ಹಿಂದುಳಿದ ವರ್ಗಗಳಿಗೆ ರಾಜಕೀಯ ಪ್ರಾತಿನಿಧ್ಯ ಅಧ್ಯಯನಕ್ಕೆ ಆಯೋಗ ರಚನೆ
ರಾಜ್ಯದಲ್ಲಿ ಹಿಂದುಳಿದ ವರ್ಗಗಳಿಗೆ ಸೂಕ್ತ ರಾಜಕೀಯ ಪ್ರಾತಿನಿಧ್ಯ ನೀಡುವ ಕುರಿತು ಅಧ್ಯಯನ ನಡೆಸಲು ಸರ್ಕಾರವು ಪ್ರತ್ಯೇಕ ಆಯೋಗವನ್ನು ನ್ಯಾಯಮೂರ್ತಿ ಭಕ್ತವತ್ಸಲ ಅವರ ಅಧ್ಯಕ್ಷತೆಯಲ್ಲಿ ರಚಿಸಿದೆ. ನಿವೃತ್ತ ಐಎಎಸ್ ಅಧಿಕಾರಿ ಸಿ.ಆರ್. ಚಿಕ್ಕಮಠ ಅವರು ಈ ಆಯೋಗದ ಸದಸ್ಯರಾಗಿ ನೇಮಕಗೊಂಡಿದ್ದಾರೆ.
ಬೆಂಗಳೂರು: ರಾಜ್ಯದಲ್ಲಿ ಹಿಂದುಳಿದ ವರ್ಗಗಳಿಗೆ ಸೂಕ್ತ ರಾಜಕೀಯ ಪ್ರಾತಿನಿಧ್ಯ ನೀಡುವ ಕುರಿತು ಅಧ್ಯಯನ ನಡೆಸಲು ಸರ್ಕಾರವು ಪ್ರತ್ಯೇಕ ಆಯೋಗವನ್ನು ನ್ಯಾಯಮೂರ್ತಿ ಭಕ್ತವತ್ಸಲ ಅವರ ಅಧ್ಯಕ್ಷತೆಯಲ್ಲಿ ರಚಿಸಿದೆ. ನಿವೃತ್ತ ಐಎಎಸ್ ಅಧಿಕಾರಿ ಸಿ.ಆರ್. ಚಿಕ್ಕಮಠ ಅವರು ಈ ಆಯೋಗದ ಸದಸ್ಯರಾಗಿ ನೇಮಕಗೊಂಡಿದ್ದಾರೆ.
ಇದನ್ನೂ ಓದಿ: ಟೆಂಡರ್ ಪೂರ್ವ ಪರಿಶೀಲನೆಗೆ ನ್ಯಾಯಮೂರ್ತಿ ರತ್ನಕಲಾ ಅಧ್ಯಕ್ಷತೆಯ ಸಮಿತಿ ರಚನೆ
ಹಿಂದುಳಿದ ವರ್ಗಗಳಿಗೆ ಪಂಚಾಯತ್ ರಾಜ್ ಸಂಸ್ಥೆಗಳು ಹಾಗೂ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಸೂಕ್ತ ಪ್ರಾತಿನಿಧ್ಯ ಕಲ್ಪಿಸುವ ಕುರಿತ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ನೀಡಿರುವ ಸೂಚನೆಯಂತೆ ಈ ಆಯೋಗ ರಚಿಸಲಾಗಿದೆ.
ಈ ಬಗ್ಗೆ ಮಾರ್ಚ್ 23 ಹಾಗೂ 31 ರಂದು ನಡೆದ ಸರ್ವಪಕ್ಷಗಳ ಪ್ರತಿನಿಧಿಗಳ ಸಭೆಯಲ್ಲಿ ಪಂಚಾಯತ್ ರಾಜ್ ಸಂಸ್ಥೆಗಳು ಮತ್ತು ನಗರ ಸ್ಥಳೀಯ ಸಂಸ್ಥೇಗಳಿಗೆ ಹಿಂದುಳಿದ ವರ್ಗಗಳಿಗೆ ಸೂಕ್ತ ಪ್ರಾತಿನಿಧ್ಯ ಕಲ್ಪಿಸಿಯೇ ಚುನಾವಣೆ ನಡೆಸುವ ಕುರಿತು ಚರ್ಚಿಸಲಾಗಿತ್ತು.
ಇದನ್ನೂ ಓದಿ: Prashanth Sambargi : 'ಮಸೀದಿಗಳ ಮೇಲಿನ ಲೌಡ್ ಸ್ಪೀಕರ್, ಹಲಾಲ್ ವಿರುದ್ಧ ನಮ್ಮ ಹೋರಾಟ ದೊಡ್ಡದಾಗಿದೆ'
ಅದರಂತೆ ಪಂಚಾಯತ್ ರಾಜ್ ಮತ್ತು ನಗರ ಸ್ಥಳೀಯ ಸಂಸ್ಥೆಗಳಲ್ಲಿ ಹಿಂದುಳಿದ ವರ್ಗಗಳ ರಾಜಕೀಯ ಹಿಂದುಳಿದಿರುವಿಕೆಯನ್ನು ಗುರುತಿಸಿ, ಈ ಹಿಂದುಳಿದ ವರ್ಗಗಳಿಗೆ ಸೂಕ್ತ ರಾಜಕೀಯ ಪ್ರಾತಿನಿಧ್ಯ ಕಲ್ಪಿಸಲು ಅಧ್ಯಯನ ನಡೆಸಿ, ಶಿಫಾರಸು ಮಾಡಲು ಈ ಆಯೋಗವನ್ನು ರಚಿಸಲಾಗಿದೆ.
https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.