ಕೊಪ್ಪಳ: ಕರ್ನಾಟಕ ಸರ್ಕಾರವು 2023-24 ನೇ ಸಾಲಿನ ಹಿಂಗಾರು ಹಂಗಾಮಿನಲ್ಲಿ ಮರು ವಿನ್ಯಾಸಗೊಳಿಸಿದ ಹವಾಮಾನ ಆಧಾರಿತ ಬೆಳೆ ವಿಮಾ ಯೋಜನೆಯನ್ನು ಅನುಷ್ಠಾನಗೊಳಿಸಲು ಮಂಜೂರಾತಿ ನೀಡಿದ್ದು, ಈ ಯೋಜನೆಯಡಿ ಜಿಲ್ಲೆಯ ಎಲ್ಲಾ ರೈತರು ಹಸಿಮೆಣಸಿನಕಾಯಿ ಬೆಳೆಯನ್ನು ವಿಮೆಗೆ ಒಳಪಡಿಸಬಹುದು ಎಂದು ತೋಟಗಾರಿಕೆ ಉಪನಿರ್ದೇಶಕರಾದ ಕೃಷ್ಣ ಉಕ್ಕುಂದ ಅವರು ತಿಳಿಸಿದ್ದಾರೆ.


COMMERCIAL BREAK
SCROLL TO CONTINUE READING

 ಇದನ್ನೂ ಓದಿ: ಆಡಳಿತದಲ್ಲಿ ಕನ್ನಡ ಪಾಲನೆಯಾಗದಿರಲು ನಿರ್ಲಕ್ಷ್ಯವೇ ಕಾರಣ: ಸಿಎಂ ಸಿದ್ದರಾಮಯ್ಯ


ಮರುವಿನ್ಯಾಸಗೊಳಿಸಲಾದ ಹವಾಮಾನಾಧಾರಿತ ಬೆಳೆ ವಿಮಾ ಯೋಜನೆಯಡಿ ಅಧಿಸೂಚಿತ ತಾಲ್ಲೂಕುಗಳಾದ ಕೊಪ್ಪಳ, ಕುಷ್ಟಗಿ, ಗಂಗಾವತಿ, ಕಾರಟಗಿ, ಕನಕಗಿರಿ, ಕುಕನೂರು ಮತ್ತು ಯಲಬುರ್ಗಾಗಳಲ್ಲಿ ಹಸಿ ಮೆಣಸಿನಕಾಯಿಯನ್ನು ಅಧಿಸೂಚಿತ ಬೆಳೆಯಾಗಿ ಆಯ್ಕೆ ಮಾಡಲಾಗಿದೆ. ಯೋಜನೆಯಡಿ ಹಸಿ ಮೆಣಸಿನಕಾಯಿ ಬೆಳೆಗೆ ಪ್ರತಿ ಹೆಕ್ಟೇರ್‌ಗೆ ರೂ.71000/- ವಿಮಾ ಮೊತ್ತವನ್ನು ನಿಗದಿಪಡಿಸಲಾಗಿದ್ದು, ರೈತರು ರೂ.3550/- ಮೊತ್ತದ ವಿಮಾ ಕಂತನ್ನು ಪಾವತಿಸಬೇಕು. ರೈತರು ತಮ್ಮ ಪಾಲಿನ ವಿಮಾ ವಂತಿಗೆಯನ್ನು ನವೆಂಬರ್ 15 ರೊಳಗೆ ಪಾವತಿಸಿದಲ್ಲಿ ಈ ಯೋಜನೆಯಡಿ ಪ್ರಯೋಜನ ಪಡೆಯಬಹುದು. ವಿಮಾ ಯೋಜನೆಯ ಅನುಷ್ಠಾನಕ್ಕಾಗಿ ಅಗ್ರಿಕಲ್ಚರ್ ಇನ್‌ಶೂರೆನ್ಸ್ ಕಂಪೆನಿ ರವರನ್ನು ಆಯ್ಕೆ ಮಾಡಲಾಗಿದೆ.


ಇದನ್ನೂ ಓದಿ: ಕುಮಾರಸ್ವಾಮಿ ಮಾತಿಗೆ ಅವರದ ಪಕ್ಷದಲ್ಲೇ ನಯಾಪೈಸೆ ಕಿಮ್ಮತ್ತಿಲ್ಲ: ಕಾಂಗ್ರೆಸ್ ಟೀಕೆ


ವಿಮಾ ಮೊತ್ತವು ಬೆಳೆ ಸಾಲ ಪಡೆದ ಮತ್ತು ಬೆಳೆ ಸಾಲ ಪಡೆಯದ ರೈತರಿಗೆ ಒಂದೇ ಆಗಿರುತ್ತದೆ. ಬೆಳೆ ಸಾಲ ಪಡೆಯದ ರೈತರು ವಿಮೆ ಕಟ್ಟಲು ಹತ್ತಿರದ ರಾಷ್ಟ್ರೀಕೃತ ಬ್ಯಾಂಕ್‌ಗಳಿಗೆ/ಸಾಮಾನ್ಯ ಸೇವಾ ಕೇಂದ್ರಗಳಿಗೆ ನಿಗದಿತ ಅರ್ಜಿಗಳೊಂದಿಗೆ ಭೂಮಿ ಹೊಂದಿರುವ ದಾಖಲೆಗಳಾದ ಪಹಣಿ, ಬ್ಯಾಂಕ್ ಪಾಸ್ ಪುಸ್ತಕ, ಆಧಾರ್ ಕಾರ್ಡ್ ಮತ್ತು ಸ್ವಯಂ ಘೋಷಿತ ಬೆಳೆ ವಿವರಗಳೊಂದಿಗೆ ಸಂಪರ್ಕಿಸಬಹುದು.


ಹೆಚ್ಚಿನ ಮಾಹಿತಿಗಾಗಿ ಸಮೀಪದ ಹೋಬಳಿ ಮಟ್ಟದ ತೋಟಗಾರಿಕೆ ಅಧಿಕಾರಿಗಳು ಹಾಗೂ ಕೃಷಿ ಅಧಿಕಾರಿಗಳು ಅಥವಾ ಸಮೀಪದ ಯಾವುದೇ ಬ್ಯಾಂಕ್‌ಗಳಿಗೆ/ ಸಾಮಾನ್ಯ ಸೇವಾ ಕೇಂದ್ರಗಳಿಗೆ ಭೇಟಿ ನೀಡಿ ಯೋಜನೆಯಡಿ ಆಯ್ಕೆಯಾಗಿರುವ ಗ್ರಾಮ ಪಂಚಾಯತಿ ಮತ್ತು ಬೆಳೆಗಳ ಬಗ್ಗೆ ಮಾಹಿತಿ ಪಡೆದುಕೊಳ್ಳುವಂತೆ ರೈತರಲ್ಲ್ಲಿ ತೋಟಗಾರಿಕೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ಕೋರಿದ್ದಾರೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.