ಬೆಂಗಳೂರು: ರಾಜ್ಯದಲ್ಲಿ ಪ್ರವಾಹದಿಂದಾಗಿ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದ್ದರೂ, ನೆರೆ ಪರಿಹಾರ ತರುವಲ್ಲಿ ಸಿಎಂ ವಿಫಲವಾಗಿದ್ದಾರೆ, ಕೇಂದ್ರಕ್ಕೆ ಸರ್ವಪಕ್ಷ ನಿಯೋಗ ಕರೆದೊಯ್ಯುತ್ತಿಲ್ಲ ಎಂಬ ಮಾತುಗಳು ಕೇಳಿಬಂದ ಬೆನ್ನಲ್ಲೇ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಪ್ರತಿಕ್ರಿಯಿಸಿದ್ದಾರೆ.


COMMERCIAL BREAK
SCROLL TO CONTINUE READING

ಇಂದಿಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರ ಪ್ರವಾಹ ಪರಿಹಾರ ಕಾರ್ಯಗಳನ್ನು ಸಮರ್ಪಕವಾಗಿ ನಿರ್ವಹಿಸುತ್ತಿದೆ. ಈಗಾಗಲೇ ಪ್ರವಾಹದಲ್ಲಿ ಮನೆ ಕಳೆದುಕೊಂಡವರಿಗೆ ಮನೆ ನಿರ್ಮಿಸಿಕೊಡುವ ಕಾರ್ಯ ಆರಂಭವಾಗಿದೆ. ಹೀಗಿರುವಾಗ ಕಾಂಗ್ರೆಸ್ ನಾಯಕರು ಇಲ್ಲಸಲ್ಲದ ಹೇಳಿಕೆಗಳನ್ನು ನೀಡಿ ಜನರಲ್ಲಿ ಗೊಂದಲ ಸೃಷ್ಟಿಸುತ್ತಿದ್ದಾರೆ ಎಂದು ಯಡಿಯೂರಪ್ಪ ಆರೋಪಿಸಿದರು.


ದೇಶಾದ್ಯಂತ ಹಲವು ರಾಜ್ಯಗಳಲ್ಲಿ ಪ್ರವಾಹ ಪರಿಸ್ಥಿತಿಯಿದೆ. ಹೀಗಾಗಿ ಕೇಂದ್ರ ಸರ್ಕಾರ ಎಲ್ಲಾ ರಾಜ್ಯಗಳಿಗೂ ಒಟ್ಟಿಗೇ ಅನುದಾನ ಬಿಡುಗಡೆ ಮಾಡಲಿದೆ. ಈಗಾಗಲೇ ರಾಜ್ಯ ಸರ್ಕಾರ ತುರ್ತು ಪರಿಹಾರಕ್ಕೆ ಅಗತ್ಯ ಹಣಕಾಸಿನ ನೆರವು ಒದಗಿಸಿದೆ. ಆದರಿಂದ ಪ್ರಧಾನಿ ಮೋದಿ ಬಳಿ ಸರ್ವ ಪಕ್ಷ ನಿಯೋಗ ಕರೆದೊಯ್ಯುವ ಅಗತ್ಯ ಇಲ್ಲ ಎಂದು ಸಿಎಂ ಯಡಿಯೂರಪ್ಪ ಹೇಳಿದ್ದಾರೆ.