ಬೆಂಗಳೂರು: ಕೊರೊನಾದ ಬಗ್ಗೆ ಗಾಬರಿಯಾಗಬೇಕಾಗಿಲ್ಲ.ಆದರೆ ಮುಂಜಾಗ್ರತೆ ವಹಿಸುವುದು ಅಗತ್ಯವಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಇಲ್ಲಿ ತಿಳಿಸಿದರು.
ಇದನ್ನೂ ಓದಿ: ಕ್ರಿಸ್ಮಸ್ ಸಂಭ್ರಮದಲ್ಲಿ ಚರ್ಚ್‌ಗೆ ತೆರಳುತ್ತಿದ್ದ ಯುವಕ ಮಸಣಕ್ಕೆ..!
ಅವರು ಇಂದು ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡುತ್ತ ಕೊರೊನಾ ಬಗ್ಗೆ ಆರೋಗ್ಯ ಸಚಿವರು ಮತ್ತು ವಿಪತ್ತು ನಿರ್ವಹಣಾ ಸಚಿವರ ಚರ್ಚಿಸಲಿದ್ದಾರೆ. ಕೇಂದ್ರದಿಂದ ಕೆಲವು ಮಾರ್ಗಸೂಚಿಗಳು ಬಂದಿದ್ದು, ರಾಜ್ಯ ಸರ್ಕಾರದಿಂದಲೂ ಕೆಲವು ನಿರ್ಣಯಗಳನ್ನು ತೆಗೆದುಕೊಳ್ಳಲಾಗುವುದು. ಈ ಕುರಿತು ನಾಳೆ ಮಾರ್ಗಸೂಚಿ ಹೊರಡಿಸಲಾಗುವುದು ಎಂದು ತಿಳಿಸಿದರು.
ಇದನ್ನೂ ಓದಿ: 19ನೇ ಮಹಡಿಯಿಂದ ಜಿಗಿದು ಮಹಿಳೆ ಸೂಸೈಡ್: ದೇಹ ಛಿದ್ರ ಛಿದ್ರ..!
ಈ ಹಿಂದೆ ಅಂತರರಾಷ್ಟ್ರೀಯ ಮಟ್ಟದಲ್ಲಿ ಆದ ಬೆಳವಣಿಗೆಗಳ ಪರಿಣಾಮ ದೇಶ ಹಾಗೂ ರಾಜ್ಯದ ಮೇಲೂ ಆಗಿವೆ. ಈ ಹಿನ್ನೆಲೆಯಲ್ಲಿ ನಾಳೆಯ ಸಭೆಯಲ್ಲಿ ತಜ್ಞರೊಂದಿಗೆ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿಗಳು ತಿಳಿಸಿದರು.
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.