ಚಾಮರಾಜನಗರ: ನನಗೆ ಬಿಜೆಪಿ ಸೋತದ್ದಕ್ಕೆ ಬೇಜಾರಿಲ್ಲ, ಆದರೆ,ಕಾಂಗ್ರೆಸ್ ಬಂದಿದ್ದಕ್ಕೆ ಹೆಚ್ಚು ಬೇಸರ ಎಂದು ಮಾಜಿ ಸಿಎಂ ಡಿ.ವಿ‌.ಸದಾನಂದಗೌಡ ಹೇಳಿದರು.


COMMERCIAL BREAK
SCROLL TO CONTINUE READING

ಚಾಮರಾಜನಗರದಲ್ಲಿ ಮಾಧ್ಯಮದವರೊಟ್ಟಿಗೆ ಮಾತನಾಡಿದ ಮಾಜಿ ಸಿಎಂ ಡಿ.ವಿ. ಸದಾನಂದಗೌಡ, ಕರ್ನಾಟಕದ ದುರ್ದೈವದಿಂದ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆ. ಎಂತೆಂತಾ ಮಂತ್ರಿಗಳಿದ್ದಾರೆ, ಸರ್ವರ್ ನ್ನು ಕೇಂದ್ರ ಸರ್ಕಾರ ಹ್ಯಾಕ್ ಮಾಡಿದೆ ಎನ್ನುತ್ತಾರೆ ಎಂದು ಕೈ ವಿರುದ್ಧ ಲೇವಡಿ ಮಾಡಿದರು.


ಕುಣಿಯಲಾರದವ ನೆಲ ಡೊಂಕು ಎಂದ ರೀತಿ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ನವರು ಕೇಂದ್ರ ಸರ್ಕಾರ ಅಕ್ಕಿ ಕೊಟ್ಟಿಲ್ಲ ಎನ್ನುತ್ತಿದ್ದಾರೆ‌. ಘೋಷಣೆಗೂ ಮುನ್ನ ಕಾಂಗ್ರೆಸ್ ನವರಿಗೆ ಪರಿಜ್ಞಾನ ಇರಲಿಲ್ಲವಾ?? ಮುಂದೆ ಯಾವ ರೀತಿ ತೊಂದರೆ ಉಂಟಾಗಬಹುದು ಎಂಬ ಚಿಂತನೆ ಇರಲಿಲ್ಲವಾ?? 16 ಬಾರಿ ಬಜೆಟ್ ಮಂಡಿಸಿದ್ದಾರೆ ಸಿದ್ದರಾಮಯ್ಯ, ಅವರಿಗೆ ಮುಂದಾಲೋಚನೆ ಇರಬೇಕಿತ್ತು, 16 ಬಾರಿ ಬಜೆಟ್ ಮಂಡಿಸಿದರೇ ಗದ್ದೆಯಲ್ಲಿ ಭತ್ತ ಬೆಳೆಯುವುದಿಲ್ಲ ಎಂದು ಕಿಡಿಕಾರಿದರು.


ಇದನ್ನೂ ಓದಿ- ವಿಪಕ್ಷ ನಾಯಕ ರೇಸ್ ನಲ್ಲಿ ಬೊಮ್ಮಾಯಿ- ಯತ್ನಾಳ್ : ಇಬ್ಬರು ನಾಯಕರ ಪ್ಲಸ್, ಮೈನಸ್ ಏನೇನು?


ಅಕ್ಕಿ ಕೊಡದಿರುವ ನೀಚ ಬುದ್ಧಿ ನಮಗಿಲ್ಲ, ಆ ರೀತಿ ಚೀಪ್ ಪಾಲಿಟಿಕ್ಸ್ ನ್ನು ಮುಖಂಡರು, ಕಾರ್ಯಕರ್ತರು ಮಾಡುವುದಿಲ್ಲ. ಕರ್ನಾಟಕದ ಪ್ರತಿಯೊಬ್ಬರಿಗೂ ಅಕ್ಕಿ ಸಿಗಬೇಕೆಂಬುದು ನಾಯಕರ, ಕಾರ್ಯಕರ್ತರ ಆಶಯವಾಗಿದೆ ಎಂದು ಕಾಂಗ್ರೆಸ್ ವಿರುದ್ಧ ಆಕ್ರೋಶ ಹೊರಹಾಕಿದರು.


ಸಿಎಂ-ಡಿಸಿಎಂಗೆ ಸವಾಲ್  ಹಾಕುವ ನಾಯಕ ನೇಮಕ!
ಈ ಸಂದರ್ಭದಲ್ಲಿ ವಿರೋಧ ಪಕ್ಷದ ನಾಯಕನ ಆಯ್ಕೆಯ ಬಗ್ಗೆಯೂ ಪ್ರತಿಕ್ರಿಯಿಸಿದ ಡಿವಿಎಸ್, ವಿಪಕ್ಷ ನಾಯಕನನ್ನು ನೇಮಕ ಮಾಡುವುದು ನಮ್ಮ ಧರ್ಮ. ಅಧಿವೇಶನ ಆರಂಭಗೊಳ್ಳುವ ಮುನ್ನ ವಿಪಕ್ಷ ನಾಯಕನನ್ನು ನೇಮಕ ಮಾಡಲಾಗುವುದು. ಸಿಎಂ‌ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ಜುಗಲ್ಬಂದಿಗೆ ಸವಾಲೊಡ್ಡುವ ನಾಯಕನನ್ನು ನೇಮಕ ಮಾಡಲಾಗುವುದು, ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳಲಾಗುವುದು ಎಂದರು.


ಇದೇ ವೇಳೆ ಕೆಲವರು ಹೊಂದಾಣಿಕೆ ರಾಜಕಾರಣ ಮಾಡುತ್ತಾರೆ ಎಂಬ ಹೇಳಿಕೆಗಳಿಗೆ ಪ್ರತಿಕ್ರಿಯಿಸಿ, ನಮ್ಮ ಪಕ್ಷದಲ್ಲಿ ಹೊಂದಾಣಿಕೆ ರಾಜಕರಣ ಯಾರೂ ಮಾಡುವುದಿಲ್ಲ, ಆ ರೀತಿ ರಾಜಕಾರಣ ಮಾಡಿದ್ದರೇ ಹಲವು ಕ್ಷೇತ್ರಗಳಲ್ಲಿ ಗೆಲ್ಲಬಹುದಿತ್ತು. ಆದರೆ ನಾವು ಸೋತರೂ ಪರವಾಗಿಲ್ಲ, ಹೊಂದಾಣಿಕೆ ರಾಜಕಾರಣ ಮಾಡಲ್ಲ ಎಂಬುದು ಮುಖಂಡರ, ಪಕ್ಷದ ನಿಲುವಾಗಿದೆ ಎಂದರು. 


ಇದನ್ನೂ ಓದಿ- ಕಡಲ ದಾಟಿ ಉಪಗ್ರಹ ಉಡಾಯಿಸಿದ ಕನ್ನಡಿಗ: 25ನೇ ವಯಸ್ಸಿಗೆ ಸೈಟಿಂಸ್ಟ್ ಆಗಿ ಸಾಧನೆ


ಇನ್ನು, ಸೋಲಿನ ಪರಾಮರ್ಶೆಯ ಕಾರ್ಯಕರ್ತರ ಸಭೆಗೆ ಮಾಜಿ ಸಚಿವ ವಿ. ಸೋಮಣ್ಣ ಗೈರಾಗಿದ್ದರ ಸಂಬಂಧ ಪ್ರತಿಕ್ರಿಯಿಸಿ, ಸೋಮಣ್ಣ ತಾನು ಬರುವುದಿಲ್ಲ ಎಂದು ಹೇಳಿದರು. ಸೋಲಿನ ನೋವಿನಿಂದ ಅವರಿನ್ನೂ ಹೊರಬಂದಿಲ್ಲ, ಆದರೆ ಅವರಿಗೆ ಯಾರಾ ಮೇಲೂ ಕೋಪ ಇಲ್ಲಾ ಎಂದು ಸ್ಪಷ್ಟಪಡಿಸಿದರು. 


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 
Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ