ಬೆಂಗಳೂರು: ಎರಡು ವಿಮಾನಗಳಲ್ಲಿ ೮೦ಕ್ಕೂ ಹೆಚ್ಚು ಕನ್ನಡಿಗರು ಬೆಂಗಳೂರಿಗೆ ಆಗಮಿಸಿದ್ದು, ನಂತರ ರಾಜ್ಯ ಸಾರಿಗೆ ಸಂಸ್ಥೆ ಬಸ್‌ಗಳಲ್ಲಿ ತಮ್ಮ ಊರಿಗೆ ತೆರಳಿದ್ದಾರೆ.


COMMERCIAL BREAK
SCROLL TO CONTINUE READING

ಒಡಿಶಾ ರೈಲು ದುರಂತದ ಹಿನ್ನೆಲೆಯಲ್ಲಿ ಒಡಿಶಾಗೆ ಹೋಗುವ ರೈಲು ಸಂಚಾರದಲ್ಲಿ ವ್ಯತ್ಯಯ ಉಂಟಾಗಿರುವುದರಿಂದ ಬೈಯಪ್ಪನಹಳ್ಳಿ ರೈಲು ನಿಲ್ದಾಣದಲ್ಲಿ ಆಶ್ರಯ ಪಡೆದಿರುವ ೧ ಸಾವಿರದ ೫೦೦ ಕಾರ್ಮಿಕರಿಗೆ ಮುಖ್ಯಮಂತ್ರಿ ಸೂಚನೆ ಮೇರೆಗೆ ಬಿಬಿಎಂಪಿ ಹಾಗೂ ಕಾರ್ಮಿಕ ಇಲಾಖೆ ವೈದ್ಯಕೀಯ ಸೌಲಭ್ಯ ಒದಗಿಸಿದೆ.


ಒಡಿಶಾ ರೈಲು ದುರಂತ : ಆಸ್ಪತ್ರೆಗಳಿಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ ಕೇಂದ್ರ ಆರೋಗ್ಯ ಸಚಿವ


ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ಮೇರೆಗೆ ಕಾರ್ಮಿಕ ಸಚಿವ ಸಂತೋಷ್ ಲಾಡ್ ಒಡಿಶಾಗೆ ತೆರಳಿದ್ದರು.ಇದಕ್ಕೂ ಮೊದಲು ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿ ಒಡಿಶಾದ ಬಾಲಸೋರ್ ನಲ್ಲಿ ಸಂಭವಿಸಿದ ರೈಲು ದುರಂತದ ಹಿನ್ನೆಲೆಯಲ್ಲಿ ತಕ್ಷಣ ಘಟನಾ ಸ್ಥಳಕ್ಕೆ ತೆರಳಿ ಕನ್ನಡಿಗರ ಸುರಕ್ಷತೆ ಬಗ್ಗೆ ಗಮನ ಹರಿಸುವಂತೆ ಹಾಗೂ ಅವರಿಗೆ ಅಗತ್ಯ ನೆರವನ್ನು ನೀಡುವಂತೆ ಸಚಿವ ಸಂತೋಷ್ ಲಾಡ್ ಅವರಿಗೆ ಸೂಚಿಸಿದ್ದೇನೆ.ಘಟನೆಯಲ್ಲಿ ಗಾಯಗೊಂಡ ಅಥವಾ ಇತರೆ ಯಾವುದೇ ಸಮಸ್ಯೆ ಎದುರಿಸುತ್ತಿರುವ ಕನ್ನಡಿಗರ ರಕ್ಷಣೆಗೆ ನಾವು ಬದ್ಧರಿದ್ದೇವೆ. "ಪ್ರತಿಯೊಬ್ಬ ಕನ್ನಡಿಗನನ್ನು ನಾವು ಸುರಕ್ಷಿತವಾಗಿ ನಾಡಿಗೆ ಕರೆ ತರುತ್ತೇವೆ"ಎಂದು ಭರವಸೆ ನೀಡಿದ್ದರು.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 
Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ