ಬೆಂಗಳೂರು : ಯಾವ ರೈತರನ್ನೂ ತಮ್ಮ ಜಮೀನುಗಳಿಂದ ಒಕ್ಕಲೆಬ್ಬಿಸುವುದಿಲ್ಲ ಹಾಗೂ ರೈತರಿಗೆ ನೋಟಿಸ್ ನೀಡಲಾಗಿದ್ದರೆ, ಅದನ್ನು ವಾಪಸ್ಸು ಪಡೆಯಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ರಾಜ್ಯದ ವಿಜಯಪುರ,ಯಾದಗಿರಿ ಹಾಗೂ ಧಾರವಾಡ ಜಿಲ್ಲೆಗಳಲ್ಲಿ ವಕ್ಫ್ ಆಸ್ತಿ ಎಂದು ರೈತರಿಗೆ ನೋಟಿಸ್ ನೀಡಿರುವ ಬಗ್ಗೆ ಪತ್ರಕರ್ತರ ಪ್ರಶ್ನೆಗೆ ಅವರು ಪ್ರತಿಕ್ರಿಯೆ ನೀಡಿದರು.
ಇದನ್ನೂ ಓದಿ : ಕನ್ನಡ ಬಿಟ್ಟು ಮರಾಠಿಯಲ್ಲಿ ಭಾಷಣ ಮಾಡಿದ ಕಾಂಗ್ರೆಸ್ ಶಾಸಕ ರಾಜು ಕಾಗೆ!
ಕಂದಾಯಸಚಿವ ಕೃಷ್ಣಬೈರೇಗೌಡ, ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ್, ವಕ್ಫ್ ಸಚಿವ ಜಮೀರ್ ಅಹ್ಮದ್ ಅವರು ನಿನ್ನೆ ಜಂಟಿ ಪತ್ರಿಕಾಗೋಷ್ಠಿಯನ್ನು ನಡೆಸಿ ಈ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ ಎಂದು ತಿಳಿಸಿದರು.
ನಿನ್ನೆ ನಡೆದ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಜಾರಿಗೊಳಿಸಲು ಸರ್ಕಾರ ತೀರ್ಮಾನಿಸಿದೆ. ಈ ನಿಟ್ಟಿನಲ್ಲಿ ಹೈಕೋರ್ಟ್ ನ ನಿವೃತ್ತ ನ್ಯಾಯಮೂರ್ತಿ ನೇತೃತ್ವದ ಏಕ ಸದಸ್ಯ ಆಯೋಗ ರಚಿಸಲು ತೀರ್ಮಾನಿಸಲಾಗಿದ್ದು, ಒಳಮೀಸಲಾತಿ ಜಾರಿ ಬಗ್ಗೆ ಪರಾಮರ್ಶೆ ನಡೆಸಿ ವರದಿ ನೀಡಲು ಮೂರು ತಿಂಗಳ ಅವಧಿ ನೀಡಲಾಗುವುದು. ಈಗಾಗಲೇ ನೇಮಕಾತಿಗೆ ಮಾಡಿರುವ ಅಧಿಸೂಚನೆಗಳನ್ನು ಹೊರತುಪಡಿಸಿ,ಏಕ ಸದಸ್ಯ ಸದಸ್ಯ ಾಯೋಗದ ವರದಿ ಬರುವವರೆಗೆ ಎಲ್ಲ ಸರ್ಕಾರಿ ನೇಮಕಾತಿಯ ಅಧಿಸೂಚನೆಯನ್ನು ಹೊರಡಿಸುವುದಿಲ್ಲ ಎಂದು ತಿಳಿಸಿದರು.
ಇದನ್ನೂ ಓದಿ : ಚನ್ನಪಟ್ಟಣ ಉಪಚುನಾವಣೆ: ಪ್ರಚಾರಕ್ಕೂ ಮುನ್ನ ದೇವರ ದರ್ಶನ ಪಡೆದ ನಿಖಿಲ್ ಕುಮಾರಸ್ವಾಮಿ
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.