NWKRTC 'Sarige Sanjeevini' : (NWKRTC) ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ನೌಕರರಿಗೆ ಇಂದಿನಿಂದ ನಗದು ರಹಿತ ವೈದ್ಯಕೀಯ ಸೇವೆ ಕಲ್ಪಿಸಲು 'ಸಾರಿಗೆ ಸಂಜೀವಿನಿ' ಯೋಜನೆಯನ್ನು ಜಾರಿಗೊಳಿಸಲಾಗಿದೆ. ಹುಬ್ಬಳ್ಳಿಯ ಗೋಕುಲ ರಸ್ತೆಯಲ್ಲಿರುವ ವಾಯುವ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಕೇಂದ್ರ ಕಚೇರಿ ಯಲ್ಲಿ ಸಾರಿಗೆ ಇಲಾಖೆ ಸಚಿವ ರಾಮಲಿಂಗಾ ರೆಡ್ಡಿ ಅವರು 'ಸಾರಿಗೆ ಸಂಜೀವಿನಿ' ಯೋಜನೆಗೆ ಬುಧವಾರ ಚಾಲನೆ ನೀಡಿದರು.  


COMMERCIAL BREAK
SCROLL TO CONTINUE READING

380ಕ್ಕೂ ಹೆಚ್ಚಿನ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೌಕರರಿಗೆ ಉತ್ತಮ ಆರೋಗ್ಯ ಮತ್ತು ಉತ್ತಮ ದರ್ಜೆಯ ಚಿಕಿತ್ಸೆಗಾಗಿ 106 ಖಾಸಗಿ ಆಸ್ಪತ್ರೆಗಳಿಗೆ ಹಾಗೂ ಸರ್ಕಾರವು ಗುರುತಿಸಿರುವ 380ಕ್ಕೂ ಹೆಚ್ಚಿನ ಆಸ್ಪತ್ರೆಗಳಿಗೆ ಮಾನ್ಯತೆ ನೀಡಿ ವೈದ್ಯಕೀಯ ಚಿಕಿತ್ಸೆಯ ಸೌಲಭ್ಯಕ್ಕೆ ಅನುವು ಮಾಡಿಕೊಡಲಾಗಿದ್ದು, ಉತ್ತರ ಕರ್ನಾಟಕ ಭಾಗದ NWKRTC ಸಂಸ್ಥೆಯು ವ್ಯಾಪ್ತಿಯಲ್ಲಿ ಧಾರವಾಡ, ಬೆಳಗಾವಿ, ಬಾಗಲಕೋಟೆ, ಗದಗ, ಹಾವೇರಿ ಮತ್ತು ಕಾರವಾರ (ಉತ್ತರ ಕನ್ನಡ) ಜಿಲ್ಲೆಗಳಿಗೆ ಸಾರಿಗೆ ಸೇವಾ ಕಾರ್ಯ ನಿರ್ವಹಿಸಲಾಗುತ್ತಿದೆ. ಈ ಸಂಸ್ಥೆಯಲ್ಲಿ ಒಟ್ಟು 21,120 ನೌಕರರು ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಅದರಲ್ಲಿ ಸುಮಾರು 15,000 ನೌಕರರು ಚಾಲಕ-ನಿರ್ವಾಹಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ ಎಂದು ಅವರು ಮಾಹಿತಿ ನೀಡಿದರು.


ಇದನ್ನು ಓದಿ :300 ವರ್ಷಗಳ ಬಳಿಕ ಶಿವರಾತ್ರಿಯಂದೇ ರಾಜಯೋಗ: ಈ ಜನ್ಮರಾಶಿಗೆ ಬಂಗಾರದ ದಿನಗಳು ಆರಂಭ, ಶಿವಾನುಗ್ರಹದಿಂದ ಬದುಕಲ್ಲಿ ಮುನ್ನಡೆಯೇ!


ಆರ್ಥಿಕ ತೊಂದರೆಯ ನೌಕರರಿಗೆ ಆರೋಗ್ಯ ಸೇವೆ ಈ ವೇಳೆ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಭರತ್ ಎಸ್ ಅವರು ಮಾತನಾಡಿ, ಸಂಸ್ಥೆಯ ಅನಾರೋಗ್ಯ ನೌಕರರು ಹಣಕಾಸಿನ ತೊಂದರೆಯಿಂದ ಬಳಸುತ್ತಿದ್ದರೆ ಅಂತವರಿಗೆ ಈ ಸಾರಿಗೆ ಸಂಜೀವಿನಿ ನಗರ ರಹಿತ ಆರೋಗ್ಯ ಸೇವೆ ನೀಡಲಿದೆ. ಈ ಉದ್ದೇಶದಿಂದ ಹುಬ್ಬಳ್ಳಿಯ ಕೀಮ್ಸ್ ಸಹಯೋಗದಲ್ಲಿ ಒಪ್ಪಂದ ಮಾಡಿಕೊಳ್ಳಲಾಗಿದೆ.


ಈ ಕುರಿತು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರು ಟ್ವೀಟ್ ಮಾಡಿದ್ದಾರೆ. ಅದರಲ್ಲಿ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ (NWKRTC) ಸಿಬ್ಬಂದಿಯ ಹಿತದೃಷ್ಟಿಯಿಂದ ಹುಬ್ಬಳ್ಳಿಯ ಪ್ರತಿಷ್ಠಿತ 'ಕಿಮ್ಸ್' ಸಹಯೋಗದಲ್ಲಿ 'ಸಾರಿಗೆ ಸಂಜೀವಿನಿ' ನಗದು ರಹಿತ ವೈದ್ಯಕೀಯ ಚಿಕಿತ್ಸೆ ಸೌಲಭ್ಯ ಕಲ್ಪಿಸಲಾಗುತ್ತದೆ. ಈ ಸಂಬಂಧ ಸಾರಿಗೆ ಸಂಸ್ಥೆಯು ವೈದ್ಯಕೀಯ ಸಂಸ್ಥೆ ಜತೆಗೆ ಒಡಂಬಡಿಕೆ ಮಾಡಿಕೊಂಡು ಅಂಕಿತ ಹಾಕಲಾಯಿತು ಎಂದು ಅವರು ತಿಳಿಸಿದರು.


ಇದನ್ನು ಓದಿ : ಮಹಾ ಶಿವರಾತ್ರಿಯಂದು ನಿಮ್ಮ ಪ್ರೀತಿಪಾತ್ರರಿಗೆ ಈ ಅದ್ಭುತ ಸಂದೇಶಗಳ ಮೂಲಕ ಶುಭಾಶಯ ತಿಳಿಸಿ


ಕಾರ್ಯಕ್ರಮದಲ್ಲಿ ಹುಬ್ಬಳ್ಳಿ ಕಿಮ್ಸ್ ನಿರ್ದೇಶಕರಾದ ಡಾ, ಎಸ್. ಎಫ್.ಕಮ್ಮಾರ, ಕಿಮ್ಸ್ ಪ್ರಾಂಶುಪಾಲ ಡಾ. ಈಶ್ವರ ಹೊಸಮನಿ, ಡಾ. ಲಕ್ಷ್ಮೀಕಾಂತ ಲೋಕರೆ ಸೇರಿದಂತೆ ಕಿಮ್ಸ್ ಕಾರ್ಮಿಕ ಸಂಘಟನೆಯ ಪ್ರತಿನಿಧಿಗಳು, ಸಿಬ್ಬಂದಿ ಮತ್ತಿತರರು ಪಾಲ್ಗೊಂಡಿದ್ದರು.https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.