CM Siddaramaiah : ಬರಪರಿಹಾರಕ್ಕೆ ಅನುದಾನದ ಕೊರತೆ ಇಲ್ಲ: ಕುಡಿಯುವ ನೀರಿಗೆ ತೊಂದರೆ ಯಾಗದಂತೆಯೂ ಕ್ರಮ : ಮುಖ್ಯಮಂತ್ರಿ ಸಿದ್ದರಾಮಯ್ಯ

ಎಲ್ಲಾ ಜಿಲ್ಲಾಧಿಕಾರಿಗಳ ಪಿಡಿ ಖಾತೆಯಲ್ಲಿ 854 ಕೋಟಿ ರೂ. ಲಭ್ಯವಿದೆ. ಪ್ರತಿ ಜಿಲ್ಲೆಯಲ್ಲಿ ಟಾಸ್ಕ್ ಫೋರ್ಸ್ ಸಭೆ ಕರೆದು ತಾಲೂಕಿನ ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಲು ಸೂಚಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. 

Written by - Ranjitha R K | Last Updated : Mar 5, 2024, 04:30 PM IST
  • ಬರ ನಿರ್ವಹಣೆಗೆ ಸಂಪೂರ್ಣ ಸಿದ್ಧತೆ
  • ಸಹಾಯವಾಣಿ , ನಿಯಂತ್ರಣಾ ಕೊಠಡಿಗಳ ಸ್ಥಾಪನೆಗೆ ಸೂಚನೆ
  • ಮೇವಿಗೆ ಈವರೆಗೆ ಸಮಸ್ಯೆ ಇಲ್ಲ - ಸಿದ್ದರಾಮಯ್ಯ
CM Siddaramaiah : ಬರಪರಿಹಾರಕ್ಕೆ ಅನುದಾನದ ಕೊರತೆ ಇಲ್ಲ: ಕುಡಿಯುವ ನೀರಿಗೆ ತೊಂದರೆ ಯಾಗದಂತೆಯೂ ಕ್ರಮ :  ಮುಖ್ಯಮಂತ್ರಿ ಸಿದ್ದರಾಮಯ್ಯ title=

ಬೆಂಗಳೂರು : ರಾಜ್ಯದಲ್ಲಿ ಮುಂದಿನ ಮೂರು ತಿಂಗಳಲ್ಲಿ ಎದುರಾಗಬಹುದಾದ ತೀವ್ರ ಬರಗಾಲವನ್ನು ನಿಭಾಯಿಸಲು ಸರ್ಕಾರ ಸಂಪೂರ್ಣ ಸಿದ್ದತೆ ಮಾಡಿಕೊಂಡಿದೆ ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅನಿವಾರ್ಯವಾದಾಗ ಮಾತ್ರ ಹೊಸ ಕೊಳವೆಬಾವಿಗಳನ್ನು ಕೊರೆಸಲು ಜಿಲ್ಲಾಧಿಕಾರಿಗಳಿಗೆ ಅಧಿಕಾರ ನೀಡಿದ್ದು, ಹೆಚ್ಚುವರಿಯಾಗಿ 140 ಕೋಟಿ ರೂ.ಗಳ  ಜೊತೆಗೆ  70 ಕೋಟಿ ರೂ.ಗಳನ್ನು ಬಿಡುಗಡೆ ಮಾಡಲಾಗುವುದು ಎಂದು ಹೇಳಿದರು. ಇದು  ಸರ್ಕಾರದಿಂದ ನೀಡುವ ಅನುದಾನವಾಗಿದೆ  ಎದ್ನು ಮುಖ್ಯಮಂತ್ರಿಗಳು ಹೇಳಿದರು. 

ಕರ್ನಾಟಕದಲ್ಲಿ ಈ ವರ್ಷ ಬರಗಾಲವಿದ್ದು, 223 ತಾಲೂಕುಗಳು  ಬರಗಾಲ ಪೀಡಿತವಾಗಿದ್ದು, 194 ತೀವ್ರ ಬರಗಾಲ ಪೀಡಿತವಾಗಿವೆ. ಕುಡಿಯುವ ನೀರಿಗೆ ಯಾವುದೇ ಕಾರಣಕ್ಕೂ ತೊಂದರೆಯಾಗಬಾರದು ಎಂದು ಮುಖ್ಯ ಕಾರ್ಯದರ್ಶಿ, ಜಿಲ್ಲಾಧಿಕಾರಿಗಳಿಗೆ ಸ್ಪಷ್ಟ ಸೂಚನೆ ನೀಡಲಾಗಿದೆ  ಎಂದು ಹೇಳಿದರು. ಎಲ್ಲಾ ಜಿಲ್ಲಾಧಿಕಾರಿಗಳ ಪಿಡಿ ಖಾತೆಯಲ್ಲಿ 854 ಕೋಟಿ ರೂ. ಲಭ್ಯವಿದೆ. ಪ್ರತಿ ಜಿಲ್ಲೆಯಲ್ಲಿ ಟಾಸ್ಕ್ ಫೋರ್ಸ್ ಸಭೆ ಕರೆದು ತಾಲೂಕಿನ ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಲು ಸೂಚಿಸಲಾಗಿದೆ ಎಂದು ಹೇಳಿದರು. 

ಇದನ್ನೂ ಓದಿ : Murder Case: ಪ್ರೀತಿ ನಿರಾಕರಿಸಿದ SSLC ವಿದ್ಯಾರ್ಥಿನಿಯ ಕೊಲೆಗೈದು ರೈಲಿಗೆ ತಲೆಕೊಟ್ಟ ಯುವಕ!

ಜಿಲ್ಲಾ ಮಟ್ಟದಲ್ಲಿ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ 307 ಸಭೆ ಕರೆದಿದ್ದು, ಕುಡಿಯುವ ನೀರಿಗೆ ತೊಂದರೆ ಯಾಗದಂತೆ ಕ್ರಮ ವಹಿಸಿದೆ ಎಂದರು.  ಸಮಸ್ಯೆಯಿರುವ  ಗ್ರಾಮ, ಜಿಲ್ಲೆಗಳಲ್ಲಿ  ಅದಕ್ಕೆ ಮುಂಚಿತವಾಗಿ  ಯೋಜನೆ ತಯಾರಿಸಬೇಕು. ಸದ್ಯ 98 ತಾಲೂಕುಗಳ 412 ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಇದೆ. 175 ಗ್ರಾಮಗಳಿಗೆ 204 ಟ್ಯಾಂಕರ್ ಗಳಿಂದ  596 ಖಾಸಗಿ ಕೊಳವೆಬಾವಿಗಳ ಮೂಲಕ ನೀರು ಸರಬರಾಜು ಆಗುತ್ತಿದೆ ಎಂದು ವಿವರಿಸಿದರು. 120 ಬಿಬಿಎಂಪಿ ಹಾಗೂ  ಜಲಮಂಡಲಿಯಲ್ಲಿ 232 ಟ್ಯಾಂಕರ್ ಗಳಲ್ಲಿ  ನೀರು ಸರಬರಾಜು ಆಗುತ್ತಿದೆ. 96 ವಾರ್ಡುಗಳಲ್ಲಿ ಟ್ಯಾಂಕರ್ ಮೂಲಕ ನೀರು ಸರಬರಾಜು ಆಗುತ್ತಿದೆ ಎಂದರು. 

ಮೇವಿಗೆ ಈವರೆಗೆ ತೊಂದರೆ ಇಲ್ಲ. ಆದರೂ ಮುಂಜಾಗ್ರತ ಕ್ರಮವಾಗಿ ಪಶುಸಂಗೋಪನೆ ಇಲಾಖೆಗೆ 40 ಕೋಟಿ ರೂ.ಗಳನ್ನು ಮೇವು ಬೆಳೆಯಲು ಒದಗಿಸಲಾಗಿದೆ ಎದ್ನು ಸ್ಪಷ್ಟಪಡಿಸಿದರು. 

ಇದನ್ನೂ ಓದಿ : ಗ್ರಾಮೀಣ ಗ್ರಂಥಾಲಯಗಳನ್ನು ಅರಿವು ಕೇಂದ್ರಗಳಾಗಿ ಮೇಲ್ದರ್ಜೆಗೆರಿಸಿದ ರಾಜ್ಯ ಸರ್ಕಾರ

ಟ್ಯಾಂಕರ್ ಮಾಲೀಕರು ಪರಿಸ್ಥಿತಿ ದುರುಪಯೋಗ ಮಾಡಿಕೊಳ್ಳುತ್ತಿರುವುದನ್ನು ತಪ್ಪಿಸಲು ಕ್ರಮ ವಹಿಸಲಾಗಿದೆ. ಬೆಂಗಳೂರು ಸುತ್ತಮುತ್ತಲಿನ ಪ್ರದೇಶಗಳಿಗೂ ನೋಂದಣಿ ಮಾಡಿಸಿಕೊಂಡು  ದರಗಳನ್ನು ನಿಯಂತ್ರಣ ಮಾಡಲು ಕ್ರಮ ವಹಿಸಲಾಗಿದೆ ಎಂದು ಮುಖ್ಯ ಮಂತ್ರಿಗಳು ತಿಳಿಸಿದರು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=I87DcFM35WY

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News