ಸಮ್ಮಿಶ್ರ ಸರ್ಕಾರದಲ್ಲಿ ಯಾರೂ ಭಿಕ್ಷುಕರಲ್ಲ: ಸಿದ್ದರಾಮಯ್ಯ

ಸಮ್ಮಿಶ್ರ ಸರ್ಕಾರದಲ್ಲಿ ಯಾರೂ ಸಹ ಭಿಕ್ಷುಕರಲ್ಲ. ಒಂದು ವೇಳೆ ಏನೇ ಭಿನ್ನಾಭಿಪ್ರಾಯ ಇದ್ದರೂ ಕುಳಿತು ಚರ್ಚಿಸಿ ಬಗೆಹರಿಸಿಕೊಳ್ಳೋಣ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

Last Updated : Feb 21, 2019, 02:16 PM IST
ಸಮ್ಮಿಶ್ರ ಸರ್ಕಾರದಲ್ಲಿ ಯಾರೂ ಭಿಕ್ಷುಕರಲ್ಲ: ಸಿದ್ದರಾಮಯ್ಯ title=

ಬೆಂಗಳೂರು: ಲೋಕಸಭಾ ಚುನಾವಣೆಗೆ ಸೀಟು ಹಂಚಿಕೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರ ಹೇಳಿಕೆ ಸಮ್ಮಿಶ್ರ ಸರ್ಕಾರ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಕಡೆಗೂ ಮೌನ ಮುರಿದಿದ್ದಾರೆ. 

ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಸಿದ್ದರಾಮಯ್ಯ ಸಮ್ಮಿಶ್ರ ಸರ್ಕಾರದಲ್ಲಿ ಯಾರೂ ಸಹ ಭಿಕ್ಷುಕರಲ್ಲ. ಒಂದು ವೇಳೆ ಏನೇ ಭಿನ್ನಾಭಿಪ್ರಾಯ ಇದ್ದರೂ ಕುಳಿತು ಚರ್ಚಿಸಿ ಬಗೆಹರಿಸಿಕೊಳ್ಳೋಣ. ಅಭ್ಯರ್ಥಿಯ ಗೆಲುವಿನ ಆಧಾರದ ಮೇಲೆ ಸೀಟು ಹಂಚಿಕೆ ನಿರ್ಧರಿಸಲಾಗುವುದು ಎಂದು ಹೇಳಿದ್ದಾರೆ. 

"ಸೀಟು ಹಂಚಿಕೆ ಬಗ್ಗೆ ಜೆಡಿಎಸ್ ನಾಯಕರು ಅತೃಪ್ತಿಗೊಂಡಿದ್ದಾರೆ ಎಂಬ ಪ್ರಶ್ನೆಯೇ ಇಲ್ಲ. ನಾವು ಈ ಬಗ್ಗೆ ಯಾವುದೇ ತೀರ್ಮಾನ ಕೈಗೊಂಡಿಲ್ಲ. ಇನ್ನೂ ಪ್ರಾಥಮಿಕ ಹಂತದ ಚರ್ಚೆ ನಡೆದಿದೆ. ಹೆಚ್.ಡಿ.ದೇವೇಗೌಡರ ಜೊತೆ ಇನ್ನು ಚರ್ಚೆ ಮಾಡಬೇಕಿದೆ" ಎಂದು ಸಿದ್ದರಾಮಯ್ಯ ಹೇಳಿದ್ದಾರೆ. 

ಇತ್ತೀಚೆಗಷ್ಟೇ ಲೋಕಸಭಾ ಚುನಾವಣೆಗೆ ಸೀಟು ಹಂಚಿಕೆಗೆ ಸಂಬಂಧಿಸಿದಂತೆ, ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ತೀವ್ರ ಅಸಮಾಧಾನ ಹೊರಹಾಕಿದ್ದರು. ಮೂರು, ಐದು ಹೀಗೆ ಸೀಟುಗಳನ್ನು ತೆಗೆದುಕೊಳ್ಳಲು ನಾವೇನು ಭಿಕ್ಷುಕರಲ್ಲ ಎಂದು ಕಾಂಗ್ರೆಸ್ ವಿರುದ್ದ ಗರಂ ಆಗಿದ್ದರು. ಈ ಹೇಳಿಕೆಗೆ ಇಂದು ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ.
 

Trending News