ಈಶಾನ್ಯ ರಾಜ್ಯಗಳ ಚುನಾವಣಾ ಫಲಿತಾಂಶದಿಂದ ಕರ್ನಾಟಕಕ್ಕೆ ತೊಡಕಿಲ್ಲ-ಸಿದ್ದರಾಮಯ್ಯ

ತ್ರಿಪುರಾ, ಮೇಘಾಲಯ, ಮತ್ತು ನಾಗಾಲ್ಯಾಂಡ್ ವಿಧಾನಸಭಾ ಚುನಾವಣೆಯ ಫಲಿತಾಂಶ ಕರ್ನಾಟಕದ ವಿಧಾನಸಭಾ ಚುನಾವಣೆ ಮೇಲೆ ಯಾವುದೇ ರೀತಿಯ ಪರಿಣಾಮ ಬೀರುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

Last Updated : Mar 4, 2018, 10:37 AM IST
ಈಶಾನ್ಯ ರಾಜ್ಯಗಳ ಚುನಾವಣಾ ಫಲಿತಾಂಶದಿಂದ ಕರ್ನಾಟಕಕ್ಕೆ ತೊಡಕಿಲ್ಲ-ಸಿದ್ದರಾಮಯ್ಯ title=

ಹುಬ್ಬಳ್ಳಿ: ತ್ರಿಪುರಾ, ಮೇಘಾಲಯ, ಮತ್ತು ನಾಗಾಲ್ಯಾಂಡ್ ವಿಧಾನಸಭಾ ಚುನಾವಣೆಯ ಫಲಿತಾಂಶ ಕರ್ನಾಟಕದ ವಿಧಾನಸಭಾ ಚುನಾವಣೆ ಮೇಲೆ ಯಾವುದೇ ರೀತಿಯ ಪರಿಣಾಮ ಬೀರುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕರ್ನಾಟಕದ ರಾಜಕೀಯ ಪರಿಸ್ಥಿತಿ ಈಶಾನ್ಯ ರಾಜ್ಯಗಳಿಗಿಂತ ಸಂಪೂರ್ಣ ಬೇರೆಯೇ ಆಗಿದ್ದು, ಈಶಾನ್ಯ ರಾಜ್ಯಗಳ ಚುನಾವಣಾ ಫಲಿತಾಂಶದಿಂದ ಕರ್ನಾಟಕ ವಿಧಾನಸಭೆ ಚುನಾವಣೆ ಮೇಲೆ ಯಾವುದೀ ಪರಿಣಾಮ ಬೀರುವುದಿಲ್ಲ ಎಂದು ಅವರು ತಿಳಿಸಿದರು. 

ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಬ್ಯಾಲೆಟ್ ಕಾಗದ ಬಳಕೆ ಮಾಡಬೇಕು ಎಂದು ಒತ್ತಾಯಿಸಿದ ಅವರು, ವಿದ್ಯುನ್ಮಾನ ಮತಯಂತ್ರಗಳಲ್ಲಿ ನಂಬಿಕೆ ಇದೆ. ಆದರೆ, ರಾಜ್ಯದಲ್ಲಿ ನಡೆಯಲಿರುವ ವಿಧಾನಸಭೆ ಚುನಾವಣೆಯಲ್ಲಿ ಬ್ಯಾಲೆಟ್ ಕಾಗದ ಬಳಸಬೇಕೇಂಬುದು ನನ್ನ ವೈಯಕ್ತಿಕ ಅಭಿಪ್ರಾಯವಾಗಿದೆ ಎಂದರು.

ತ್ರಿಪುರಾ, ಮೇಘಾಲಯ, ನಾಗಲ್ಯಾಂಡ್ ಚುನಾವಣಾ ಫಲಿತಾಂಶದಿಂದ ಈ  ರೀತಿ ಹೇಳುತ್ತಿಲ್ಲ ಅನೇಕ ರಾಷ್ಟ್ರಗಳು ಸಾಂಪ್ರದಾಯಿಕ ಚುನಾವಣಾ ವ್ಯವಸ್ಥೆಗೆ ಮರಳಿವೆ. ಆದ್ದರಿಂದ ಬ್ಯಾಲೆಟ್ ವ್ಯವಸ್ಥೆಗೆ ಮರಳುವುದಕ್ಕೆ ಇದು ಸೂಕ್ತ ಕಾಲವಾಗಿದೆ ಎಂದು ಸಿದ್ದರಾಮಯ್ಯ ಅಭಿಪ್ರಾಯಪಟ್ಟರು.

Trending News