ಬೆಂಗಳೂರು: ಹೊಸ ಸ್ವರೂಪದ ಕರೋನಾ (Corovavirus) ದೇಶಾದ್ಯಂತ ಆತಂಕ ಉಂಟು ಮಾಡಿದೆ. ಈ ಹೊಸ ಸ್ವರೂಪದ ಕರೋನಾ ಭಯದ ಹೊಸ ವರ್ಷಾಚರಣೆಯ ಮೇಲೂ ಬಿದ್ದಿದೆ. ಹೊಸ ವರ್ಷಾಚರಣೆಗೆ ಸಂಬಂಧಪಟ್ಟಂತೆ  ಕಟ್ಟುನಿಟ್ಟಿನ ಕ್ರಮಗಳನ್ನು ಜಾರಿಗೊಳಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ.  ಕರೋನಾ ಹಿನ್ನೆಲೆಯಲ್ಲಿ ರಾತ್ರಿ ಕರ್ಫ್ಯೂ (Night Curfew) ಜಾರಿಗೊಳಿಸಲು ಈ ಮೊದಲು ಸರ್ಕಾರ ನಿರ್ಧರಿಸಿತ್ತು. ಆದರೆ ರಾತ್ರಿ ಕರ್ಫ್ಯೂಗೆ ಎಲ್ಲೆಡೆ ಭಾರೀ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಹಿಂಪಡೆಯಲಾಗಿತ್ತು. ಈ ಹಿನ್ನೆಲೆಯಲ್ಲಿ ಇದೀಗ ಹೊಸ ವರ್ಷಾಚರಣೆಗೆ ಸಂಬಂಧಪಟ್ಟಂತೆ ಕಠಿಣ ಕ್ರಮ ರೂಪಿಸುವುದು ಅನಿವಾರ್ಯವಾಗಿದೆ.


COMMERCIAL BREAK
SCROLL TO CONTINUE READING

 ಹೊಸ ವರ್ಷಾಚರಣೆ (New Year Celebration) ಹಿನ್ನೆಲೆಯಲ್ಲಿ ಸಾರ್ವಜನಿಕ ಪಾರ್ಟಿಗಳಿಗೆ ಅವಕಾಶ ಇಲ್ಲ . ವರ್ಷಾಚರಣೆಗೆ ಸಂಬಂಧಪಟ್ಟಂತೆ ನಾಳೆ ಹೊಸ ಮಾರ್ಗಸೂಚಿಯನ್ನು ಬಿಡುಗಡೆಗೊಳಿಸಲಾಗುವುದು ಎಂದು ಗೃಹ ಸಚಿವ ಬಸವರಾಜು ಬೊಮ್ಮಾಯಿ (Basavaraj Bommai) ತಿಳಿಸಿದ್ದಾರೆ.  ಕೋವಿಡ್ ರೂಪಾಂತರ ಹಿನ್ನೆಲೆಯಲ್ಲಿ ಎಲ್ಲವನ್ನೂ ಗಮನದಲ್ಲಿಟ್ಟುಕೊಂಡು ಕ್ರಮ ಕೈಗೊಳ್ಳಬೇಕಾಗಿದೆ. ಪಾರ್ಟಿಗಳಲ್ಲಿ ಭಾರೀ ಸಂಖ್ಯೆಯಲ್ಲಿ ಜನ  ಸೇರುವ ಸಾಧ್ಯತೆಯಿದೆ. ಪಾರ್ಟಿಗಳಲ್ಲಿ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳುವುದು ಸಾಧ್ಯವಿಲ್ಲ. ಹಾಗಾಗಿ ಹೊಸ ಸ್ವರೂಪದ ಕರೋನಾ ಭೀತಿ ಹಿನ್ನೆಲೆಯಲ್ಲಿ ಕರೋನಾ ತಡೆಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕಾಗಿದೆ. ಹೀಗಾಗಿ ಹೊಸ ವರ್ಷಾಚರಣೆ ಸಂಬಂಧ ಪಾರ್ಟಿಗಳಿಗೆ (New Year Party) ಅವಕಾಶ ನೀಡುವುದಿಲ್ಲ ಎಂದು ಬೊಮ್ಮಾಯಿ ಹೇಳಿದ್ದಾರೆ. 


ALSO READ: New Year ಸಂಭ್ರಮಾಚರಣೆಗೆ ತಡೆ: ನೈಟ್ ಕರ್ಪ್ಯೂ ಹೋಗ್ತಿದ್ದಂತೆ ಬರ್ತಿದೆ ಟಾಪ್ ರೂಲ್ಸ್!


ಇನ್ನು ಹೊಸ ಸ್ವರೂಪದ ಕರೋನಾ (COVID 19) ಹಿನ್ನೆಲೆಯಲ್ಲಿ ಮೂರು ದಿನಗಳ ಕಾಲ ನಂದಿಬೆಟ್ಟಕ್ಕೆ ಪ್ರವಾಸಿಗರ ಪ್ರವೇಶವನ್ನು ನಿರಾಕರಿಸಲಾಗಿದೆ. ಡಿ. 30ರಿಂದ ಜ.1ರವೆಗೆ ನಂದಿಬೆಟ್ಟಕ್ಕೆ ಪ್ರವೇಶಕ್ಕೆ ಪ್ರವಾಸಿಗರಿಗೆ ನಿರ್ಬಂಧ ಹೇರಲಾಗಿದೆ. ಸಾಮಾನ್ಯವಾಗಿ ಹೊಸ ವರ್ಷದ ಸಮಯದಲ್ಲಿ ನಂದಿಬೆಟ್ಟಕ್ಕೆ ಜನಸಾಗರವೇ ಹರಿದು ಬರುತ್ತದೆ. ಅಲ್ಲದೆ, ಇಲ್ಲಿನ ರೆಸಾರ್ಟ್ ಗಳಲ್ಲೂ ಹೊಸ ವರ್ಷಾಚರಣೆ ಹಿನ್ನೆಲೆಯಲ್ಲಿ ಪಾರ್ಟಿಗಳನ್ನು ಆಯೋಜಿಸಲಾಗುತ್ತಿತ್ತು. ಆದರೆ ಈ ಬಾರಿ ಬೆಟ್ಟದ ತಪ್ಪಲಿನ ರೆಸಾರ್ಟ್ ಗಳಿಗೂ ಪಾರ್ಟಿ ಆಯೋಜಿಸದಂತೆ ನಿಷೇಧ ಹೇರಲಾಗಿದೆ.


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಆಪ್ ಡೌನ್ ಲೋಡ್ ಮಾಡಿ
Android Link - https://bit.ly/3hDyh4G


iOS Link - https://apple.co/3loQYe
 
ನಮ್ಮ ಸೋಶಿಯಲ್ ಮೀಡಿಯಾ ಪುಟಕ್ಕೆ ಸಬ್ ಸ್ಕ್ರೈಬ್ ಮಾಡಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.