Power Supply In Summer: ಬೇಸಿಗೆಯಲ್ಲಿ ಸಮರ್ಪಕ ವಿದ್ಯುತ್‌ ಪೂರೈಕೆ ನಮ್ಮ ಸರ್ಕಾರದ ಪ್ರಮುಖ ಆದ್ಯತೆಯಾಗಿದೆ. ಈ ನಿಟ್ಟಿನಲ್ಲಿ ಸಕಲ  ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಇಂಧನ ಸಚಿವ ಕೆ.ಜೆ ಜಾರ್ಜ್‌ ತಿಳಿಸಿದ್ದಾರೆ. 


COMMERCIAL BREAK
SCROLL TO CONTINUE READING

ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಇಂಧನ ಸಚಿವ ಕೆ‌ಜೆ ಜಾರ್ಜ್‌,  ಪ್ರಸ್ತುತ ವಿದ್ಯುತ್ ಪೂರೈಕೆಯಲ್ಲಿ ಯಾವುದೇ ಬಿಕ್ಕಟ್ಟಿಲ್ಲ. ಜನರಿಗೆ ಯಾವುದೇ ತೊಂದರೆ ಆಗದಂತೆ ನೋಡಿಕೊಳ್ಳಲಾಗುವುದು ಎಂದು ಮಾಹಿತಿ ನೀಡಿದ್ದಾರೆ. 


ಬೇಸಿಗೆಯಲ್ಲಿ ವಿದ್ಯುತ್ ಬೇಡಿಕೆ ಹೆಚ್ಚುವುದು ನಿರೀಕ್ಷಿತ. ಅದಕ್ಕಾಗಿಯೇ ಬಹಳ ಮುಂಚಿತವಾಗಿ ಸರಿಯಾದ ಪರಿಹಾರ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ. ರಾಜ್ಯದ ಯಾವುದೇ ವರ್ಗದ ಗ್ರಾಹಕರಿಗೆ ಲೋಡ್‌ ಶೆಡ್ಡಿಂಗ್‌ ಬಿಸಿ ತಟ್ಟದಂತೆ ಇಲಾಖೆ ಎಚ್ಚರವಹಿಸಿದೆ, ಎಂದು ಇಂಧನ ಸಚಿವರು ಭರವಸೆ ನೀಡಿದ್ದಾರೆ. 


ಇದನ್ನೂ ಓದಿ- ನಮ್ಮ ಗ್ಯಾರಂಟಿ ಯೋಜನೆಗಳಿಗೆ ಐದು ವರ್ಷಗಳ ವಾರಂಟಿ ಇದೆ: ಡಿಸಿಎಂ ಡಿ.ಕೆ. ಶಿವಕುಮಾರ್


ಕರ್ನಾಟಕದಲ್ಲಿ ಪ್ರತಿ ನಿತ್ಯದ ವಿದ್ಯುತ್ ಬಳಕೆ 329 ಮಿಲಿಯನ್ ಯೂನಿಟ್‌ನಷ್ಟಿದ್ದು - ಕಳೆದ ವರ್ಷ ಇದೇ ಅವಧಿಯ ವಿದ್ಯುತ್‌  ಬಳಕೆ ಪ್ರಮಾಣ 300 ಮಿ.ಯೂ. ನಷ್ಟಿತ್ತು. ಕಳೆದ ವರ್ಷದ ಗರಿಷ್ಠ ಲೋಡ್ 15300+ ಮೆ.ವ್ಯಾ.ಆಗಿದ್ದರೆ, ಈ ವರ್ಷದ ಗರಿಷ್ಠ ಲೋಡ್ 17000+ ಮೆ.ವ್ಯಾ.ಗೆ ಏರಿದೆ ಎಂದು ಸಚಿವರು ತಮ್ಮ ಪತ್ರಿಕಾ ಹೇಳಿಕೆಯಲ್ಲಿ ಉಲ್ಲೇಖಿಸಿದ್ದಾರೆ. 


ಇದನ್ನೂ ಓದಿ- ವಿಶ್ವದಲ್ಲಿ ದಿನೇದಿನೆ ಏರಿಕೆ ಆಗ್ತಿದೆ ಮಾರಕ ಕ್ಯಾನ್ಸರ್; ಬೆಂಗಳೂರಲ್ಲಿ 3 ದಿನ‌ ಆರೋಗ್ಯ ಸಮ್ಮೇಳನ


"ಪರೀಕ್ಷೆಯ ಸಮಯದಲ್ಲಿ ವಿದ್ಯಾರ್ಥಿಗಳಿಗೆ ಓದಲು ತೊಂದರೆಯಾಗದಂತೆ ವಿದ್ಯುತ್‌ ಪೂರೈಕೆ ಮಾಡಲಾಗುತ್ತಿದೆ. ಈಗಾಗಲೇ ಕೃಷಿ ಪಂಪ್‌ಸೆಟ್‌ಗಳಿಗೆ 7 ಗಂಟೆಗಳ ಕಾಲ ವಿದ್ಯುತ್‌ ಪೂರೈಕೆ ಮಾಡುವಂತೆ ಆದೇಶ ನೀಡಲಾಗಿದೆ. ಬೇಸಿಗೆ ಕಾರಣದಿಂದ ವಿದ್ಯುತ್‌ ಪೂರೈಕೆಯಲ್ಲಿ ವ್ಯತ್ಯಯ ಆಗದಂತೆ ನೋಡಿಕೊಳ್ಳಲಾಗುವುದು,"ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=I87DcFM35WY
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.