Govt Office Timings Change: ಉತ್ತರ ಕರ್ನಾಟಕದ 9 ಜಿಲ್ಲೆಗಳ ಸರ್ಕಾರಿ ಕಚೇರಿಗಳಲ್ಲಿ ಸಮಯ ಬದಲಾವಣೆ!
ಉತ್ತರ ಕರ್ನಾಟಕ 9 ಜಿಲ್ಲೆಗಳಲ್ಲಿನ ಸರ್ಕಾರಿ ಕಚೇರಿಗಳು ಏಪ್ರಿಲ್ ಮತ್ತು ಮೇ ತಿಂಗಳುಗಳಲ್ಲಿ ಬೆಳಿಗ್ಗೆ 8 ರಿಂದ ಮಧ್ಯಾಹ್ನ 1.30 ರವರೆಗೆ ತೆರೆದಿರುತ್ತವೆ
ಬೆಂಗಳೂರು: ಉತ್ತರ ಕರ್ನಾಟಕ 9 ಜಿಲ್ಲೆಗಳಲ್ಲಿನ ಸರ್ಕಾರಿ ಕಚೇರಿಗಳು ಏಪ್ರಿಲ್ ಮತ್ತು ಮೇ ತಿಂಗಳುಗಳಲ್ಲಿ ಬೆಳಿಗ್ಗೆ 8 ರಿಂದ ಮಧ್ಯಾಹ್ನ 1.30 ರವರೆಗೆ ತೆರೆದಿರುತ್ತವೆ ಎಂದು ಸರ್ಕಾರ ಆದೇಶ ಹೊರಡಿಸಿದೆ.
ಬೇಸಿಗೆ(Summer)ಯಲ್ಲಿ ಈ ಪ್ರದೇಶಗಳಲ್ಲಿ ಹೆಚ್ಚು ಬಿಸಿಲಿರುವ ಕಾರಣದಿಂದ ಈ ನಿರ್ಧಾರಕ್ಕೆ ಬರಲಾಗಿದೆ. ಏಪ್ರಿಲ್ 12 ರಿಂದ ಅಂದರೆ ಇಂದಿನಿಂದ ಕೆಲಸದ ಸಮಯ ಬದಲಾಗಲಿದೆ ಎಂದು ಸರ್ಕಾರದ ಆದೇಶದಲ್ಲಿ ತಿಳಿಸಲಾಗಿದೆ.
ಇದನ್ನೂ ಓದಿ : Bus Strike: 6 ನೇ ದಿನಕ್ಕೆ ಕಾಲಿಟ್ಟ ಸಾರಿಗೆ ನೌಕರರ ಮುಷ್ಕರ : ಇಂದು ಕುಟುಂಬ ಸಮೇತ ಬೀದಿಗಿಳಿದ ಸಿಬ್ಬಂದಿ!
ಸಾಮಾನ್ಯವಾಗಿ ಸರ್ಕಾರಿ ಕಚೇರಿ(Govt Office)ಗಳ ಕೆಲಸದ ಸಮಯ ಬೆಳಿಗ್ಗೆ 10 ರಿಂದ ಸಂಜೆ 5 ರವರೆಗೆ ಇರುತ್ತದೆ. ಉತ್ತರ ಕರ್ನಾಟಕ ಜಿಲ್ಲೆಗಳಲ್ಲಿ ಬೇಸಿಗೆಯ ತಿಂಗಳುಗಳಲ್ಲಿ ತಾಪಮಾನವು 40 ಡಿಗ್ರ ದಾಟುತ್ತದೆ. ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಮನವಿ ಮೇರೆಗೆ ಈ ಆದೇಶವನ್ನು ನೀಡಲಾಗಿದೆ.
ಇದನ್ನೂ ಓದಿ : BS Yediyurappa: 'ರಾಜ್ಯದಲ್ಲಿ ಅಗತ್ಯವಿದ್ದ ಏರಿಯಾಗಳಲ್ಲಿ ಸಂಪೂರ್ಣ ಲಾಕ್ ಡೌನ್ ಮಾಡಲಾಗುತ್ತೆ'
ಸಮಯದ ಬದಲಾವಣೆಯು ಕೋವಿಡ್ -19(Covid-19) ತುರ್ತು ಕಾರ್ಯಗಳಿಗೆ ಅನ್ವಯಿಸುವುದಿಲ್ಲ. ಈ ಆದೇಶ ವಿಜಯಪುರ ಮತ್ತು ಬಾಗಲಕೋಟಿ ಮತ್ತು ಕಲಬುರಗಿ ವಿಭಾಗದ ಜಿಲ್ಲೆಗಳಿಗೆ ಅನ್ವಯವಾಗುತ್ತದೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.