ಬೆಂಗಳೂರು : 2023ರ ರಾಜ್ಯ ವಿಧಾನಸಭೆ ಎಲೆಕ್ಷನ್ ನಲ್ಲಿ ಸ್ಪರ್ಧಿಸುತ್ತೇನೆ. ಆದ್ರೆ, ಯಾವ ಮತ ಕ್ಷೇತ್ರದಿಂದ ಸ್ಪರ್ಧಿಸುತ್ತೇನೆ ಎಂಬುದು ಇನ್ನೂ ನಿರ್ಧರಿಸಿಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. 


COMMERCIAL BREAK
SCROLL TO CONTINUE READING

ಈ ಕುರಿತು ಮಾತನಾಡಿದ ಮಾಜಿ ಸಿಎಂ ಸಿದ್ದರಾಮಯ್ಯ(Siddaramaiah), ಸದ್ಯ ನಾನು ಬಾದಾಮಿ ಕ್ಷೇತ್ರದ ಶಾಸಕ. ಚುನಾವಣೆಗೆ ಇನ್ನೂ ಎರಡು ವರ್ಷ ಇದೆ. ಚಾಮರಾಜಪೇಟೆಯಿಂದ ಸ್ಪರ್ಧಿಸಲಿದ್ದೇನೆ ಎಂದು ನಾನೂ ಎಲ್ಲಿಯೂ ಹೇಳಿಲ್ಲ. ಆದರೆ, ಅಲ್ಲಿಂದ ಸ್ಪರ್ಧಿಸುವಂತೆ ಕ್ಷೇತ್ರದ ಶಾಸಕ ಜಮೀರ್‌ ಅಹ್ಮದ್‌ ಖಾನ್‌ ಹೇಳುತ್ತಿದ್ದಾರೆ' ಎಂದರು.


ಇದನ್ನೂ ಓದಿ : Covidwar Karnataka : ನಿಮ್ಮ ಊರಿನಲ್ಲಿ ಎಷ್ಟು 'ಕೊರೋನಾ ಪ್ರಕರಣಗಳಿವೆ' ತಿಳಿಯಬೇಕೆ? ಹಾಗಿದ್ದರೇ ಇಲ್ಲಿ ಓದಿ!


ಚಾಮರಾಜಪೇಟೆ(Chamarajpet)ಯಿಂದ ಸ್ಪರ್ಧಿಸಬಹುದೇ ಎಂಬ ಪ್ರಶ್ನೆಗೆ ಸಿದ್ದರಾಮಯ್ಯ ಉತ್ತರಿಸುತ್ತಿದ್ದಾಗ, ಮಧ್ಯಪ್ರವೇಶಿಸಿದ ಜಮೀರ್ ಅಹ್ಮದ್ ಖಾನ್, ಅವರು ಸ್ಪರ್ಧಿಸಬೇಕು ಎಂಬುದು ನನ್ನ ಆಸೆ ಎಂದು ಹೇಳಿದರು. ಚಾಮರಾಜಪೇಟೆ ಕ್ಷೇತ್ರವು ಅಲ್ಪಸಂಖ್ಯಾತ ಸಮುದಾಯದ ಮತಗಳು ಅಧಿಕ ಸಂಖ್ಯೆಯಲ್ಲಿದೆ ಎಂದು ಹೇಳಿದರು.


ಇದನ್ನೂ ಓದಿ : SR Vishwanath : 'ಮುಂದಿನ 2 ವರ್ಷ ಯಡಿಯೂರಪ್ಪ‌ರೇ ರಾಜ್ಯದ ಸಿಎಂ'


2018 ರ ವಿಧಾನಸಭಾ ಚುನಾವಣೆ(2018 Assembly Polls)ಯಲ್ಲಿ ಸೋಲಿನ ರುಚಿ ಕಂಡಿದ್ದ ಸಿದ್ದರಾಮಯ್ಯ ಮೈಸೂರಿನ ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದಿಂದ ಮತ್ತೆ ಸ್ಪರ್ಧಿಸುವುದಿಲ್ಲ ಎಂದು ಈಗಾಗಲೇ ಹೇಳಿಕೊಂಡಿದ್ದಾರೆ.


ಇದನ್ನೂ ಓದಿ : ಕರ್ನಾಟಕದ ಸಾಕ್ಷಿಪ್ರಜ್ಞೆ ಗಾಂಧಿವಾದಿ ಎಚ್.ಎಸ್ ದೊರೆಸ್ವಾಮಿ ಇನ್ನಿಲ್ಲ


ಆಗ ಸಿಎಂ ಆಗಿದ್ದ ಸಿದ್ದರಾಮಯ್ಯ ಚಾಮುಂಡೇಶ್ವರಿ ಮತ ಕ್ಷೇತ್ರದಲ್ಲಿ ಜೆಡಿಎಸ್ ನ ಜಿ ಟಿ ದೇವೇಗೌಡರ(GT Devegowda)ವಿರುದ್ಧ 36,042 ಮತಗಳ ಅಂತರದಿಂದ ಸೋಲು ಅನುಭವಿಸಿದ್ದಾರೆ.


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe 
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.