ಸಾಲಮನ್ನಾಗೂ ಅಭಿವೃದ್ಧಿಗೂ ಸಂಬಂಧವಿಲ್ಲ- ಮುಖ್ಯಮಂತ್ರಿ ಕುಮಾರಸ್ವಾಮಿ

ಸರಕಾರದ ಬೊಕ್ಕಸದಲ್ಲಿ ಸಾಕಷ್ಟು ಹಣವಿದೆ- ಮುಖ್ಯಮಂತ್ರಿ ಕುಮಾರಸ್ವಾಮಿ

Last Updated : Oct 15, 2018, 09:12 AM IST
ಸಾಲಮನ್ನಾಗೂ ಅಭಿವೃದ್ಧಿಗೂ ಸಂಬಂಧವಿಲ್ಲ- ಮುಖ್ಯಮಂತ್ರಿ ಕುಮಾರಸ್ವಾಮಿ title=
File image

ಮಂಗಳೂರು: ರಾಜ್ಯ ಸರಕಾರ ರೈತರಲ್ಲಿ ನೆಮ್ಮದಿ ತರಲು  ಸಾಲಮನ್ನಾ ಯೋಜನೆ ಜಾರಿಗೆ ತಂದಿದ್ದು, ಇದರಿಂದ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಯಾವುದೇ ತೊಂದರೆಯಾಗಿಲ್ಲ. ಸರಕಾರದ ಬೊಕ್ಕಸದಲ್ಲಿ ಸಾಕಷ್ಟು ಹಣವಿದೆ ಎಂದು ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಹೇಳಿದರು. 

ಅನುದಾನ ಕೊರತೆಯಾಗಿದೆ ಎಂಬುದು ಕೇವಲ ಮಿಥ್ಯ:
ಸಾಲ ಮನ್ನಾದಿಂದ ಅಭಿವೃದ್ಧಿ ಯೋಜನೆಗಳಿಗೆ ಅನುದಾನ ಕೊರತೆಯಾಗಿದೆ ಎಂಬುದು ಕೇವಲ ಮಿಥ್ಯ. ರಾಜ್ಯ ಸರಕಾರದ ಚಾಲ್ತಿ ಖಾತೆಯಲ್ಲಿ 10 ಸಾವಿರ ಕೋಟಿ ರೂ.ಗಳಿಗೂ ಅಧಿಕ ಮೊತ್ತವಿದೆ. ಅಭಿವೃದ್ಧಿ ಕಾಮಗಾರಿಗಳಿಗೆ ವೇಗ ನೀಡಲಾಗಿದೆ ಎಂದು ಸಿಎಂ ಹೇಳಿದರು. 

ಸಾಲ ವಸೂಲಾತಿ ನೆಪದಲ್ಲಿ ರೈತರಿಗೆ ತೊಂದರೆಯಾದರೆ ಸಹಿಸಲಾಗದು:
ಬ್ಯಾಂಕ್ ಗಳು ರೈತರ ಸಾಲ ವಸೂಲಾತಿ ನೆಪದಲ್ಲಿ ಅವರಿಗೆ ನೋಟೀಸ್ ಜಾರಿ ಮಾಡಿ ಭಯ ಹುಟ್ಟಿಸಿದರೆ ಸಹಿಸಲಾಗದು ಎಂದು ಅವರು ಹೇಳಿದರು.

ಮಂಗಳೂರು ಅಭಿವೃದ್ದಿಗೆ ಸಕಲ ನೆರವು:
ಮಂಗಳೂರು ಅಭಿವೃದ್ದಿಗೆ ರಾಜ್ಯ ಸರಕಾರ ಎಲ್ಲ ನೆರವು ನೀಡಲಿದೆ. ಆದರೆ, ಕೈಗಾರಿಕೆ ಹೆಸರಿನಲ್ಲಿ ಪ್ರಕೃತಿಯ ಮೇಲೆ ಹಾನಿಯಾಗುವ ಯೋಜನೆ ಜಾರಿಗೆ ತರುವುದಿಲ್ಲ ಎಂದು ಮುಖ್ಯಮಂತ್ರಿ ಹೇಳಿದರು. 

ಈ ಸಂದರ್ಭದಲ್ಲಿ ನಗರಾಭಿವೃದ್ಧಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್, ಶಾಸಕರಾದ ವೇದವ್ಯಾಸ ಕಾಮತ್, ಐವನ್ ಡಿಸೋಜ, ಬಿ.ಎಂ. ಫಾರೂಖ್,  ಮಾಜಿ ಸಚಿವ ರಮಾನಾಥ ರೈ,  ಮೇಯರ್ ಭಾಸ್ಕರ್, ಮಾಜಿ ಶಾಸಕರಾದ ಮೊಹಿದೀನ್ ಬಾವಾ, ಜೆ.ಆರ್. ಲೋಬೋ, ಶಕುಂತಳಾ ಶೆಟ್ಟಿ, ಯೋಗೀಶ್ ಭಟ್  ಮತ್ತಿತರರು ಉಪಸ್ಥಿತರಿದ್ದರು. 
 

Trending News