ಹುಬ್ಬಳ್ಳಿ: ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರದ ಬಜೆಟ್ ನಲ್ಲಿ ಉತ್ತರ ಕರ್ನಾಟಕವನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಅಭಿಪ್ರಾಯಪಟ್ಟಿದ್ದಾರೆ.


COMMERCIAL BREAK
SCROLL TO CONTINUE READING

ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಜಗದೀಶ ಶೆಟ್ಟರ್ ಸಮರ್ಪಕವಾಗಿ ಸಾಲ ಮನ್ನಾ ಮಾಡದ ಕುರಿತು ರಾಜ್ಯ ಸರ್ಕಾರವನ್ನು ತರಾಟೆಗೆ ತಗೆದುಕೊಂಡರು.46 ಸಾವಿರ ಕೋಟಿ ರೂಗಳ ಸಾಲಮನ್ನಾದ ಆಶ್ವಾಸನೆಯಲ್ಲಿ ಕೇವಲ 1060 ಕೋಟಿ ರೂಗಳನ್ನು ಮಾತ್ರ ಸಾಲ ಮನ್ನಾ ಮಾಡಲಾಗಿದೆ ಎಂದು ಅವರು ಟೀಕಿಸಿದರು.


ಈ ಬಜೆಟ್ ನಲ್ಲಿ ಉತ್ತರ ಕರ್ನಾಟಕದ ಮಹತ್ವದ ಯೋಜನೆಗಳಾದ ಮಹದಾಯಿ ಹಾಗೂ‌ ಕಳಸಾ ಬಂಡೂರಿ, ಕೃಷ್ಣಾ ಮೇಲ್ದಂಡೆ, ಅಲ್ಲದೆ ನೂತನ ತಾಲೂಕುಗಳಿಗೆ ರಾಜ್ಯ ಬಜೆಟ್‌ನಲ್ಲಿ ಅನುದಾನ ಘೋಷಣೆ ಮಾಡಿಲ್ಲ ಎಂದು ಮೈತ್ರಿ ಸರ್ಕಾರದ ವಿರುದ್ದ ಆಕ್ರೋಶ ವ್ಯಕ್ತಪಡಿಸಿದರು.