ಬೆಂಗಳೂರು: ಯಾರೂ ಏನೇ ಹೇಳಿದರೂ ಸಾಮಾಜಿಕ ನ್ಯಾಯದಲ್ಲಿ ರಾಜಿ ಇಲ್ಲದೆ ಕೆಲಸ ಮಾಡುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.ಅವರು ಇಂದು ಅಖಿಲ ಕರ್ನಾಟಕ ಗಾಣಿಗರ ಸಂಘ ಆಯೋಜಿಸಿದ್ದ ಸುವರ್ಣ ಮಹೋತ್ಸವ ಸಮಾರಂಭ ಮತ್ತು ಗಾಣಿಗ ಜನಾಂಗದ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದರು.


COMMERCIAL BREAK
SCROLL TO CONTINUE READING

ಸಮಾಜದಲ್ಲಿ ಅವಕಾಶ ವಂಚಿತ ಜನರಿಗೆ, ಶತಶತಮಾನಗಳಿಂದ ಅಕ್ಷರ ಸಂಸ್ಕೃತಿಯಿಂದ ವಂಚಿತರಾಗಿರುವವರು, ಸಾಮಾಜಿಕ ನ್ಯಾಯದಿಂದ ಇಂದಿಗೂ ವಂಚಿತರಾದ ಜನರ ಪರವಾಗಿ ನಾವು ಇರುತ್ತೇವೆ. 


ಗಾಣಿಗ ಸಮಾಜದವರು ಎಣ್ಣೆ ಉತ್ಪಾದನೆಯ ವೃತ್ತಿ ಮಾಡುತ್ತಿದ್ದವರು. ಇತ್ತೀಚಿನ ವರ್ಷಗಳಲ್ಲಿ ಕೈಗಾರೀಕರಣವಾದ ನಂತರ, ಎಣ್ಣೆ ತಯಾರಿಸುವ ವೃತ್ತಿಯನ್ನು ಬಿಡಬೇಕಾದ ಪರಿಸ್ಥಿತಿ ಬಂದಿದೆ. ಅನೇಕರು ಇದರಿಂದ ನಿರುದ್ಯೋಗಿಗಳಾಗಿದ್ದಾರೆ. ಈ ಸಮಾಜದಲ್ಲಿ ಜಮೀನು ಹೊಂದಿದವರು ಬಹಳ ಕಡಿಮೆ, ಸಣ್ಣ ರೈತರು ಬಹಳ ಕಡಿಮೆ ಇದ್ದಾರೆ.


ಇದನ್ನೂ ಓದಿ: Ration Card: ಹೊಸ ‘BPL, APL ಕಾರ್ಡ್’ಗೆ ಅರ್ಜಿ ಸಲ್ಲಿಕೆಗೆ ನಾಳೆ ಒಂದೇ ದಿನ ಅವಕಾಶ!


ಗಾಣಿಗರ ನಿಗಮ ಸ್ಥಾಪನೆ, ವಿಶ್ವಕರ್ಮ ಯೋಜನೆಯಡಿ ಗಾಣಿಗರನ್ನು ಬಿಟ್ಟಿದ್ದರ ಬಗ್ಗೆ ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯಲು ಸಮುದಾಯದ ಮುಖಂಡರು ಈಗ ನನ್ನಲ್ಲಿ ಮನವಿ ಮಾಡಿದ್ದಾರೆ. ನಿಮ್ಮ ಸಮಾಜಕ್ಕೆ ಸೇರಿದ ಪ್ರಧಾನಿಗಳಿಗೆ ನಿಮ್ಮ ಸಮಸ್ಯೆ ಗೊತ್ತಿದೆಯೋ? ಇಲ್ಲವೋ? ನನಗೆ ತಿಳಿದಿಲ್ಲ ಆದರೆ ನಾನು ಕೂಡಲೇ ಪತ್ರ ಬರೆಯುತ್ತೇನೆ ಎಂದು ಹೇಳಿದರು.


ಸಾಮಾಜಿಕ ಆರ್ಥಿಕ, ಶೈಕ್ಷಣಿಕ ಜಾತಿ ಗಣತಿ ವರದಿಯನ್ನು ವೈಜ್ಞಾನಿಕವಾಗಿ ಸಿದ್ಧ ಮಾಡಿದ್ದು, ವರದಿಯನ್ನು ಇನ್ನೂ ನಾವು ಸ್ವೀಕಾರ ಮಾಡಿಲ್ಲ. ವರದಿಯನ್ನು ಸ್ವೀಕರಿಸಲೆಂದೇ ಆಯೋಗದ ಅವಧಿಯನ್ನು 2 ತಿಂಗಳು ಮುಂದುವರೆಸಲಾಗಿದೆ. ವರದಿ ಬಂದ ಮೇಲೆ ತೀರ್ಮಾನ ಕೈಗೊಳ್ಳಲಾಗುವುದು ಎಂದರು.


ರಾಜಶೇಖರ್ ಅವರಿಗೆ ಸಹಕಾರ ರತ್ನ ಎಂಬ ಬಿರುದು, ಲಕ್ಷ್ಮೀ ಪತಿ ಎನ್ನುವವರಿಗೆ ರಾಜ್ಯೋತ್ಸವ ಪ್ರಶಸ್ತಿ ನೀಡಲಾಗಿದೆ. ರಾಧಾಕೃಷ್ಣ ಏಂಬುವವರಿಗೆ ರಾಜ್ಯ ರೈತ ಪ್ರಶಸ್ತಿ ನೀಡಿದೆ. ಸಮಾಜಿಕ ಕೆಲಸ ಮಾಡಿದವರನ್ನು ಗುರುತಿಸುವ ಕೆಲಸ ನಮ್ಮ ಸರ್ಕಾರ ಮಾಡಿದೆ. ಹೀಗೆಯೇ ಅದನ್ನು ನಾವು ಮುಂದುವರೆಸುತ್ತೇವೆ ಎಂದು ಭರವಸೆ ನೀಡಿದರು.


ಇದನ್ನೂ ಓದಿ: ಡಯಾಲಿಸಿಸ್ ಸಮಸ್ಯೆ ನಮ್ಮ ಸರ್ಕಾರದಿಂದ ಆಗಿದ್ದಲ್ಲ - ಆರೋಗ್ಯ ಸಚಿವ ದಿನೇಶ್ ಗುಂಡೂರಾವ್


ವಿ.ಆರ್.ಸುದರ್ಶನ್ ಮತ್ತು ನಾನು ರಾಜಕೀಯ, ಹೋರಾಟ, ಸಾಮಾಜಿಕವಾಗಿ ಒಟ್ಟಿಗೆ ಇದ್ದವರು. ಅವರ ಹಾಗೂ ನಮ್ಮ ಮನಸ್ಥಿತಿ ಒಂದೇ ಇದೆ. ರೂಢಾನಂದಪುರಿ ಅವರು ಸ್ವಾಮೀಜಿಗಳಾದ ಮೇಲೆ ಇದೇ ಮೊದಲ ಬಾರಿಗೆ ವೇದಿಕೆ ಹಂಚಿಕೊಳ್ಳುತ್ತಿದ್ದೇನೆ. ನಾವು ಒಟ್ಟಿಗೆ ಹಿಂದುಳಿದ ಜಾತಿಗಳ ಸಮಸ್ಯೆ ಕುರಿತು ಚರ್ಚೆ ಮಾಡಿ, ಇತ್ಯರ್ಥ ಮಾಡಲು ಪ್ರಯತ್ನಿಸಿದವರು. ಅವರಲ್ಲಿ ಈ ಸಮಾಜವನ್ನು ಮುನ್ನಡೆಸುವ ಶಕ್ತಿ ಹೆಚ್ಚಾಗಲಿ ಎಂದು ಹಾರೈಸುತ್ತೇನೆ ಎಂದು ಹೇಳಿದರು.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://youtu.be/--phA9ji8NM
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.