ಮಾರ್ಚ್ 1ರಿಂದ ಬಿಬಿಎಂಪಿ ನೌಕರರರಿಂದ ಅನಿರ್ಧಿಷ್ಟಾವಧಿ ಮುಷ್ಕರ

ಈ ಕೆಳಕಂಡ ಬೇಡಿಕೆಗಳನ್ನು ಈಡೇರಿಸದೆ ಇದ್ದಲ್ಲಿ ಮಾರ್ಚ್ 1ರಿಂದ ಅನಿರ್ಧಿಷ್ಟಾವಧಿ ಮುಷ್ಕರವನ್ನು ಕೆಲಸಕ್ಕೆ ಗೈರು ಹಾಜರಾಗುವ ಮೂಲಕ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಕೆಲಸ ಕಾರ್ಯಗಳನ್ನು ಸ್ಥಗಿತ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.

Written by - Manjunath Hosahalli | Edited by - Manjunath N | Last Updated : Feb 22, 2023, 09:15 PM IST
  • ವಿವಿಧ ಬೇಡಿಕೆಗಳಿಗೆ ಒತ್ತಾಯಿಸಿ ಬಿಬಿಎಂಪಿ ನೌಕರರು ಮತ್ತೊಮ್ಮೆ ಪ್ರತಿಭಟನೆಗೆ ಕರೆನೀಡಿದ್ದಾರೆ.
  • ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಕೆಲಸ ಕಾರ್ಯಗಳನ್ನು ಸ್ಥಗಿತ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ
  • ಮನವಿ ಪತ್ರಗಳನ್ನು ಆದ್ಯತೆ ಮೇರೆಗೆ ಅತೀ ಜರೂರಾಗಿ ಪರಿಗಣಿಸಲು ಈ ಮೂಲಕ ಕೋರಲಾಗಿದೆ ಎಂದು ಎ.ಅಮೃತ್ ರಾಜ್ ತಿಳಿಸಿದರು
ಮಾರ್ಚ್ 1ರಿಂದ ಬಿಬಿಎಂಪಿ ನೌಕರರರಿಂದ ಅನಿರ್ಧಿಷ್ಟಾವಧಿ ಮುಷ್ಕರ title=
file photo

ಬೆಂಗಳೂರು: ವಿವಿಧ ಬೇಡಿಕೆಗಳಿಗೆ ಒತ್ತಾಯಿಸಿ ಬಿಬಿಎಂಪಿ ನೌಕರರು ಮತ್ತೊಮ್ಮೆ ಪ್ರತಿಭಟನೆಗೆ ಕರೆನೀಡಿದ್ದಾರೆ. ನ್ಯಾಯಾಯುತ ಬೇಡಿಕೆಗಳಾದ ವೇತನ-ಭತ್ಯೆಗೆ ಪರಿಷ್ಕರಣೆ ಹಾಗೂ ಹಳೆ ಪಿಂಚಣಿ ಯೋಜನೆ ಜಾರಿಗೊಳಿಸುವುದು ಹಾಗೂ ಅಧಿಕಾರಿ/ನೌಕರರು ಮತ್ತು ಕುಟುಂಬ ಸದಸ್ಯರಿಗೆ ಆರೋಗ್ಯ ಸೌಲಭ್ಯ/ಚಿಕಿತ್ಸೆ ಪಡೆಯಲು ನಗರದ ಪ್ರಮುಖ ಆಸ್ಪತ್ರೆಗಳಲ್ಲಿ ಅವಕಾಶ ಕಲ್ಪಿಸಲು ಮುಖ್ಯ ಆಯುಕ್ತರಾದ ತುಷಾರ್ ಗಿರಿನಾಥ್ ರವರಿಗೆ ಬಿಬಿಎಂಪಿ ಅಧಿಕಾರಿ ಮತ್ತು ನೌಕರರ ಕ್ಷೇಮಾಭಿವೃದ್ದಿ ಸಂಘದ ಅಧ್ಯಕ್ಷರಾದ ಎ.ಅಮೃತ್ ರಾಜ್ ರವರು  ಮನವಿ ಸಲ್ಲಿಸಿದರು.

ದಿನಾಂಕ:21-02-2023 ರಂದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಸಭೆಯ ನಿರ್ಣಯದಂತೆ ಎಲ್ಲಾ ವೃಂದ ಸಂಘದ ಅಧ್ಯಕ್ಷರು ಮತ್ತು ಪದಾಧಿಕಾರಿಗಳ ಒಮ್ಮತ ತೀರ್ಮಾನದಂತೆ ಈ ಕೆಳಕಂಡ ಬೇಡಿಕೆಗಳನ್ನು ಈಡೇರಿಸದೆ ಇದ್ದಲ್ಲಿ ಮಾರ್ಚ್ 1ರಿಂದ ಅನಿರ್ಧಿಷ್ಟಾವಧಿ ಮುಷ್ಕರವನ್ನು ಕೆಲಸಕ್ಕೆ ಗೈರು ಹಾಜರಾಗುವ ಮೂಲಕ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಕೆಲಸ ಕಾರ್ಯಗಳನ್ನು ಸ್ಥಗಿತ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.

ಇದನ್ನೂ ಓದಿ: Crime News: ಬಡ್ಡಿ ಹಣ ಕೊಡಲಿಲ್ಲವೆಂದು ರಸ್ತೆಯಲ್ಲಿಯೇ ವ್ಯಕ್ತಿಗೆ ಥಳಿತ!

ಪ್ರಮುಖ ಬೇಡಿಕೆಗಳು:

ರಾಜ್ಯ ಸರ್ಕಾರಿ ನೌಕರರು ಸರ್ಕಾರದ ಅಧೀನಕ್ಕೊಳಪಡುವ ನೌಕರರಿಗೆ ದಿನಾಂಕ: 01-07-2022 ರಿಂದ ಪರಿಷ್ಕೃತ ವೇತನ, ಭತ್ಯೆಗಳಿಗೆ ಅರ್ಹರಾಗಿದ್ದು, 6ನೇ ವೇತನ ಆಯೋಗದ ಮಾದರಿಯಂತೆ 7ನೇ ವೇತನ ಆಯೋಗದಿಂದ ಮಧ್ಯಂತರ ವರದಿಯನ್ನು ಆದಷ್ಟು ಬೇಗನೆ ಪಡೆದು, ಚುನಾವಣೆ ನೀತಿ ಸಂಹಿತೆಗಿಂತ ಮೊದಲು ಶೇ.40 ರಷ್ಟು ಫಿಟ್‌ಮೆಂಟ್‌ ಸೌಲಭ್ಯವನ್ನು ದಿನಾಂಕ:01- 07-2022 ರಿಂದ ಜಾರಿಗೆ ಬರುವಂತೆ ಸರ್ಕಾರಿ ಆದೇಶ ಹೊರಡಿಸುವುದು.

ರಾಜ್ಯದ ಎನ್.ಪಿ.ಎಸ್. ನೌಕರರ ಜೀವನ ನಿರ್ವಹಣೆ ಸಂಧ್ಯಾ ಕಾಲದ ಬದುಕು ಅತ್ಯಂತ ಕಷ್ಟಕರವಾಗಿರುವುದರಿಂದ ಎನ್.ಪಿ.ಎಸ್ ನೌಕರರನ್ನು ಓ.ಪಿ.ಎಸ್ ವ್ಯಾಪ್ತಿಗೆ ತರುವುದು ಸರ್ಕಾರದ ಜವಾಬ್ದಾರಿಯಾಗಿರುತ್ತದೆ. ಈಗಾಗಲೇ ಪಂಜಾಬ್, ರಾಜಸ್ಥಾನ, ಛತ್ತೀಸ್‌ಗಡ, ಜಾರ್ಖಂಡ್, ಹಿಮಾಚಲ ಪ್ರದೇಶ ರಾಜ್ಯಗಳಲ್ಲಿ ಹಳೆ ಪಿಂಚಣಿ ಯೋಜನೆಯನ್ನು ಜಾರಿಗೆ ಬಂದಿದ್ದು, ಅದೇ ಮಾದರಿಯಲ್ಲಿ ಕರ್ನಾಟಕದಲ್ಲೂ ಸಹ ಎನ್.ಪಿ.ಎಸ್ ಯೋಜನೆಯನ್ನು ರದ್ದುಪಡಿಸಿ ಹಳೆ ಪಿಂಚಣಿ ಯೋಜನೆಯನ್ನು ಜಾರಿಗೊಳಿಸುವುದು.

ಇದನ್ನೂ ಓದಿ: ಮತ್ತಷ್ಟು ಜನಸ್ನೇಹಿಯಾದ್ರು ಆಗ್ನೇಯ ಪೊಲೀಸ್ : ಕ್ಯೂಆರ್ ಕೋಡ್ ಮೂಲಕ ನೇರವಾಗಿ ಅಧಿಕಾರಿಗಳ ಸಂಪರ್ಕ

ಹಲವಾರು ವರ್ಷಗಳಿಂದ ಮೇಲ್ಕಂಡ ಸಂಘದ ವತಿಯಿಂದ ನೀಡಿರುವ ಮನವಿ ಪತ್ರ ಹಾಗೂ ದಿನಾಂಕ:09-02-2023ರಂದು ನ್ಯಾಯಾಯುತ ಬೇಡಿಕೆ ಆಗ್ರಹಿಸಿ ಹೋರಾಟ ಹಮ್ಮಿಕೊಂಡ ಸಂದರ್ಭದಲ್ಲಿ ನೀಡಿರುವ ಆಶ್ವಾಸನೆಯು ಸಕರಾತ್ಮಕವಾಗಿ ಸ್ಪಂದಿಸದ ಇರುವ ಕಾರಣ ನಮ್ಮ ಸಂಘದ ವತಿಯಿಂದ ನೀಡಿರುವ ಮನವಿ ಪತ್ರಗಳನ್ನು ಆದ್ಯತೆ ಮೇರೆಗೆ ಅತೀ ಜರೂರಾಗಿ ಪರಿಗಣಿಸಲು ಈ ಮೂಲಕ ಕೋರಲಾಗಿದೆ ಎಂದು ಎ.ಅಮೃತ್ ರಾಜ್ ತಿಳಿಸಿದರು.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

 

Trending News