ವಾಲ್ಮೀಕಿ ನಿಗಮ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ತಪ್ಪಿತಸ್ಥರ ರಕ್ಷಣೆ ಪ್ರಶ್ನೆಯೇ ಇಲ್ಲ: ಡಿಸಿಎಂ ಡಿಕೆ ಶಿವಕುಮಾರ್

ಬೆಂಗಳೂರು: ವಿಧಾನ ಪರಿಷತ್ ಚುನಾವಣೆಗೆ ನಮ್ಮ ಪಕ್ಷದಲ್ಲಿ 300ಕ್ಕೂ ಹೆಚ್ಚು ಆಕಾಂಕ್ಷಿಗಳಿದ್ದು, ದೆಹಲಿ ನಾಯಕರ ಜತೆ ಚರ್ಚೆ ಮಾಡಿ ಎಲ್ಲಾ ವರ್ಗದ 65 ಸಂಭಾವ್ಯರ ಪಟ್ಟಿಯನ್ನು ಕೊಟ್ಟು ಬಂದಿದ್ದೇವೆ. ಉಳಿದಂತೆ ಹೈಕಮಾಂಡ್ ನಾಯಕರು ಅಂತಿಮ ತೀರ್ಮಾನ ಮಾಡಲಿದ್ದಾರೆ.

Written by - Prashobh Devanahalli | Edited by - Bhavishya Shetty | Last Updated : May 30, 2024, 06:20 PM IST
    • ವಾಲ್ಮೀಕಿ ನಿಗಮದಲ್ಲಿನ ಅಕ್ರಮ ಹಣ ವರ್ಗಾವಣೆ ಪ್ರಕರಣ
    • ಯಾವುದೇ ಕಾರಣಕ್ಕೂ ತಪ್ಪಿತಸ್ಥರ ರಕ್ಷಣೆ ಪ್ರಶ್ನೆಯೇ ಇಲ್ಲ
    • ಸದಾಶಿವನಗರ ನಿವಾಸದಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಡಿಸಿಎಂ
ವಾಲ್ಮೀಕಿ ನಿಗಮ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ತಪ್ಪಿತಸ್ಥರ ರಕ್ಷಣೆ ಪ್ರಶ್ನೆಯೇ ಇಲ್ಲ: ಡಿಸಿಎಂ ಡಿಕೆ ಶಿವಕುಮಾರ್  title=
File Photo

ಬೆಂಗಳೂರು: ವಾಲ್ಮೀಕಿ ನಿಗಮದಲ್ಲಿನ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಯಾರೇ ತಪ್ಪು ಮಾಡಿದ್ದರೂ ಅವರ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು. ಯಾವುದೇ ಕಾರಣಕ್ಕೂ ತಪ್ಪಿತಸ್ಥರ ರಕ್ಷಣೆ ಪ್ರಶ್ನೆಯೇ ಇಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದ್ದಾರೆ.

ದೆಹಲಿ ಪ್ರವಾಸದಿಂದ ಮರಳಿದ ನಂತರ ಸದಾಶಿವನಗರ ನಿವಾಸದಲ್ಲಿ ಮಾಧ್ಯಮಗಳ ಜತೆ ಗುರುವಾರ ಮಾತನಾಡಿದರು.

ಇದನ್ನೂ ಓದಿ: ಒಂದು ಲೋಟ ಮಜ್ಜಿಗೆಗೆ ಇದನ್ನು ಬೆರೆಸಿ ಕುಡಿದರೆ ಸಂಧುಗಳಲ್ಲಿ ಅಂಟಿರುವ ಯೂರಿಕ್ ಆಸಿಡ್ ಕರಗುತ್ತೆ: ಮಂಡಿನೋವು ಕೂಡ ನಿವಾರಣೆಯಾಗುತ್ತೆ!

ಅಕ್ರಮ ಹಣ ವರ್ಗಾವಣೆ ವಿಚಾರವಾಗಿ ವಿರೋಧ ಪಕ್ಷಗಳು ಸಚಿವ ನಾಗೇಂದ್ರ ಅವರ ರಾಜೀನಾಮೆಗೆ ಆಗ್ರಹಿಸುತ್ತಿವೆ ಎಂದು ಕೇಳಿದಾಗ, “ರಾಜೀನಾಮೆ ಕೇಳುವುದು ವಿರೋಧ ಪಕ್ಷಗಳ ಧರ್ಮ, ಕೇಳುತ್ತಾರೆ. ನಾವು ಈ ಪ್ರಕರಣದ ಬಗ್ಗೆ ಪರಿಶೀಲಿಸುತ್ತಿದ್ದೇವೆ. ಮುಖ್ಯಮಂತ್ರಿ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದಾರೆ. ಸತ್ಯಾಸತ್ಯತೆ ಪರಿಶೀಲಿಸುತ್ತೇವೆ. ಆಧಾರವಿಲ್ಲದೇ ಆರೋಪ ಮಾಡಿದ ಮಾತ್ರಕ್ಕೆ ನಾವು ಪ್ರತಿಕ್ರಿಯೆ ನೀಡಲು ಆಗುವುದಿಲ್ಲ. ತಪ್ಪು ಯಾರೇ ಮಾಡಿದರೂ ತಪ್ಪೇ. ತಕ್ಷಣವೇ ಎಫ್ಐಆರ್ ದಾಖಲಿಸಿ, ವ್ಯವಸ್ಥಾಪಕ ನಿರ್ದೇಶಕರ ಅಮಾನತು ಮಾಡಲಾಗಿದೆ. ತಪ್ಪು ಮಾಡಿರುವುದು ಸಾಬೀತಾದರೆ ಮುಲಾಜಿಲ್ಲದೇ ಕ್ರಮ ಕೈಗೊಳ್ಳಲಾಗುವುದು” ಎಂದರು.

ಸಂತೋಷ್ ಪಾಟೀಲ್ ಪ್ರಕರಣದಲ್ಲಿ ಈಶ್ವರಪ್ಪ ರಾಜೀನಾಮೆ ಕೇಳಿದ್ದೀರಿ, ಈಗ ಬಿಜೆಪಿ ಕೂಡ ಈ ವಿಚಾರದಲ್ಲಿ ಸಚಿವರ ರಾಜೀನಾಮೆ ಕೇಳುತ್ತಿದೆ ಎಂದಾಗ, "ಆತ್ಮಹತ್ಯೆ ಪತ್ರದಲ್ಲಿ ಸಚಿವರ ಮೌಖಿಕ ಆದೇಶವಿದೆ ಎಂದು ಅಧಿಕಾರಿಗಳು ಹೇಳಿದ್ದರು ಎಂದು ಇದೆ. ನಾಗೇಂದ್ರ ಅವರ ವಿರುದ್ಧ ನೇರ ಆರೋಪವಿಲ್ಲ. ಈ ವಿಚಾರವಾಗಿ ಸರ್ಕಾರ ತನಿಖೆ ಮಾಡಲಿದೆ. ಇದು ಸಣ್ಣ ವಿಚಾರವಲ್ಲ. 10 ಲಕ್ಷ ಅಕ್ರಮ ನಡೆದರೂ ಅಕ್ರಮವೇ. ನಾನು ಪ್ರಕರಣದ ಎಫ್ಐಆರ್ ಓದಿದೆ.  ಸಚಿವರನ್ನು ಕರೆಸಿ ಮಾಹಿತಿ ಪಡೆಯುತ್ತೇವೆ. ಸತ್ಯಾಸತ್ಯತೆ ಪರಿಶೀಲಿಸುತ್ತೇವೆ” ಎಂದರು.

65 ಮಂದಿ ಶಾರ್ಟ್ ಲಿಸ್ಟ್:

ವಿಧಾನ ಪರಿಷತ್ ಚುನಾವಣೆಗೆ ನಮ್ಮ ಪಕ್ಷದಲ್ಲಿ 300ಕ್ಕೂ ಹೆಚ್ಚು ಆಕಾಂಕ್ಷಿಗಳಿದ್ದು, ದೆಹಲಿ ನಾಯಕರ ಜತೆ ಚರ್ಚೆ ಮಾಡಿ ಎಲ್ಲಾ ವರ್ಗದ 65 ಸಂಭಾವ್ಯರ ಪಟ್ಟಿಯನ್ನು ಕೊಟ್ಟು ಬಂದಿದ್ದೇವೆ. ಉಳಿದಂತೆ ಹೈಕಮಾಂಡ್ ನಾಯಕರು ಅಂತಿಮ ತೀರ್ಮಾನ ಮಾಡಲಿದ್ದಾರೆ. ಯತೀಂದ್ರ ಅವರ ವಿಚಾರವಾಗಿ ಹೈಕಮಾಂಡ್ ನಾಯಕರು ಈಗಾಗಲೇ ಮಾತು ಕೊಟ್ಟಿದ್ದರು. ಕೇವಲ ಬೆಂಗಳೂರು ಮಾತ್ರವಲ್ಲದೇ ಕರಾವಳಿ ಕರ್ನಾಟಕ, ಮಧ್ಯ ಕರ್ನಾಟಕ, ಕಲ್ಯಾಣ ಕರ್ನಾಟಕ ಸೇರಿದಂತೆ ಎಲ್ಲಾ ವಲಯಗಳಿಂದಲೂ ಟಿಕೆಟ್ ಆಕಾಂಕ್ಷಿಗಳಿದ್ದಾರೆ. ಮಂಗಳೂರಿನಲ್ಲಿ 21, ಚಿಕ್ಕಮಗಳೂರಿನಲ್ಲಿ 9 ಮಂದಿ ಆಕಾಂಕ್ಷಿಗಳಿದ್ದಾರೆ.

ಹಿರಿಯರ ಅಭಿಪ್ರಾಯ ಕೇಳಬೇಕಿತ್ತು ಎಂಬ ಪರಮೇಶ್ವರ್ ಅವರ ಹೇಳಿಕೆ ಬಗ್ಗೆ ಕೇಳಿದಾಗ, “ನಾವು ಅವರ ಅಭಿಪ್ರಾಯ ಕೇಳಿದ್ದೇವೆ. ಪರಮೇಶ್ವರ ಅವರು ಸಿಎಂ ಅವರನ್ನು ಭೇಟಿ ಮಾಡಿದ್ದಾರೆ” ಎಂದರು.

ಆಯ್ಕೆ ಮಾನದಂಡ ಏನು ಎಂದು ಕೇಳಿದಾಗ, “ಸಂಘಟನೆಗೆ ಆದ್ಯತೆ ನೀಡಲಾಗುವುದು. ಅನೇಕ ಪ್ರಮುಖರು, ಹಿರಿಯರು ಹಾಗೂ ಚುನಾವಣೆಯಲ್ಲಿ ಸೋತವರು, ವಿಧಾನಸಭೆ ಟಿಕೆಟ್ ತ್ಯಾಗ ಮಾಡಿರುವವರು ಟಿಕೆಟ್ ಕೇಳಿದ್ದು, ಹೈಕಮಾಂಡ್ ನಾಯಕರು ಅಂತಿಮ ತೀರ್ಮಾನ ಮಾಡಲಿದ್ದಾರೆ” ಎಂದರು.

ಬೋಸರಾಜು ಅವರು ಮುಂದುವರಿಯುತ್ತಾರಾ ಎಂದು ಕೇಳಿದಾಗ, “ಈ ವಿಚಾರವಾಗಿ ಹೈಕಮಾಂಡ್ ನಾಯಕರು ತೀರ್ಮಾನ ಮಾಡುತ್ತಾರೆ” ಎಂದರು.

ಜೂ 1ರ ಪದಾಧಿಕಾರಿಗಳ ಸಭೆ ಮುಂದೂಡಿಕೆ , 2 ರಂದು ಶಾಸಕಾಂಗ ಪಕ್ಷದ ಸಭೆ:

ಜೂನ್ 2 ರಂದು ಸಂಜೆ 6 ಗಂಟೆಗೆ ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ಶಾಸಕಾಂಗ ಪಕ್ಷದ ಸಭೆ ಇದೆ. ಪರಿಷತ್ ಸದಸ್ಯರು, ಶಾಸಕರು ಹಾಗೂ ಸಂಸದರಿಗೆ ಆಹ್ವಾನ ನೀಡಲಾಗುವುದು. ಪರಿಷತ್ ಚುನಾವಣೆ ಸೇರಿದಂತೆ ಪಕ್ಷದ ಕೆಲವು ವಿಚಾರ ಚರ್ಚೆ ಮಾಡಲಾಗುವುದು. ಜೂನ್ 1 ರಂದು ಕರೆಯಲಾಗಿದ್ದ ಪಕ್ಷದ ಪದಾಧಿಕಾರಿಗಳ ಸಭೆಯನ್ನು ಮುಂದೂಡಲಾಗಿದೆ ಎಂದು ತಿಳಿಸಿದರು.

ದೆಹಲಿ ಭೇಟಿಯಲ್ಲಿ ಪಕ್ಷ ಸಂಘಟನೆ ಬಗ್ಗೆ ಚರ್ಚೆಯಾಗಿದೆಯೇ, ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಡಿ ಕೆ ಸುರೇಶ್ ಅವರ ಹೆಸರು ಚರ್ಚೆಯಾಗುತ್ತಿರುವ ಬಗ್ಗೆ ಕೇಳಿದಾಗ, “ಕೆಪಿಸಿಸಿ ಅಧ್ಯಕ್ಷ ಗಾದಿಗೆ ಸುರೇಶ್ ಎಂಬುದು ಶುದ್ದ ಸುಳ್ಳು. ಮೊದಲು ಸ್ಥಳೀಯ ಸಂಸ್ಥೆಗಳ ಚುನಾವಣೆಗಳು ಮುಗಿಯಲಿ. ನಾನು ಅಧಿಕಾರ ಬಿಡುವ ವೇಳೆಗೆ ಒಂದು ಹಂತಕ್ಕೆ ತಂದು ನಿಲ್ಲಿಸಬೇಕು. ರೇಸ್ ಕೋರ್ಸ್ ರಸ್ತೆಯ ಕಾಂಗ್ರೆಸ್ ಭವನ ಕಟ್ಟಡ ದುರ್ಬಲವಾಗುತ್ತಿದ್ದು, ಹೊಸ ಕಟ್ಟಡ ನಿರ್ಮಾಣ ಮಾಡಬೇಕಿದೆ” ಎಂದರು.

ಲೋಕಸಭೆ ಚುನಾವಣೆ ಬಳಿಕ ಸಚಿವ ಸಂಪುಟ ಪುನಾರಚನೆ ಮಾಡುತ್ತೀರಾ ಎಂದು ಕೇಳಿದಾಗ, “ಈ ವಿಚಾರವಾಗಿ ಮುಖ್ಯಮಂತ್ರಿಗಳನ್ನು ಕೇಳಿ” ಎಂದರು.

ಇಂದು ಹಾಸನದಲ್ಲಿ ಪ್ರಗತಿಪರ ಹಾಗೂ ಮಹಿಳಾ ಸಂಘಟನೆಗಳ ಪ್ರತಿಭಟನೆ ಬಗ್ಗೆ ಕೇಳಿದಾಗ, “ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಹೋರಾಟದ ಹಕ್ಕನ್ನು ಯಾರು ತಡೆಯಲು ಆಗುವುದಿಲ್ಲ” ಎಂದರು.

ಮೋದಿ ಅವರು ಮೂರು ದಿನ ಧ್ಯಾನ ಮಾಡುತ್ತಿದ್ದಾರೆ ಎಂದು ಕೇಳಿದಾಗ, “ಅದು ಅವರ ಖಾಸಗಿ ವಿಚಾರ. ದೇವರು, ಭಕ್ತಿ, ಧ್ಯಾನ ಎಂಬುದು ವೈಯಕ್ತಿಯ ವಿಚಾರಗಳು ಅದರಲ್ಲಿ ನಾವು ಯಾಕೆ ತಲೆಹಾಕಬೇಕು? ಪ್ರಾರ್ಥನೆ, ಧ್ಯಾನ ಮಾಡುವವರ ವಿಚಾರದಲ್ಲಿ ನಮ್ಮನ್ನು ಎಳೆದು ತರಬೇಡಿ” ಎಂದರು.

ಇದನ್ನೂ ಓದಿ: ಕಾವ್ಯಾ ಮಾರನ್ ಎಷ್ಟೊಂದು ಸಿರಿವಂತೆ ಗೊತ್ತಾ? ವಿರಾಟ್ ಕೊಹ್ಲಿಗಿಂತಲೂ ದುಪ್ಪಟ್ಟು ಆಸ್ತಿ ಹೊಂದಿರುವ ಈಕೆ ಕನ್ನಡದ ಪ್ರಖ್ಯಾತ ಚಾನೆಲ್’ವೊಂದರ ಮಾಲಕಿ

ಅಂಚೆ ಕಚೇರಿಯಲ್ಲಿ ಮಹಿಳೆಯರು ಖಾತೆ ತೆರೆಸಲು ಮುಗಿಬಿದ್ದಿರುವ ಬಗ್ಗೆ ಕೇಳಿದಾಗ, “ನಮ್ಮ ಗ್ಯಾರಂಟಿ ಯೋಜನೆಗಳ ಬಗ್ಗೆ ಜನರಲ್ಲಿ ಅಷ್ಟು ವಿಶ್ವಾಸ ಮೂಡುತ್ತಿದೆ. ಇಂಡಿಯಾ ಒಕ್ಕೂಟ ಅಧಿಕಾರಕ್ಕೆ ಬರಲಿದೆ. ನಾವು ಅಧಿಕಾರಕ್ಕೆ ಬಂದರೆ ಮಹಿಳೆಯರಿಗೆ 1 ಲಕ್ಷ ನೀಡಲಾಗುವುದು ಎಂದು ನಮ್ಮ ನಾಯಕರು ಹಾಗೂ ಮಿತ್ರ ಪಕ್ಷಗಳ ನಾಯಕರು ಹೇಳಿದ್ದಾರೆ” ಎಂದು ತಿಳಿಸಿದರು.

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News