ಬೆಂಗಳೂರು: ಸ್ಥಳೀಯ ಸಂಸ್ಥೆಗಳಲ್ಲಿ ಹಿಂದುಳಿದ ವರ್ಗಗಳಿಗೆ ರಾಜಕೀಯ ಪ್ರಾತಿನಿಧ್ಯ ಕಲ್ಪಿಸುವ ಕುರಿತಂತೆ ವರದಿ ಸಲ್ಲಿಸಲು ರಚಿತವಾಗಿರುವ ನ್ಯಾಯಮೂರ್ತಿ ಕೆ.ಭಕ್ತವತ್ಸಲ ವಿಚಾರಣಾ ಆಯೋಗಕ್ಕೆ ಅಹವಾಲು ಅಥವಾ ಸಲಹೆಗಳನ್ನು ಜೂನ್ 8 ರೊಳಗೆ ಸಲ್ಲಿಸುವಂತೆ ಆಯೋಗವು ತಿಳಿಸಿದೆ.


COMMERCIAL BREAK
SCROLL TO CONTINUE READING

ಇದನ್ನೂ ಓದಿ: ಅತ್ಯಾಧುನಿಕ ಫೋಟಾನ್ ಸಾಧನಗಳನ್ನು ಬಿಡುಗಡೆ ಮಾಡಿದ ಸಚಿವ ಅಶ್ವತ್ಥ ನಾರಾಯಣ 


ರಾಜ್ಯ ಸರ್ಕಾರವು ತನ್ನ ಆದೇಶದಲ್ಲಿ ಮೂರು ತಿಂಗಳೊಳಗೆ ವಿಚಾರಣಾ ವರದಿಯನ್ನು ಸಲ್ಲಿಸಲು ಆಯೋಗಕ್ಕೆ ಸೂಚಿಸಿದೆ. ಸಾರ್ವಜನಿಕರು, ವಿಶೇಷವಾಗಿ ಜನ ಪ್ರತಿನಿಧಿಗಳು, ಕಾರ್ಯದರ್ಶಿಗಳು, ನ್ಯಾಯಮೂರ್ತಿ ಕೆ. ಭಕ್ತವತ್ಸಲ ವಿಚಾರಣಾ ಆಯೋಗ,ಕೊಠಡಿ ಸಂಖ್ಯೆ : 133 ಮತ್ತು 134, ಮೊದಲನೇ ಮಹಡಿ ವಿಕಾಸಸೌಧ, ಡಾ.ಅಂಬೇಡ್ಕರ್ ರಸ್ತೆ, ಬೆಂಗಳೂರು – 560 001 ಇವರಿಗೆ ತಮ್ಮ ಅಹವಾಲು ಅಥವಾ ಸಲಹೆಗಳನ್ನು ಲಿಖಿತ ರೂಪದಲ್ಲಿ ಸಲ್ಲಿಸಬಹುದು.


ಹೆಚ್ಚಿನ ಮಾಹಿತಿ ಅಥವಾ ವಿವರಗಳು, ಅವಶ್ಯಕತೆ ಇದ್ದಲ್ಲಿ, ಆಯೋಗದ ಕಾರ್ಯದರ್ಶಿಯವರನ್ನು ದೂರವಾಣಿ ಸಂಖ್ಯೆ: 080 – 2235 2152 ಹಾಗೂ 080 – 2203 4004 ಮೂಲಕ ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದು ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.


ಇದನ್ನೂ ಓದಿ:  Karnataka 2nd PUC Result : ಈ ತಿಂಗಳ ಕೊನೆ ವಾರದಲ್ಲಿ ದ್ವಿತೀಯ ಪಿಯು ಫಲಿತಾಂಶ!


https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.