ಬೆಂಗಳೂರು: ಕರ್ನಾಟಕದ ಬಾಲಕ ಹಾಗೂ ಬಾಲಕಿಯರ ತಂಡವು ಕೋಲ್ಕತ್ತಾದಲ್ಲಿ ನಡೆಯುತ್ತಿರುವ 16 ವರ್ಷದೊಳಗಿನ ರಾಷ್ಟ್ರೀಯ ವಾಲಿಬಾಲ್ ಪಂದ್ಯಾವಳಿಯಲ್ಲಿ ಭಾಗವಹಿಸಲು ತೆರಳಿತ್ತು. ಆದರೆ ಶುಕ್ರವಾರ ಒಡಿಶಾದಲ್ಲಿ ನಡೆದ  ಭೀಕರ ರೈಲು ದುರಂತದ ಪರಿಣಾಮ ವಾಲಿಬಾಲ್ ಆಟಗಾರರು ಸಂಕಷ್ಟಕ್ಕೆ ಸಿಲುಕಿದ್ದರು.


COMMERCIAL BREAK
SCROLL TO CONTINUE READING

ಮರಳಿ ರಾಜ್ಯಕ್ಕೆ ವಾಪಸ್ ಬರಲು ಪರಿತಪಿಸುತ್ತಿದ್ದ ಈ ವಾಲಿಬಾಲ್ ತಂಡಕ್ಕೆ ತಂಡಕ್ಕೆ ರಾಜ್ಯ ಸರ್ಕಾರ ನಿಯೋಜಿಸಿದ್ದ ಕಾರ್ಮಿಕ ಸಚಿವ ಸಂತೋಷ್ ಲಾಡ್ ಸಹಾಯ ಹಸ್ತ ಚಾಚಿದ್ದು, ಆಟಗಾರರನ್ನು ಸುರಕ್ಷಿತವಾಗಿ ರಾಜ್ಯಕ್ಕೆ ಕರೆತರಲು ನೆರವಾಗಿದ್ದಾರೆ.


ಇದನ್ನೂ ಓದಿ: ರಾಜ್ಯದ ಎಲ್ಲಾ ಮಹಿಳೆಯರಿಗೆ ಬಸ್ ಪ್ರಯಾಣ ಉಚಿತ


ತಂಡದ ತರಬೇತುದಾರರು ಸೇರಿದಂತೆ 32 ಸದಸ್ಯರನ್ನೊಳಗೊಂಡ ತಂಡವು ರೈಲು ದುರಂತದ ಬಳಿಕ ತಮ್ಮ ಸಂಕಷ್ಟವನ್ನು ವಿಡಿಯೋ ಮಾಡಿ ಹೇಳಿಕೊಂಡಿದ್ದರು. ಈ ವಿಡಿಯೋ ತಲುಪಿದ ತಕ್ಷಣ ಕಾರ್ಯ ಪ್ರವೃತ್ತರಾದ ಸಂತೋಷ್ ಲಾಡ್ ಮತ್ತು ಅಧಿಕಾರಿಗಳ ತಂಡ ಎಲ್ಲರಿಗೂ ಬೆಂಗಳೂರಿಗೆ ವಿಮಾನ ಟಿಕೆಟ್ ಹಾಗೂ ಸೂಕ್ತ ವಸತಿ‌, ಊಟದ ವ್ಯವಸ್ಥೆ ಒದಗಿಸಿದ್ದಾರೆ.


ತಮ್ಮ ನೆರವಿಗೆ ಧಾವಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮತ್ತು ಕಾರ್ಮಿಕ ಸಚಿವ ಸಂತೋಷ್ ಲಾಡ್ ಹಾಗೂ ಅಧಿಕಾರಿಗಳಿಗೆ ಕ್ರೀಡಾಪಟುಗಳು ಧನ್ಯವಾದ ಅರ್ಪಿಸಿದ್ದಾರೆ.


ಇದನ್ನೂ ಓದಿ: ಕಾಂಗ್ರೆಸ್ ನಿಂದ ರಾಜ್ಯವನ್ನು ಆರ್ಥಿಕ ಸಂಕಷ್ಟಕ್ಕೆ ನೂಕುವ ಕೆಲಸ : ಮಾಜಿ ಸಿಎಂ ಬಸವರಾಜ ಬೊಮ್ಮಾಯಿ‌


ತಮ್ಮ ತಂಡ ಕೈಗೊಂಡ ರಕ್ಷಣಾ ಮತ್ತು ನೆರವಿನ ಕಾರ್ಯಗಳ ಕುರಿತು ಸಚಿವ ಸಂತೋಷ್ ಲಾಡ್ ಅವರು ದೂರವಾಣಿ ಮೂಲಕ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿದ್ದಾರೆ. ಒಡಿಶಾ ರೈಲು ದುರಂತದಿಂದ ಸಂಕಷ್ಟಕ್ಕೆ ಸಿಲುಕಿರುವ ಕನ್ನಡಿಗರನ್ನು ಸುರಕ್ಷಿತವಾಗಿ ರಾಜ್ಯಕ್ಕೆ ಕರೆತರಲು ರಾಜ್ಯ ಸರ್ಕಾರ ಕಾರ್ಯಪ್ರವೃತ್ತವಾಗಿದೆ. ಸಹಾಯವಾಣಿ ಮತ್ತು ಇತರ ಕಾರ್ಯಗಳ ಮೂಲಕ ಕನ್ನಡಿಗರ ರಕ್ಷಣೆಗೆ ಮುಂದಾಗಿದೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 
Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.