಧಿಕಾರಿ ಎಷ್ಟೇ ಶಕ್ತಿಶಾಲಿಯಾಗಿರಲಿ, ಜನಶಕ್ತಿಯ ಎದುರು ಆತ ಮಣಿಯಲೇಬೇಕು- ಸಿದ್ಧರಾಮಯ್ಯ
ಕೃಷಿ ಕಾಯ್ದೆಗಳನ್ನು ಕೇಂದ್ರ ಸರ್ಕಾರವು ಹಿಂಪಡೆಯುವುದಾಗಿ ಘೋಷಿಸಿದ ಬೆನ್ನಲ್ಲೇ ರಾಜ್ಯ ಪ್ರತಿಪಕ್ಷದ ನಾಯಕ ಸಿದ್ಧರಾಮಯ್ಯ ರೈತರ ಹೋರಾಟಕ್ಕೆ ಸಿಕ್ಕ ಗೆಲುವು ಎಂದು ಬಣ್ಣಿಸಿದ್ದಾರೆ, ಇನ್ನೂ ಮುಂದುವರೆದು ಸರ್ವಾಧಿಕಾರಿ ಎಷ್ಟೇ ಶಕ್ತಿಶಾಲಿಯಾಗಿರಲಿ, ಜನಶಕ್ತಿಯ ಎದುರು ಆತ ಮಣಿಯಲೇಬೇಕು ಎಂದು ಹೇಳಿದ್ದಾರೆ.
ಬೆಂಗಳೂರು: ಕೃಷಿ ಕಾಯ್ದೆಗಳನ್ನು ಕೇಂದ್ರ ಸರ್ಕಾರವು ಹಿಂಪಡೆಯುವುದಾಗಿ ಘೋಷಿಸಿದ ಬೆನ್ನಲ್ಲೇ ರಾಜ್ಯ ಪ್ರತಿಪಕ್ಷದ ನಾಯಕ ಸಿದ್ಧರಾಮಯ್ಯ ರೈತರ ಹೋರಾಟಕ್ಕೆ ಸಿಕ್ಕ ಗೆಲುವು ಎಂದು ಬಣ್ಣಿಸಿದ್ದಾರೆ, ಇನ್ನೂ ಮುಂದುವರೆದು ಸರ್ವಾಧಿಕಾರಿ ಎಷ್ಟೇ ಶಕ್ತಿಶಾಲಿಯಾಗಿರಲಿ, ಜನಶಕ್ತಿಯ ಎದುರು ಆತ ಮಣಿಯಲೇಬೇಕು ಎಂದು ಹೇಳಿದ್ದಾರೆ.
ಇದನ್ನೂ ಓದಿ: "ಬಿಜೆಪಿ ನಾಯಕರು ಯಾಕೆ ಹಾವು ಕಂಡ ಹಾಗೆ ಬೆಚ್ಚಿ ಬೀಳುತ್ತಿದ್ದಾರೆ?"
ಕರಾಳ ಕೃಷಿ ಕಾಯ್ದೆಗಳನ್ನು ರದ್ದುಗೊಳಿಸಿದ ಕೇಂದ್ರ ಸರ್ಕಾರದ ನಿರ್ಧಾರ ದೇಶದ ಮಣ್ಣಿನ ಮಕ್ಕಳ ಅಭೂತಪೂರ್ವ ಹೋರಾಟಕ್ಕೆ ಸಿಕ್ಕ ಗೆಲುವಾಗಿದೆ.ರೈತ ಹೋರಾಟಗಾರರಿಗೆ ಅಭಿನಂದನೆಗಳು.ಕೃಷಿಕಾಯ್ದೆಯನ್ನು ರದ್ದುಗೊಳಿಸಿದರಷ್ಟೇ ಸಾಲದು ಈ ಕರಾಳ ಕಾಯ್ದೆ ರದ್ದತಿಗಾಗಿ ನಡೆದ ಹೋರಾಟದಲ್ಲಿ ಹುತಾತ್ಮರಾದ ರೈತ ಕುಟುಂಬಗಳಿಗೆ ಕೇಂದ್ರ ಸರ್ಕಾರ ತಲಾ 25 ಲಕ್ಷ ರೂಪಾಯಿ ಪರಿಹಾರ ಕೊಡಬೇಕೆಂದು ಒತ್ತಾಯಿಸುತ್ತೇನೆ" ಎಂದು ಸಿದ್ಧರಾಮಯ್ಯ (Siddaramaiah) ಆಗ್ರಹಿಸಿದ್ದಾರೆ.
"ಸರ್ವಾಧಿಕಾರಿ ಎಷ್ಟೇ ಶಕ್ತಿಶಾಲಿಯಾಗಿರಲಿ, ಎದೆಯಗಲ ಎಷ್ಟೇ ಇಂಚಿನದ್ದಾಗಿರಲಿ, ಜನಶಕ್ತಿಯ ಎದುರು ಆತ ಮಣಿಯಲೇ ಬೇಕು.ಇದುವೇ ಪ್ರಜಾಪ್ರಭುತ್ವದ ಸೊಗಸು.ಇದುವೇ ರೈತರ ಸ್ವಾತಂತ್ರ್ಯೋತ್ಸವ.ಕೃಷಿ ಕಾಯ್ದೆಯಷ್ಟೇ ಅಲ್ಲ, ಕೇಂದ್ರ ಬಿಜೆಪಿ ಸರ್ಕಾರದ ಪ್ರತಿಯೊಂದು ನೀತಿ ಮತ್ತು ಕಾರ್ಯಕ್ರಮಗಳು ರೈತ ವಿರೋಧಿಯಾದುದು. ಇದು ವಿರಮಿಸುವ ಕಾಲ ಅಲ್ಲ, ರೈತ ವಿರೋಧಿ ಬಿಜೆಪಿ ವಿರುದ್ಧದ ಹೋರಾಟ ಮುಂದುವರಿಯಲಿದೆ" ಎಂದು ಅವರು ತಿಳಿಸಿದರು.
ಇದನ್ನೂ ಓದಿ: ಕಾಂಗ್ರೆಸ್ ಬಣ ರಾಜಕಾರಣದ ಮತ್ತೊಂದು ಮುಖ ಅನಾವರಣವಾಗಿದೆ: ಬಿಜೆಪಿ
ರೈತರ ಹೋರಾಟಕ್ಕೆ ಸಿಕ್ಕ ಗೆಲುವಿನ ಸ್ಪೂರ್ತಿ ಕೇಂದ್ರ ಸರ್ಕಾರದ ಜನವಿರೋಧಿ ನೀತಿ ವಿರುದ್ಧ ದ ಜನ ಹೋರಾಟಕ್ಕೆ ನಾಂದಿಯಾಗಲಿದೆ.ಪೆಟ್ರೋಲ್-ಡೀಸೆಲ್ ಸೇರಿದಂತೆ ಅಗತ್ಯವಸ್ತುಗಳ ಬೆಲೆ ಏರಿಕೆ ವಿರುದ್ಧದ ಹೋರಾಟಕ್ಕೆ ದೇಶದ ಜನ ಅಣಿಯಾಗಿದ್ದಾರೆ" ಎಂದು ಅವರು ಹೇಳಿದರು.
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.