ಬೆಂಗಳೂರು : ಕುಡಿಯುವ ನೀರಿಗೆ ಕಲುಷಿತ ನೀರು ಬೆರೆಯುತ್ತಿರುವ ಬಗ್ಗೆ ಮಾಹಿತಿ ಬಂದ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ ಎಲ್ಲೆಡೆ ಕುಡಿಯುವ ನೀರನ್ನು ಪರೀಕ್ಷೆ ಒಳಪಡಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.


COMMERCIAL BREAK
SCROLL TO CONTINUE READING

“ಮುಖ್ಯಮಂತ್ರಿಗಳು ನಿನ್ನೆ ನಗರ ಪ್ರದಕ್ಷಿಣೆ ಮಾಡಿ ವಿವಿಧ ಕ್ರಮಗಳ ಬಗ್ಗೆ ಅಧಿಕಾರಿಗಳಿಗೆ ಸೂಕ್ತ ನಿರ್ದೇಶನ ನೀಡಿದ್ದಾರೆ. ಶೀಘ್ರದಲ್ಲೇ ಕಾರ್ಯಪಡೆ ರಚನೆಗೆ ಸೂಚನೆ ನೀಡಿದ್ದು, ಎಲ್ಲೆಲ್ಲಿ ಯಾವ ಕಾರ್ಯಗಳು ಸಾಗಬೇಕು ಎಂದು ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.ರಾಜ್ಯದಲ್ಲಿ ಕೆಲವು ಕಡೆ ಕುಡಿಯುವ ನೀರು ಕಲುಷಿತವಾಗಿ ಕಾಲರ ಸಂಭವಿಸಿರುವ ಪ್ರಕರಣಗಳು ಗಮನಕ್ಕೆ ಬಂದಿವೆ. ಹೀಗಾಗಿ ಬೆಂಗಳೂರಿನ ಎಲ್ಲೆಡೆ ಕುಡಿಯುವ ನೀರಿನ ಪರಿಶೀಲನೆ ನಡೆಸಲು ವ್ಯವಸ್ಥೆ ಮಾಡಬೇಕಾಗಿದೆ. ಈ ಬಗ್ಗೆ ಮುಖ್ಯಮಂತ್ರಿಗಳ ಜತೆ ಚರ್ಚೆ ಮಾಡಲಾಗಿದೆ.


ಇದನ್ನೂ ಓದಿ : ಗಡಿಜಿಲ್ಲೆಯಲ್ಲಿ ಮೊದಲ ದಿನ ನಡೆದುಕೊಂಡು ಆನೆ ಲೆಕ್ಕ ಹಾಕಿದ ಸಿಬ್ಬಂದಿ


ಬೆಂಗಳೂರು ಹಾಗೂ ಬೇರೆ ಭಾಗಗಳಲ್ಲಿ ಜನರಿಗೆ ಕುಡಿಯಲು ಗುಣಮಟ್ಟದ ನೀರು ನೀಡಬೇಕು ಎಂದು ಅಧಿಕಾರಿಗಳಿಗೆ ಮುಂಜಾಗ್ರತೆಯಿಂದ ಎಚ್ಚರಿಕೆ ನೀಡಿದ್ದೇವೆ. ಇನ್ನು ಬೆಂಗಳೂರಿನಲ್ಲಿರುವ ಎಲ್ಲಾ ಶುದ್ಧ ಕುಡಿಯುವ ನೀರಿನ ಘಟಕಗಳನ್ನು ರಿಪೇರಿ ಮಾಡಲು ಮಾರ್ಗದರ್ಶನ ನೀಡಲಾಗಿದೆ.ಇನ್ನು ಮಳೆ ಆರಂಭಕ್ಕೂ ಮುನ್ನ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವುದಾಗಿ ತಿಳಿಸಿದ್ದಾರೆ. 


ಒತ್ತುವರಿ ತೆರವು ವಿಚಾರವಾಗಿ ಬಿಎಂಟಿಎಫ್‌ ಜೊತೆ ಚರ್ಚೆ ನಡೆಸಲಾಗಿದ್ದು. ಎಲ್ಲೆಲ್ಲಿ ಬಾಕಿ ಇದೆ ಅವುಗಳನ್ನು ತೆರವುಗೊಳಿಸಲು ಸಿಎಂ ಸೂಚಿಸಿದ್ದಾರೆ ಎಂದರು.


ಇದನ್ನೂ ಓದಿ : ಅದ್ಧೂರಿಯಾಗಿ ಜರುಗಿದ ಸ್ಕಂದಗಿರಿ ಪಾರ್ವತಾಂಭ ರಥೋತ್ಸವ..! ವೈಭವ ಕಣ್ತುಂಬಿಕೊಂಡ ಸಹಸ್ರಾರು ಭಕ್ತವೃಂದ


ರಾಜಕಾಲುವೆ, ಕೆರೆ ಒತ್ತುವರಿದಾರರು ತಡೆಯಾಜ್ಞೆ ತರುತ್ತಿರುವ ವಿಚಾರವಾಗಿ ಕೇಳಿದಾಗ, “ಕೆರೆ, ಸರ್ಕಾರಿ ಉದ್ಯಾನವನ ಜಾಗ ಸೇರಿದಂತೆ ಅನೇಕ ಕಡೆಗಳಲ್ಲಿ ಒತ್ತುವರಿ ಮಾಡಿಕೊಂಡು ಮನೆ ಕಟ್ಟಿಕೊಂಡಿದ್ದಾರೆ.ಇದು ನಮ್ಮ ಗಮನದಲ್ಲಿದ್ದು.ಈ ವಿಚಾರದಲ್ಲಿ ಕಾನೂನು ಚೌಕಟ್ಟಿನಲ್ಲಿ ಕೆಲಸ ಮಾಡಬೇಕು. ಅದಕ್ಕೆ ಕಾನೂನು ಅವಕಾಶಗಳನ್ನು ಕಂಡುಕೊಳ್ಳುತ್ತೇವೆ” ಎಂದರು.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.