ಬೆಳಗಾವಿ: ಉತ್ತರ ಕರ್ನಾಟಕದ ಸಮಗ್ರ ಅಭಿವೃದ್ಧಿ ಸೇರಿದಂತೆ ವಿವಿಧ ಬೇಡಿಕೆಗಳನ್ನು ಮುಂದಿಟ್ಟು ವಿವಿಧ ಮಠಾಧೀಶರು ಇಂದು ಸುವರ್ಣ ಸೌಧದ ಎದುರು ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನ 2 ಗಂಟೆವರೆಗೆ ಧರಣಿ ಕೈಗೊಳ್ಳಲಿದ್ದಾರೆ.


COMMERCIAL BREAK
SCROLL TO CONTINUE READING

ಉತ್ತರ ಕರ್ನಾಟಕದ ಸಮಗ್ರ ಅಭಿವೃದ್ಧಿಯಾಗಬೇಕು, ಸುವರ್ಣ ಸೌಧಕ್ಕೆ ಸರ್ಕಾರದ ಮುಖ್ಯ ಕಚೇರಿಗಳು ಸ್ಥಳಾಂತರವಾಗಿ ಉತ್ತರ ಕರ್ನಾಟಕ ಭಾಗದ ಜನರಿಗೆ ಸುವರ್ಣ ಸೌಧ ಶಕ್ತಿ ಕೇಂದ್ರವಾಗಬೇಕು ಎಂಬ ಹಲವು ಬೇಡಿಕೆಗಳೊಂದಿಗೆ ನಾಗನೂರು ರುದ್ರಾಕ್ಷಿ ಮಠದ ಡಾ. ಸಿದ್ಧರಾಮ ಸ್ವಾಮಿಗಳು, ಹುಕ್ಕೇರಿ ಹಿರೇಮಠದ ಸ್ವಾಮೀಜಿ ಸೇರಿದಂತೆ ಸುಮಾರು ನೂರಕ್ಕೂ ಹೆಚ್ಚು ಉತ್ತರ ಕರ್ನಾಟಕ ಭಾಗದ ಮಠಾಧೀಶರು ಮತ್ತು ಬೆಂಬಲಿಗರು ಧರಣಿ ನಡೆಸಲಿದ್ದಾರೆ.


ಧರಣಿ ಹಿನ್ನಲೆಯಲ್ಲಿ ಸುವರ್ಣ ಸೌಧದ ಬಳಿ ಪೊಲೀಸ್ ಬಂದೋಬಸ್ತ್ ಮಾಡಲಾಗುತ್ತಿದೆ.