ನಮ್ಮ ಕಾಲದಲ್ಲಿ ಯಾವುದೇ ಹಗರಣಗಳಾಗಿಲ್ಲ: ಡಿಸಿಎಂ ಡಿಕೆ ಶಿವಕುಮಾರ್ ಸ್ಪಷ್ಟನೆ

DCM DK Shivakumar: ಚನ್ನಪಟ್ಟಣದ ಕೋಟೆ ಮಾರಮ್ಮ ದೇವಸ್ಥಾನದ ಆವರಣದಲ್ಲಿ ನಡೆದ ಸಾರ್ವಜನಿಕರ ಅಹವಾಲುಗಳನ್ನು ಸ್ವೀಕರಿಸಿದ ನಂತರ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದ ಅವರು "ಎಲ್ಲಾ ಹಗರಣಗಳು ನಡೆದಿರುವುದು ಬಿಜೆಪಿ ಕಾಲದಲ್ಲಿ. ಅವರ ಎಲ್ಲಾ ಪ್ರಶ್ನೆಗಳಿಗೆ ಸದನದಲ್ಲಿ ಉತ್ತರ ಕೊಡುತ್ತೇವೆ" ಎಂದು ತಿರುಗೇಟು ನೀಡಿದರು.

Written by - Prashobh Devanahalli | Edited by - Bhavishya Shetty | Last Updated : Jul 3, 2024, 05:11 PM IST
    • ನಮ್ಮ ಕಾಲದಲ್ಲಿ ಯಾವುದೇ ಹಗರಣಗಳು ನಡೆದಿಲ್ಲ
    • ಕುಮಾರಸ್ವಾಮಿ ಅವರು ಮಂಡ್ಯದಲ್ಲೂ ಜನಸಂಪರ್ಕ ಸಭೆ ನಡೆಸುತ್ತಿದ್ದಾರೆ
    • ಉಪಚುನಾವಣೆ ಅಭ್ಯರ್ಥಿಗಳನ್ನು ಯಾವಾಗ ಘೋಷಣೆ ಮಾಡುತ್ತೀರಾ?
ನಮ್ಮ ಕಾಲದಲ್ಲಿ ಯಾವುದೇ ಹಗರಣಗಳಾಗಿಲ್ಲ: ಡಿಸಿಎಂ ಡಿಕೆ ಶಿವಕುಮಾರ್ ಸ್ಪಷ್ಟನೆ title=
File Photo

ಚನ್ನಪಟ್ಟಣ: ನಮ್ಮ ಕಾಲದಲ್ಲಿ ಯಾವುದೇ ಹಗರಣಗಳು ನಡೆದಿಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್ ಸ್ಪಷ್ಟವಾಗಿ ಹೇಳಿದರು

ಮೂಡ ಹಗರಣ ವಿರೋಧಿಸಿ ಬಿಜೆಪಿಯಿಂದ ಸಿಎಂ ಮನೆಗೆ ಮುತ್ತಿಗೆ ವಿಚಾರವಾಗಿ ಕೇಳಿದಾಗ ಹೀಗೆ ಉತ್ತರಿಸಿದರು.

ಇದನ್ನೂ ಓದಿ: “ಮಾಜಿ ಕ್ಯಾಪ್ಟನ್ ಮಿಥಾಲಿ ರಾಜ್’ರನ್ನು ಮದುವೆಯಾಗಲಿದ್ದೇನೆ”- ಡಿವೋರ್ಸ್ ಬೆನ್ನಲ್ಲೇ 2ನೇ ಮದುವೆ ಬಗ್ಗೆ ಶಿಖರ್ ಧವನ್ ಹೇಳಿಕೆ

ಚನ್ನಪಟ್ಟಣದ ಕೋಟೆ ಮಾರಮ್ಮ ದೇವಸ್ಥಾನದ ಆವರಣದಲ್ಲಿ ನಡೆದ ಸಾರ್ವಜನಿಕರ ಅಹವಾಲುಗಳನ್ನು ಸ್ವೀಕರಿಸಿದ ನಂತರ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದ ಅವರು "ಎಲ್ಲಾ ಹಗರಣಗಳು ನಡೆದಿರುವುದು ಬಿಜೆಪಿ ಕಾಲದಲ್ಲಿ. ಅವರ ಎಲ್ಲಾ ಪ್ರಶ್ನೆಗಳಿಗೆ ಸದನದಲ್ಲಿ ಉತ್ತರ ಕೊಡುತ್ತೇವೆ" ಎಂದು ತಿರುಗೇಟು ನೀಡಿದರು.

ಬೇಬಿ ಬೆಟ್ಟದಲ್ಲಿ ಪ್ರಯೋಗಾತ್ಮಕ ಸ್ಫೋಟದ ಬಗ್ಗೆ ಕೇಳಿದಾಗ "ಕೆಆರ್ ಎಸ್ ಅಣೆಕಟ್ಟಿನಲ್ಲಿ ಸ್ಫೋಟ ಮಾಡುವುದಿಲ್ಲ. ಏನೇನು ಸುರಕ್ಷತ ಕ್ರಮಗಳನ್ನು ತೆಗೆದುಕೊಂಡು ಸ್ಫೋಟ ಮಾಡಲಾಗುತ್ತದೆ. ಇಂತಿಷ್ಟು ದೂರ ಎಂಬುದು ಇರುತ್ತದೆ" ಎಂದು ಸ್ಪಷ್ಟಪಡಿಸಿದರು.

ಕುಮಾರಸ್ವಾಮಿ ಅವರು ಮಂಡ್ಯದಲ್ಲೂ ಜನಸಂಪರ್ಕ ಸಭೆ ನಡೆಸುತ್ತಿದ್ದಾರೆ ನಿಮನ್ನು ನೋಡಿ ನಕಲು ಮಾಡುತ್ತಿದ್ದಾರೆಯೇ ಎಂದಾಗ "ಮಾಡಲಿ, ಒಳ್ಳೆಯ ಕೆಲಸ ಯಾರು ಮಾಡಿದರೆ ಏನಂತೆ. ಜನಸೇವೆ ಮಾಡುವುದನ್ನು ನಾನು ಬೇಡ ಎಂದು ಹೇಳಲು ಆಗುತ್ತದೆಯೇ?" ಎಂದರು.

ಉಪಚುನಾವಣೆ ಅಭ್ಯರ್ಥಿಗಳನ್ನು ಯಾವಾಗ ಘೋಷಣೆ ಮಾಡುತ್ತೀರಾ ಎಂದು ಕೇಳಿದಾಗ " ಮೊದಲು ಚುನಾವಣಾ ದಿನಾಂಕ ಘೋಷಣೆಯಾಗಲಿ ಅವರೇ ಬಂದು ನಾಮಪತ್ರ ಸಲ್ಲಿಕೆ ಮಾಡುತ್ತಾರೆ" ಎಂದರು.

 ಡಿಕೆ ಶಿವಕುಮಾರ್ ಅವರೇ ನನ್ನನ್ನು ಜೈಲಿಗೆ ಹಾಕಿಸಿದ್ದು ಎನ್ನುವ ವಕೀಲ ದೇವರಾಜೇಗೌಡ ಅವರ ಆರೋಪದ ಬಗ್ಗೆ ಕೇಳಿದಾಗ "ನನ್ನನ್ನು ನೆನೆಸಿಕೊಳ್ಳುತ್ತಿರಲಿ. ಬಹಳ ಸಂತೋಷ" ಎಂದು ಹೇಳಿದರು.

ಇಲಾಖಾವಾರು ಅರ್ಜಿಗಳ ವಿಂಗಡಣೆ

ನಿವೇಶನ ಹಂಚಲು ಗಡುವು ಏನಾದರೂ ಇದೆಯೇಎಂದು ಕೇಳಿದಾಗ "ಮೊದಲು ಎಲ್ಲಾ ಅರ್ಜಿಗಳನ್ನು ಪರಿಶೀಲನೆ ಮಾಡಲಾಗುವುದು. ಅರ್ಹರನ್ನು ಗುರುತಿಸಲಾಗುವುದು. ನಂತರ ನಾನೇ ಖುದ್ದಾಗಿ ಬಂದು ಸರ್ಕಾರಿ ಜಮೀನು, ಖಾಸಗಿ ಜಮೀನು ಪರಿಶೀಲನೆ ನಡೆಸಿ ಹಂಚಿಕೆ ಮಾಡಲಾಗುವುದು. ಇಲಾಖಾವಾರು ಅರ್ಜಿಗಳನ್ನು ವಿಂಗಡಣೆ ಮಾಡಿ ಆಯಾಯ ಇಲಾಖೆಯ ಸಚಿವರಿಂದ ಸಭೆ ನಡೆಸಲಾಗುವುದು" ಎಂದು ತಿಳಿಸಿದರು.

ಚನ್ನಪಟ್ಟಣವನ್ನು ಬದಲಾವಣೆ ಮಾಡಬೇಕು. ಮುನಿಸಿಪಾಲಿಟಿ, ತಾಲ್ಲೂಕು ಕಚೇರಿ, ಆಸ್ಪತ್ರೆ ಸೇರಿದಂತೆ ಎಲ್ಲವನ್ನು ಬದಲಾವಣೆ ಮಾಡಬೇಕು. ಶವ ಸಂಸ್ಕಾರ ಮಾಡಲು ಸ್ಮಶಾನವಿಲ್ಲ, ಬಡವರಿಗೆ, ಬೀಡಿ ಕಾರ್ಮಿಕರಿಗೆ ಮನೆಯಿಲ್ಲ, ಈ ಬದಲಾವಣೆಗಳು ಏಕೆ ಆಗಲಿಲ್ಲವೋ ಗೊತ್ತಿಲ್ಲ. ಗ್ರಾಮೀಣ ಭಾಗದ ಮಹಿಳೆಯರಿಗೆ ಸ್ವೀಕೃತಿ ಪತ್ರ ಪಡೆದುಕೊಳ್ಳುವ ತಾಳ್ಮೆಯಿತ್ತು. ಚನ್ನಪಟ್ಟಣ ನಗರದ ಮಹಿಳೆಯರಿಗೆ ತಮ್ಮ ಸಮಸ್ಯೆಗಳನ್ನು ಹೇಳಿಕೊಳ್ಳಲು ದಾವಂತದಲ್ಲಿ ಇದ್ದಾರೆ. ಅಂದರೆ ಜನರ ಸಮಸ್ಯೆಗಳನ್ನು ಸರಿಯಾಗಿ ಆಲಿಸಿಲ್ಲ ಎಂದರ್ಥ. ಇದಕ್ಕೆ ನಾನು ಉತ್ತರ ಕೊಡಬೇಕಾಗಿಲ್ಲ, ಮತದಾರರು, ಸ್ಥಳೀಯ ನಾಯಕರು ಇದನ್ನು ಅರ್ಥ ಮಾಡಿಕೊಳ್ಳಬೇಕು" ಎಂದರು.

ಇದನ್ನೂ ಓದಿ: ಈ ಪ್ರಾಣಿಯ ಹಾಲು ಕುಡಿದ ತಕ್ಷಣ ಕಡಿಮೆಯಾಗುತ್ತೆ ಡೆಂಘೀ ಜ್ವರ!

ಜನಸೇವೆ ಮಾಡಲು ಅವಕಾಶ

ಜನರ ಸೇವೆ ಮಾಡಲು ನನಗೆ ಅವಕಾಶ. ನಾನು ಅಧಿಕಾರದಲ್ಲಿದ್ದು ಈ ಕಾರ್ಯಕ್ರಮದ ಮೂಲಕ ಜನರ ಮನೆ ಬಾಗಿಲಿಗೆ ಹೋಗಿ ಅವರ ಸಮಸ್ಯೆಗಳನ್ನು ಬಗೆಹರಿಸುವ ವಿಶೇಷ ಕಾರ್ಯಕ್ರಮ. ಈ ಹಿಂದಿನ ಸರ್ಕಾರ ವೃದ್ಧಾಪ್ಯ ವೇತನ ನೀಡಲು 500 ರೂ ತೆಗೆದುಕೊಳ್ಳುತ್ತಿತ್ತು. ನಾನು ಕನಕಪುರದಲ್ಲಿ 13 ಸಾವಿರ ಜನರಿಗೆ ಪಿಂಚಣಿ ಬರುವಂತೆ ಮಾಡಿದೆ. ಪ್ರತಿ ವಾರ್ಡ್ ವಾರು ಸಭೆ ನಡೆಸಿ ಸುಮಾರು 3 ತಿಂಗಳ ಕಾಲ ನೀವೇಶನಗಳನ್ನು ಹಂಚಿದ್ದೇನೆ" ಎಂದು ತಿಳಿಸಿದರು.

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

Trending News