ಬೆಂಗಳೂರು: ಲೋಕಸಭೆ ಚುನಾವಣೆವರೆಗೂ ನಾನೇ ಮುಖ್ಯಮಂತ್ರಿ ಆಗಿರುತ್ತೇನೆ ಎಂದು ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.


COMMERCIAL BREAK
SCROLL TO CONTINUE READING

ನಗರದಲ್ಲಿ ನಡೆದ ಲೆಕ್ಕಪರಿಶೋಧಕರ 15ನೇ ರಾಜ್ಯ ಮಟ್ಟದ ಸಮ್ಮೇಳನದಲ್ಲಿ ಮಾತನಾಡಿದ ಅವರು, ಇನ್ನೂ ಒಂದು ವರ್ಷ ನಾನೇ ಮುಖ್ಯಮಂತ್ರಿ ಆಗಿರುತ್ತೇನೆ. ಪ್ರಕೃತಿ ನನ್ನ ಪರವಾಗಿದೆ. ರಾಜ್ಯದಲ್ಲಿ ಉತ್ತಮ ಮಳೆಯಾಗುತ್ತಿದೆ. ಅಲ್ಲಿಯವರೆಗೆ ನನ್ನನ್ನು ಯಾರೂ ಟಚ್ ಮಾಡಲು ಸಾಧ್ಯವಿಲ್ಲ ಎಂದಿದ್ದಾರೆ.


ಮುಂದುವರೆದು ಮಾತನಾಡಿದ ಅವರು, ಜುಲೈ ಮೊದಲ ವಾರದಲ್ಲಿ ನೂತನ ಸರ್ಕಾರದ ಬಜೆಟ್ ಮಂಡಿಸಲಿದ್ದು, ನನ್ನ ಎಲ್ಲಾ ಯೋಜನೆಗಳನ್ನು ಅನುಷ್ಠಾನಕ್ಕೆ ತರುತ್ತೇನೆ. ಯಾವುದರಿಂದಲೂ ಜಾರಿಕೊಳ್ಳುವುದಿಲ್ಲ. ಆರ್ಥಿಕ ಶಿಸ್ತಿನ ಅಡಿಯೊಳಗೆ ರೈತರ ಸಾಲ ಮನ್ನಾ ಮಾಡುತ್ತೇನೆ. ಈಗಾಗಲೇ ಬ್ಯಾಂಕ್ ಅಧಿಕಾರಿಗಳೊಂದಿಗೆ ಚರ್ಚಿಸಿದ್ದೇನೆ’ ಎಂದರು.


ಕಾಂಗ್ರೆಸ್ ನಾಯಕರು ಕುಮಾರಸ್ವಾಮಿ ಅವರೇ 5 ವರ್ಷಗಳ ಕಾಲ ಮುಖ್ಯಮಂತ್ರಿ ಆಗಿರಲಿದ್ದಾರೆ ಎಂದು ಹೇಳುತ್ತಿದ್ದರೂ, ಇಂದು ಕುಮಾರಸ್ವಾಮಿ ಅವರು ಸ್ವತಃ ಒಂದು ವರ್ಷಗಳ ಕಾಲ ಮುಖ್ಯಮಂತ್ರಿ ಆಗಿರುತ್ತೇನೆ ಎಂದು ಹೇಳಿರುವುದು ಹಲವು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ.