Govt Office Timings Change: ಉತ್ತರ ಕರ್ನಾಟಕದ 9 ಜಿಲ್ಲೆಗಳ ಸರ್ಕಾರಿ ಕಚೇರಿಗಳಲ್ಲಿ ಸಮಯ ಬದಲಾವಣೆ!

ಉತ್ತರ ಕರ್ನಾಟಕ 9 ಜಿಲ್ಲೆಗಳಲ್ಲಿನ ಸರ್ಕಾರಿ ಕಚೇರಿಗಳು ಏಪ್ರಿಲ್ ಮತ್ತು ಮೇ ತಿಂಗಳುಗಳಲ್ಲಿ ಬೆಳಿಗ್ಗೆ 8 ರಿಂದ ಮಧ್ಯಾಹ್ನ 1.30 ರವರೆಗೆ ತೆರೆದಿರುತ್ತವೆ 

Last Updated : Apr 12, 2021, 06:05 PM IST
  • ಉತ್ತರ ಕರ್ನಾಟಕ 9 ಜಿಲ್ಲೆಗಳಲ್ಲಿನ ಸರ್ಕಾರಿ ಕಚೇರಿಗಳು ಏಪ್ರಿಲ್ ಮತ್ತು ಮೇ ತಿಂಗಳುಗಳಲ್ಲಿ ಬೆಳಿಗ್ಗೆ 8 ರಿಂದ ಮಧ್ಯಾಹ್ನ 1.30 ರವರೆಗೆ ತೆರೆದಿರುತ್ತವೆ
  • ಬೇಸಿಗೆಯಲ್ಲಿ ಈ ಪ್ರದೇಶಗಳಲ್ಲಿ ಹೆಚ್ಚು ಬಿಸಿಲಿರುವ ಕಾರಣದಿಂದ ಈ ನಿರ್ಧಾರಕ್ಕೆ
  • ಇಂದಿನಿಂದ ಕೆಲಸದ ಸಮಯ ಬದಲಾಗಲಿದೆ ಎಂದು ಸರ್ಕಾರದ ಆದೇಶ
Govt Office Timings Change: ಉತ್ತರ ಕರ್ನಾಟಕದ 9 ಜಿಲ್ಲೆಗಳ ಸರ್ಕಾರಿ ಕಚೇರಿಗಳಲ್ಲಿ ಸಮಯ ಬದಲಾವಣೆ! title=

ಬೆಂಗಳೂರು: ಉತ್ತರ ಕರ್ನಾಟಕ 9 ಜಿಲ್ಲೆಗಳಲ್ಲಿನ ಸರ್ಕಾರಿ ಕಚೇರಿಗಳು ಏಪ್ರಿಲ್ ಮತ್ತು ಮೇ ತಿಂಗಳುಗಳಲ್ಲಿ ಬೆಳಿಗ್ಗೆ 8 ರಿಂದ ಮಧ್ಯಾಹ್ನ 1.30 ರವರೆಗೆ ತೆರೆದಿರುತ್ತವೆ ಎಂದು ಸರ್ಕಾರ ಆದೇಶ ಹೊರಡಿಸಿದೆ.

ಬೇಸಿಗೆ(Summer)ಯಲ್ಲಿ ಈ ಪ್ರದೇಶಗಳಲ್ಲಿ  ಹೆಚ್ಚು ಬಿಸಿಲಿರುವ ಕಾರಣದಿಂದ ಈ ನಿರ್ಧಾರಕ್ಕೆ ಬರಲಾಗಿದೆ. ಏಪ್ರಿಲ್ 12 ರಿಂದ ಅಂದರೆ ಇಂದಿನಿಂದ ಕೆಲಸದ ಸಮಯ ಬದಲಾಗಲಿದೆ ಎಂದು ಸರ್ಕಾರದ ಆದೇಶದಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ : Bus Strike: 6 ನೇ ದಿನಕ್ಕೆ ಕಾಲಿಟ್ಟ ಸಾರಿಗೆ ನೌಕರರ ಮುಷ್ಕರ : ಇಂದು ಕುಟುಂಬ ಸಮೇತ ಬೀದಿಗಿಳಿದ ಸಿಬ್ಬಂದಿ!

ಸಾಮಾನ್ಯವಾಗಿ ಸರ್ಕಾರಿ ಕಚೇರಿ(Govt Office)ಗಳ ಕೆಲಸದ ಸಮಯ ಬೆಳಿಗ್ಗೆ 10 ರಿಂದ ಸಂಜೆ 5 ರವರೆಗೆ ಇರುತ್ತದೆ. ಉತ್ತರ ಕರ್ನಾಟಕ ಜಿಲ್ಲೆಗಳಲ್ಲಿ ಬೇಸಿಗೆಯ ತಿಂಗಳುಗಳಲ್ಲಿ ತಾಪಮಾನವು 40 ಡಿಗ್ರ ದಾಟುತ್ತದೆ. ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಮನವಿ ಮೇರೆಗೆ ಈ ಆದೇಶವನ್ನು ನೀಡಲಾಗಿದೆ.

ಇದನ್ನೂ ಓದಿ : BS Yediyurappa: 'ರಾಜ್ಯದಲ್ಲಿ ಅಗತ್ಯವಿದ್ದ ಏರಿಯಾಗಳಲ್ಲಿ ಸಂಪೂರ್ಣ ಲಾಕ್ ಡೌನ್ ಮಾಡಲಾಗುತ್ತೆ'

ಸಮಯದ ಬದಲಾವಣೆಯು ಕೋವಿಡ್ -19(Covid-19) ತುರ್ತು ಕಾರ್ಯಗಳಿಗೆ ಅನ್ವಯಿಸುವುದಿಲ್ಲ. ಈ ಆದೇಶ ವಿಜಯಪುರ ಮತ್ತು ಬಾಗಲಕೋಟಿ ಮತ್ತು ಕಲಬುರಗಿ ವಿಭಾಗದ ಜಿಲ್ಲೆಗಳಿಗೆ ಅನ್ವಯವಾಗುತ್ತದೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe 
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News