“ಯಾವುದೇ ಶಕ್ತಿ ಬಂದರೂ ಕುಡಿಯುವ ನೀರು ಕೊಡುವುದನ್ನು ತಡೆಯಲು ಸಾಧ್ಯವಿಲ್ಲ”

ರೋಣದಲ್ಲಿ 46 ಕೋಟಿ ವೆಚ್ಚದಲ್ಲಿ ಕುಡಿಯುವ ನೀರಿನ ಯೋಜನೆಯಾಗಿದೆ. ನರೆಗಲ್ ಮತ್ತು ಗಜೇಂದ್ರ ಗಡಕ್ಕೆ 69 ಕೋಟಿ ರೂ.ಗಳ ವೆಚ್ಚದಲ್ಲಿ ಚಕಲ್ಪಿಸಲಾಗಿದೆ. ಮೂರೂ ನಗರಗಳಿಗೆ ಶುದ್ಧವಾದ ಸಂಸ್ಕರಿಸಿದ ನೀರು ಒದಗಿಸುವ ಯೋಜನೆಯನ್ನು ಉದ್ಘಾಟಿಸಿರುವುದು ಸಂತಸ ತಂದಿದೆ ಎಂದರು.

Written by - Prashobh Devanahalli | Edited by - Bhavishya Shetty | Last Updated : Mar 13, 2023, 08:17 PM IST
    • ರೋಣದಲ್ಲಿ 46 ಕೋಟಿ ವೆಚ್ಚದಲ್ಲಿ ಕುಡಿಯುವ ನೀರಿನ ಯೋಜನೆಯಾಗಿದೆ.
    • ನರೆಗಲ್ ಮತ್ತು ಗಜೇಂದ್ರ ಗಡಕ್ಕೆ 69 ಕೋಟಿ ರೂ.ಗಳ ವೆಚ್ಚದಲ್ಲಿ ಚಕಲ್ಪಿಸಲಾಗಿದೆ.
    • ಮೂರೂ ನಗರಗಳಿಗೆ ಶುದ್ಧವಾದ ಸಂಸ್ಕರಿಸಿದ ನೀರು ಒದಗಿಸುವ ಯೋಜನೆಯನ್ನು ಉದ್ಘಾಟಿಸಿರುವುದು ಸಂತಸ ತಂದಿದೆ ಎಂದರು.
“ಯಾವುದೇ ಶಕ್ತಿ ಬಂದರೂ ಕುಡಿಯುವ ನೀರು ಕೊಡುವುದನ್ನು ತಡೆಯಲು ಸಾಧ್ಯವಿಲ್ಲ” title=
basavaraja bommai

ಗದಗ (ರೋಣ); ಜಗತ್ತಿನ ಯಾವುದೇ ಶಕ್ತಿ ಬಂದರೂ ಜನರಿಗೆ ಕುಡಿಯುವ ನೀರು ಕೊಡುವುದನ್ನು ತಡೆಯಲು ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ರೋಣ ತಾಲೂಕಿನಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ಯೋಜನೆಗಳ ಫಲಾನುಭವಿಗಳ ಸಮ್ಮೇಳನ ಮತ್ತು ರೋಣ ವಿವಿಧ ಕಾಮಗಾರಿಗಳ ಶಂಕುಸ್ಥಾಪನೆ ಹಾಗೂ ಉದ್ಘಾಟನೆ ನೆರವೇರಿಸಿ ಮಾತನಾಡಿದರು.

ಗದಗ ಜಿಲ್ಲೆಯ ಮೂರು ಪ್ರಮುಖ ನಗರಗಳಾದ ರೋಣ, ಗಜೇಂದ್ರಗಡ ಹಾಗೂ ನರೇಗಲ್’ಗೆ ಫ್ಲೋರೈಡ್ ಮುಕ್ತ ನೀರಿನ ಸೌಲಭ್ಯ ಕಲ್ಪಿಸಲಾಗಿದೆ.

ಇದನ್ನೂ ಓದಿ:  18ರ ಹರೆಯದಲ್ಲಿ ಟೀಂ ಇಂಡಿಯಾಗೆ ಸವಾಲ್ ಹಾಕಿದ್ದ ಈ ನಟಿಗೆ ಬಿತ್ತು ಹಿಗ್ಗಾಮುಗ್ಗಾ ಗೂಸಾ…!

ರೋಣದಲ್ಲಿ 46 ಕೋಟಿ ವೆಚ್ಚದಲ್ಲಿ ಕುಡಿಯುವ ನೀರಿನ ಯೋಜನೆಯಾಗಿದೆ. ನರೆಗಲ್ ಮತ್ತು ಗಜೇಂದ್ರ ಗಡಕ್ಕೆ 69 ಕೋಟಿ ರೂ.ಗಳ ವೆಚ್ಚದಲ್ಲಿ ಚಕಲ್ಪಿಸಲಾಗಿದೆ. ಮೂರೂ ನಗರಗಳಿಗೆ ಶುದ್ಧವಾದ ಸಂಸ್ಕರಿಸಿದ ನೀರು ಒದಗಿಸುವ ಯೋಜನೆಯನ್ನು ಉದ್ಘಾಟಿಸಿರುವುದು ಸಂತಸ ತಂದಿದೆ ಎಂದರು.

ಸಂತೋಷದೊಂದಿಗೆ ಕಳವಳವೂ ಆಗಿದೆ ಎಂದ ಮುಖ್ಯಮಂತ್ರಿಗಳು, ಈ ಯೋಜನೆ 2009ರಲ್ಲಿ ಪ್ರಾರಂಭವಾದರೂ, ಮುಂದುವರೆಯಲಿಲ್ಲ. ಮಲಪ್ರಭಾ ನದಿ ನೀರನ್ನು ಶುದ್ದೀಕರಿಸಿ ಫ್ಲೋರೈಡ್ ಮುಕ್ತ ನೀರನ್ನು ಸರಬರಾಜು ಮಾಡಲು ಇಂದಿನಿಂದ ಪ್ರಾರಂಭಿಸಲಾಗಿದೆ ಎಂದರು.

ಡಬಲ್ ಇಂಜಿನ್ ಸರ್ಕಾರದ ಬದ್ಧತೆ: ಮೂರು ವರ್ಷದ ಹಿಂದೆ ಕೆಂಪುಕೋಟೆಯ ಮೇಲೆ ಪ್ರತಿ ಮನೆಗೆ ಕುಡಿಯುವ ನೀರು ಕೊಡುವುದಾಗಿ ಘೋಷಿಸಿದ್ದರು‌. ಈ ಮೂರು ವರ್ಷದಲ್ಲಿ ,12 ಕೋಟಿ ಮನೆಗಳಿಗೆ ಹೊಸದಾಗಿ ನೀರು ಕೊಟ್ಡಿದ್ದಾರೆ. ನಮ್ಮ ರಾಜ್ಯದಲ್ಲಿ 72 ವರ್ಷಗಳವರೆಗೂ ಕೇವಲ 7 ಕೋಟಿ ಮನೆಗಳಿಗೆ ನೀರಿನ ಸೌಲಭ್ಯವಿತ್ತು. ಮೂರು ವರ್ಷಗಳಲ್ಲಿ 12 ಕೋಟಿ  ಮನೆಗಳಲ್ಲಿ ನೀರು ಸಂಪರ್ಕ ಕಲ್ಪಿಸಿದವರು ಪ್ರಧಾನಿ ನರೇಂದ್ರ ಮೋದಿ. ರಾಜ್ಯದಲ್ಲಿ ಕೇವಲ 25 ಲಕ್ಷ ಮನೆಗಳಿಗೆ 75 ವರ್ಷಗಳಲ್ಲಿ ನೀರಿನ ಸಂಪರ್ಕ ನೀಡಿದ್ದರು. ನಮ್ಮ ಸರ್ಕಾರ ಮೂರು ವರ್ಷದಲ್ಲಿ 40 ಲಕ್ಷ ಮನೆಗಳಿಗೆ ನೀರು ಸಂಪರ್ಕ ಕಲ್ಪಿಸಿದೆ. ಇದು ಡಬಲ್ ಇಂಜಿನ್ ಸರ್ಕಾರದ ಬದ್ಧತೆ. ಜಲ್ ಜೀವನ್ ಮಿಷನ್, ಅಮೃತ್ ಯೋಜನೆ ಹಾಗೂ ಬಹು ಗ್ರಾಮ ಕುಡಿಯುವ ನೀರು ಯೋಜನೆಯಲ್ಲಿ ಇದನ್ನು ಕೈಗೊಳ್ಳಲಾಗಿದೆ ಎಂದರು.

ವಿಳಂಬರಹಿತ ಪ್ರಗತಿ ಸಾಧಿಸುವುದೇ  ಸರ್ಕಾರದ ಗುರಿ

ಜನ ಮೂಲ ಸೌಲಭ್ಯಗಳನ್ನು ನೀಡಲು ನಮ್ಮನ್ನು ಆಯ್ಕೆ ಮಾಡಿದ್ದಾರೆ. ಜಗತ್ತಿನ ಯಾವುದೇ ಶಕ್ತಿ ಬಂದರೂ ಜನರಿಗೆ ನೀರು ಕೊಡುವುದನ್ನು ತಡೆಯಲು ಸಾಧ್ಯವಿಲ್ಲ. ಜನಶಕ್ತಿ ಮುಂದೆ ಯಾವುದೇ ಶಕ್ತಿ ನಡೆಯುವುದಿಲ್ಲ. ಯಾವಾಗಲೂ ಜನರ ಇಚ್ಛಾಶಕ್ತಿ ಗೆದ್ದಿದೆ.  ಅಭಿವೃದ್ಧಿ ನಿರಂತರವಾಗಿ ನಡೆಯುವ ಪ್ರಕ್ರಿಯೆ. ಸಮಯ ಮತ್ತು ಅಭಿವೃದ್ಧಿ ಎರಡೂ ಒಟ್ಟಿಗೆ ಸಾಗಬೇಕು. ಕಾಲಮಿತಿಯಲ್ಲೇ ಕೆಲಸಗಳು ಆಗಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು. ವಿಳಂಬರಹಿತ ಪ್ರಗತಿ ಸಾಧಿಸುವುದೇ ನಮ್ಮ ಸರ್ಕಾರದ ಗುರಿ ಎಂದರು.

ರಾಜ್ಯದ 3 ಲಕ್ಷ ಕುಟುಂಬಗಳಿಗೆ ಬೆಳಕು ಕಾರ್ಯಕ್ರಮ:

ಗದಗ ಜಿಲ್ಲೆಯಲ್ಲಿ ವಿದ್ಯುತ್ ಸೌಲಭ್ಯವಿಲ್ಲದ 8092 ಕುಟುಂಬಗಳಿಗೆ ಹಾಗೂ ಇಡೀ ರಾಜ್ಯದಲ್ಲಿ ಸುಮಾರು 3 ಲಕ್ಷ ಕುಟುಂಬಗಳಿಗೆ ಬೆಳಕು ನೀಡುವ ಕಾರ್ಯಕ್ರಮವನ್ನು ಮಾಡಲಾಗಿದೆ. ಸ್ತ್ರೀ ಸಾಮರ್ಥ್ಯ ಯೋಜನೆಯಡಿ 10 ಸಾವಿರ ಮಹಿಳಾ ಸಂಘಗಳಿಗೆ ತಲಾ 1 ಲಕ್ಷದಂತೆ ಡಿಬಿಟಿ ಮಾಡಲಾಗಿದ್ದು, ಗ್ರಾಮದ ತಲಾ ಎರಡು ಸ್ತೀಶಕ್ತಿ ಸಂಘಗಳಿಗೆ ಒಟ್ಟು 5 ಲಕ್ಷ ರೂ. ಆರ್ಥಿಕ ನೆರವನ್ನು ನೀಡಲಾಗುತ್ತದೆ. ಎರಡನೇ ಹಂತದ ಯೋಜನೆಯನ್ನು ಶೀಘ್ರದಲ್ಲಿ ಬಿಡುಗಡೆ ಮಾಡಲಾಗುವುದು. ಸ್ವಾಮಿ ವಿವೇಕಾನಂದ ಯುವಶಕ್ತಿ ಯೋಜನೆಯನ್ನೂ ಸರ್ಕಾರ ಜಾರಿಗೊಳಿಸಿದ್ದು, ಮಹಿಳೆಯರು ಹಾಗೂ ಯುವಕರ ಸ್ವಾವಲಂಬನೆ ಹಾಗೂ ಸ್ವಾಭಿಮಾನದ ಬದುಕನ್ನು ಬದುಕಬೇಕೆನ್ನುವುದು ಸರ್ಕಾರದ ಆಶಯ. ಕೃಷಿ ಕಾರ್ಮಿಕ ಮಹಿಳೆಯರಿಗೆ 1000 ರೂ. ಆರ್ಥಿಕ ಸಹಾಯ ನೀಡುವ ಯೋಜನೆ ರೂಪಿಸಲಾಗಿದೆ ಎಂದರು.

2000 ಶಾಲಾ ಬಸ್ ಸೇವೆ:

ಜನರ ಸಮಸ್ಯೆಗಳನ್ನು ನಿವಾರಿಸುವ ಸ್ಪಂದನಾಶೀಲ ಸರ್ಕಾರ ನಮ್ಮದಾಗಿದೆ. ಆರೋಗ್ಯ ಕ್ಷೇತ್ರದಲ್ಲಿ ಡಯಾಲಿಸಿಸ್ ಸೈಕಲ್ ಹೆಚ್ಚಳ, ಕಿಮೋಥೆರಪಿ ಕೇಂದ್ರ ಹೆಚ್ಚಿಸಲಾಗಿದೆ.ಕಿವುಡರಿಗೆ ಶ್ರವಣ ಸಾಧನಕ್ಕೆ ಸಹಾಯಕ್ಕೆ 500 ಕೋಟಿ ರೂ. ನಿಗದಿಪಡಿಸಿದೆ. ಹೆಣ್ಣುಮಕ್ಕಳ ವಿದ್ಯಾಭ್ಯಾಸಕ್ಕೆ ಅನುಕೂಲವಾಗುವಂತೆ ಶಾಲೆಗೆ ತೆರಳಲು 2000 ಶಾಲಾ ಬಸ್ ಸೇವೆಯನ್ನು ಪ್ರಾರಂಭಿಸಲಾಗುವುದು. ಹೆಣ್ಣುಮಕ್ಕಳಿಗೆ ಉಚಿತ ಬಸ್ ಪಾಸ್ ವ್ಯವಸ್ಥೆ ಮಾಡಲಾಗುವುದು. ಐಟಿಐಯಲ್ಲಿ ಪಿಯುಸಿಯ ಅನುತೀರ್ಣರಾದ ಯುವಕರಿಗೆ ತರಬೇತಿ ಹಾಗೂ 6 ತಿಂಗಳವರೆಗೆ 1500 ರೂ. ಭತ್ಯೆ ನೀಡಿ ಉದ್ಯೋಗವನ್ನು ಒದಗಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ದುಡಿಯುವ ವರ್ಗಕ್ಕೆ ಬೆಂಬಲ ನೀಡುವುದು ಸರ್ಕಾರದ ಆದ್ಯತೆಯಾಗಿದೆ. ನಾಡನ್ನು ಕಟ್ಟುವುದು ದುಡಿಯುವ ವರ್ಗ ಎಂದರು.

ಹಾಸ್ಟೆಲ್’ಗಳ ಸಾಮರ್ಥ್ಯ ಹೆಚ್ಚಳ:

250 ಕೋಟಿ ರೂ. ವೆಚ್ಚದಲ್ಲಿ ಹಿಂದುಳಿದ ವರ್ಗದ ಹಾಸ್ಟೆಲ್ ಗಳ ಸಾಮರ್ಥ್ಯವನ್ನು ಹೆಚ್ಚಿಸಿ, 30 ಸಾವಿರ ಓಬಿಸಿ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಅನುಕೂಲ ಕಲ್ಪಿಸಲಾಗಿದೆ. ಪ್ರಸಕ್ತ ಸಾಲಿನಲ್ಲಿ  1 ಲಕ್ಷ ವಿದ್ಯಾರ್ಥಿಗಳಿಗೆ ಅನುಕೂಲ ಕಲ್ಪಿಸುವ ಯೋಜನೆ ಹಮ್ಮಿಕೊಳ್ಳಲಾಗಿದೆ. ನೇಕಾರರಿಗೆ ವಿದ್ಯುತ್ ಸಬ್ಸಿಡಿ,  2 ಲಕ್ಷದವರೆಗೆ ಸಾಲಸೌಲಭ್ಯ, ಸಹಾಯಧನ, 350 ಕೋಟಿ ರೂ. ವೆಚ್ಚದಲ್ಲಿ ಕುರಿಗಾಹಿಗಳ ಸಂಘಕ್ಕೆ 20 ಕುರಿ 1 ಮೇಕೆ ನೀಡಲಾಗುತ್ತಿದೆ. ಎಸ್ ಸಿ ಎಸ್ ಟಿ ಮೀಸಲಾತಿಯನ್ನು ಹೆಚ್ಚಿಸಲಾಗಿದೆ.  ಸಂವಿಧಾನದ 9 ನೇ ಶೆಡ್ಯೂಲ್’ಗೆ ಈ ಹೆಚ್ಚಳವನ್ನು ಸೇರಿಸಲು ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು. ಸರ್ಕಾರದ ಸೌಲಭ್ಯಗಳ ಬಗ್ಗೆ ಬೆಳಕು ಚೆಲ್ಲಿ , ಇನ್ನಷ್ಟು ಜನರು ಸರ್ಕಾರದ ಯೋಜನೆಗಳ ಲಾಭ ಪಡೆಯಬೇಕೆನ್ನುವ ಉದ್ದೇಶದಿಂದ ಫಲಾನುಭವಿಗಳ ಸಮ್ಮೇಳನವನ್ನು ಏರ್ಪಡಿಸಲಾಗುತ್ತಿದೆ ಎಂದರು.

ಇದನ್ನೂ ಓದಿ: Renault Triber: 7 ಲಕ್ಷಕ್ಕಿಂತ ಕಡಿಮೆ ಬೆಲೆಗೆ ಅದ್ಭುತ ಕಾರು, ಬೆಲೆ ಎಷ್ಟು ಗೊತ್ತಾ?

ಸಚಿವರಾದ ಬಿ.ಎ.ಬಸವರಾಜ, ಸಿ.ಸಿ.ಪಾಟೀಲ್, ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದ ಅಧ್ಯಕ್ಷ ಕಳಕಪ್ಪ ಬಂಡಿ, ರೋಣ ಪುರಸಭೆ ಅಧ್ಯಕ್ಷೆ ರಂಗಮ್ಮ ಸುರೇಶ ಭಜಂತ್ರಿ, ಶಾಸಕರಾದ ಸಲೀಂ ಅಹ್ಮದ್, ಎಸ್.ವಿ.ಸಂಕನೂರು, ಮೊದಲಾದವರು ಉಪಸ್ಥಿತರಿದ್ದರು.

 

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.a

Trending News