ಕಾದಂಬರಿಕಾರ ಎಸ್.ಎಲ್.ಭೈರಪ್ಪಗೆ ನೃಪತುಂಗ ಪ್ರಶಸ್ತಿ
2017ನೇ ಸಾಲಿನ ನೃಪತುಂಗ ಪ್ರಶಸ್ತಿಗೆ ಖ್ಯಾತ ಸಾಹಿತಿ ಮತ್ತು ಕಾದಂಬರಿಗಾರ ಎಸ್.ಎಲ್.ಭೈರಪ್ಪ ಭಾಜನರಾಗಿದ್ದಾರೆ.
ಬೆಂಗಳೂರು : ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ನೀಡುವ 2017ನೇ ಸಾಲಿನ ನೃಪತುಂಗ ಪ್ರಶಸ್ತಿಗೆ ಖ್ಯಾತ ಸಾಹಿತಿ ಮತ್ತು ಕಾದಂಬರಿಗಾರ ಎಸ್.ಎಲ್.ಭೈರಪ್ಪ ಭಾಜನರಾಗಿದ್ದಾರೆ.
ನೃಪತುಂಗ ಪ್ರಶಸ್ತಿಯು ಏಳು ಲಕ್ಷ ರೂ. ನಗದು, ಫಲಕ, ಪ್ರಶಸ್ತಿ ಪತ್ರ ಮತ್ತು ಸ್ಮರಣಿಕೆಯನ್ನು ಒಳಗೊಂಡಿರುತ್ತದೆ. ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಡಾ. ಮನು ಬಳಿಗಾರ್ ಅವರ ಅಧ್ಯಕ್ಷತೆಯ ಆಯ್ಕೆ ಸಮಿತಿಯಲ್ಲಿ ಡಾ. ಎಸ್‍ಎಲ್ ಭೈರಪ್ಪ ಅವರನ್ನು ಆಯ್ಕೆ ಮಾಡಿರುವುದಾಗಿ ಕಸಾಪ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.
ನೃಪತುಂಗ ಸಾಹಿತ್ಯ ಪ್ರಶಸ್ತಿ ಯನ್ನು ಕನ್ನಡದ ಜ್ಞಾನಪೀಠ ಪ್ರಶಸ್ತಿಯೆಂದೇ ಕರೆಯಲಾಗುತ್ತದೆ. ಈ ಪ್ರಶಸ್ತಿಯನ್ನು 2008 ರಿಂದ ಪ್ರತಿ ವರ್ಷ ನೀಡಲಾಗುತ್ತಿದೆ.
ಇನ್ನು 2017 ರ ಮಯೂರ ವರ್ಮ ಸಾಹಿತ್ಯ ಪ್ರಶಸ್ತಿಗೆ ಶ್ರೀ ರಾಮಲಿಂಗೇಶ್ವರ(ಸಿಸಿರಾ), ಡಾ. ನಂದಿನಿ ಸಿ. ಹಾಗೂ ಶ್ರೀಮತಿ ಶಾಂತಿ ಕೆ.ಅಪ್ಪಣ್ಣ ಅವರನ್ನು ಆಯ್ಕೆ ಮಾಡಲಾಗಿದೆ. ಪ್ರಶಸ್ತಿಯು 25 ಸಾವಿರ ರೂ. ನಗದು, ಫಲಕ, ಪ್ರಶಸ್ತಿ ಪತ್ರವನ್ನು ಒಳಗೊಂಡಿದೆ.