ಬೆಂಗಳೂರು: ಮಂಕಿಪಾಕ್ಸ್ ಬಗ್ಗೆ ರಾಜ್ಯದ ಜನರು ಆತಂಕ ಪಡಬೇಕಿಲ್ಲ. ಕೇರಳ-ಕರ್ನಾಟಕ ಗಡಿ ಭಾಗದ ಜಿಲ್ಲೆಗಳಲ್ಲಿ ಕಟ್ಟುನಿಟ್ಟಿನ ನಿಗಾ ಇಡಲು ಸೂಚಿಸಲಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.


COMMERCIAL BREAK
SCROLL TO CONTINUE READING

ಬೆಂಗಳೂರಿನಲ್ಲಿ ಸಿಎಂ ಬಸವರಾಜ್ ಬೊಮ್ಮಾಯಿ ಮತ್ತು ತಾಂತ್ರಿಕ ಸಲಹಾ ಸಮಿತಿ ಜೊತೆ ವಿಶೇಷ ಸಭೆಯ ಬಳಿಕ ಮಾತನಾಡಿದ ಅವರು, ‘ವಿಶ್ವ ಆರೋಗ್ಯ ಸಂಸ್ಥೆ ಜುಲೈ 22ರಂದು ಮಂಕಿಪಾಕ್ಸ್ಅನ್ನು ‘ತುರ್ತು ಆರೋಗ್ಯ ಪರಿಸ್ಥಿತಿʼ ಎಂದು ಘೋಷಿಸಿದೆ. ಸುಮಾರು 80 ದೇಶಗಳ 20 ಸಾವಿರ ಜನರಿಗೆ ಈ ಸೋಂಕು ಹರಡಿದೆ. ಭಾರತದಲ್ಲಿ 6 ಪ್ರಕರಣಗಳು ಕಂಡುಬಂದಿವೆ. ಕೇರಳದಲ್ಲಿ 4 ಮತ್ತು ದೆಹಲಿಯಲ್ಲಿ ಇಬ್ಬರು ಸೋಂಕಿತರಿದ್ದಾರೆ. ಕರ್ನಾಟಕದಲ್ಲಿ 3 ವ್ಯಕ್ತಿಗಳ ಮೇಲೆ ಸಂಶಯದ ಆಧಾರದಲ್ಲಿ ಪರೀಕ್ಷೆ ನಡೆಸಿದ್ದೇವೆ. ಈ ಪೈಕಿ ಬೆಂಗಳೂರಿನ ಇಬ್ಬರ ವರದಿ ನೆಗಟಿವ್ ಬಂದಿದೆ. ಬೆಲ್ಜಿಯಂನಿಂದ ಬಂದಿರುವ ಉತ್ತರ ಕನ್ನಡದ ವ್ಯಕ್ತಿಯ ಪರೀಕ್ಷೆ ಫಲಿತಾಂಶ ಇನ್ನಷ್ಟೇ ಬರಬೇಕಿದೆ’ ಎಂದು ಹೇಳಿದರು.


ಮಂಕಿಪಾಕ್ಸ್ ಬಗ್ಗೆ ರಾಜ್ಯದ ಜನರು ಆತಂಕಪಡಬೇಕಾದ ಅಗತ್ಯವಿಲ್ಲ. ಸೋಂಕಿತರಿಗಾಗಿ ಬೆಂಗಳೂರಿನ ಸಾಂಕ್ರಾಮಿಕ ರೋಗಗಳ (ಇ.ಡಿ) ಆಸ್ಪತ್ರೆ ಹಾಗೂ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲು ವಿಶೇಷ ವ್ಯವಸ್ಥೆ ಮಾಡಲಾಗಿದೆ. ಯಾವುದೇ ವ್ಯಕ್ತಿಗೆ ಸೋಂಕು ದೃಢಪಟ್ಟರೆ ಅವರನ್ನು 21 ದಿನಗಳ ಕಾಲ ಐಸೋಲೇಟ್ ಮಾಡಬೇಕು. 21 ದಿನ ಆಸ್ಪತ್ರೆಯಲ್ಲೇ ಇರಿಸಿ ಚಿಕಿತ್ಸೆ ನೀಡಲಾಗುತ್ತದೆ. ಚರ್ಮದ ಮೇಲೆ ಆಗಿರುವ ಗಾಯ ಗುಣಮುಖ ಆಗುವವರೆಗೆ ಅವರನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗುವುದಿಲ್ಲ ಎಂದು ತಿಳಿಸಿದರು.


ಇದನ್ನೂ ಓದಿ: ಕಾಡುಗಳ್ಳರಿಗೆ ಸಿಂಹಸ್ವಪ್ನವಾಗಿದ್ದ ಬಂಡೀಪುರದ ‘ರಾಣಾ’ ಇನ್ನಿಲ್ಲ


ಜಿಲ್ಲಾಧಿಕಾರಿಗಳಿಗೆ ವಿಶೇಷ ಸೂಚನೆ ನೀಡಲಾಗಿದೆ. ಎಲ್ಲಾ ಭಾಗಗಳಲ್ಲೂ ಕಟ್ಟೆಚ್ಚರದಿಂದ ಇರಲು ಸೂಚಿಸಲಾಗಿದೆ. ಸದ್ಯ ರಾಜ್ಯದ ಜನರು ಆತಂಕಪಡುವ ಆಗತ್ಯವಿಲ್ಲ. ಮುನ್ನಚ್ಚೆರಿಕೆ ಮತ್ತು ಶುಚಿತ್ವ ಕಾಪಾಡಿಕೊಂಡರೆ ಸಾಕು ಎಂದು ಸಚಿವ ಸುಧಾಕರ್ ತಿಳಿಸಿದ್ದಾರೆ.


ಇದನ್ನೂ ಓದಿ: ಆ್ಯಪ್ ಮೂಲಕ ಗ್ರಾಹಕರ ಮನೆ ಬಾಗಿಲಿಗೆ ಡ್ರಗ್ಸ್ ಸಪ್ಲೈ : ಐವರು ಅಂದರ್, 2 ಕೋಟಿ ರೂ, ಮೌಲ್ಯದ ಡ್ರಗ್ಸ್ ವಶಕ್ಕೆ


https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.