ಬೆಂಗಳೂರು : 11,136  ಪೌರಕಾರ್ಮಿಕರಿಗೆ ಖಾಯಂ ನೌಕರಿ ನೀಡಲು ಅಧಿಸೂಚನೆಯನ್ನು ಹೊರಡಿಸಲಾಗಿದೆ. ಉಳಿದವರಿಗೆ 2 ಮತ್ತು 3ನೇ ಹಂತದಲ್ಲಿ ಬೆಂಗಳೂರು ಮತ್ತು ಬೆಂಗಳೂರಿನಾಚೆ ಇರುವ ನಗರ ಭಾಗದಲ್ಲಿನ ಪೌರಕಾರ್ಮಿಕರು, ಅವರಿಗೆ ಸರ್ಕಾರಿ ನೌಕರರನ್ನಾಗಿ ಮಾಡಲು ಎಲ್ಲ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.


COMMERCIAL BREAK
SCROLL TO CONTINUE READING

ಅವರು ಇಂದು  ಬ್ಯಾಟರಾಯನಪುರ ವಿಧಾನಸಭಾ ಕ್ಷೇತ್ರದ  ಬಿಬಿಎಂಪಿ  ವ್ಯಾಪ್ತಿಯಲ್ಲಿ ಭಗವಾನ್ ಬುದ್ಧ ಬಾಬಾ ಸಾಹೇಬ್ ಡಾ: ಬಿ.ಆರ್. ಅಂಬೇಡ್ಕರ್  ಲೆಕ್ ಪಾರ್ಕ್ ಉದ್ಯಾನವನ ನಾಮಕರಣ ಸಮಾರಂಭದ ಉದ್ಘಾಟನೆ ಹಾಗೂ ಅಂಬೇಡ್ಕರ್ ಭವನ ಉದ್ಘಾಟಿಸಿ ಮಾತನಾಡಿದರು.ಪೌರಕಾರ್ಮಿಕರ ಆಪತ್ತು ನಿಧಿಯನ್ನು 2 ಸಾವಿರಕ್ಕೆ ಹೆಚ್ಚಿಸಲಾಗಿದೆ. ಪೌರಕಾರ್ಮಿಕರನ್ನು ಖಾಯಂಗೊಳಿಸಲು ಸಮಿತಿ ರಚಿಸಿ ಅದರ ಶಿಫಾರಸ್ಸಿನನ್ವಯ ಕ್ರಮ ಕೈಗೊಳ್ಳಲಾಗಿದೆ. ದೀನದಲಿತರ ಕಲ್ಯಾಣವೇ ಸರ್ಕಾರ ಗುರಿಯಾಗಿಸಿಕೊಂಡಿದೆ. ಇದಕ್ಕಾಗಿ ಎಲ್ಲರೂ ಒಗ್ಗಟ್ಟಾಗಿರಬೇಕು ಎಂದರು.


ಕಾನ್ಶಿರಾಮ್ ನಗರದ ಅಭಿವೃದ್ಧಿಗೆ ಕುಡಿಯುವ ನೀರು, ರಸ್ತೆ ಸೇರಿದಂತೆ ಸಮಗ್ರ ಅಭಿವೃದ್ಧಿಗೆ ಸರ್ಕಾರ ಬದ್ಧವಾಗಿದೆ. ಅಂಬೇಡ್ಕರ್ ಭವನದಲ್ಲಿರುವ ಕಾರ್ಯಕ್ರಮಗಳು , ಸಮಾಜದ ಅಭಿವೃದ್ಧಿಗೆ ಪೂರಕವಾಗಿರಬೇಕು. ಸಕಾರಾತ್ಮಕ ಚಿಂತನೆಯ ಕಾರ್ಯಕ್ರಮಗಳು ಇಲ್ಲಿ ನಡೆಯಬೇಕು ಎಂದರು.


ಸಮಾರಂಭದಲ್ಲಿ ಸಮಾಜ ಕಲ್ಯಾಣ ಸಚಿವ ಕೋಟ ಶ್ರೀ ನಿವಾಸ ಪೂಜಾರಿ, ಸಚಿವ ಗೋವಿಂದ ಕಾರಜೋಳ ಮೊದಲಾದವರು ಉಪಸ್ಥಿತರಿದ್ದರು.https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ