ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಗಳು, ಪ್ರಧಾನ ಕಾರ್ಯದರ್ಶಿಗಳು ಹಾಗೂ ಕಾರ್ಯದರ್ಶಿಗಳ ಸಭೆ ನಡೆಸಿ, ಅಗತ್ಯ ಸಲಹೆ ಮತ್ತು ಸೂಚನೆಗಳನ್ನು ನೀಡಿದರು.
ರಾಜ್ಯದಲ್ಲಿ ತೀವ್ರ ಬರ ಪರಿಸ್ಥಿತಿ ಕಾರಣಕ್ಕೆ ಬೆಳೆ ನಾಶದಿಂದ ಸಂಕಷ್ಟಕ್ಕೆ ಒಳಗಾಗಿರುವ ರೈತರಿಗೆ ಈಗಾಗಲೇ ಸರ್ಕಾರ ಘೋಷಿಸಿರುವ ಎರಡು ಸಾವಿರ ರೂ. ವರೆಗಿನ ಮೊದಲ ಹಂತದ ಪರಿಹಾರವನ್ನು ಮುಂದಿನ ವಾರದೊಳಗೆ ವಿತರಿಸಲು ಕ್ರಮ ಕೈಗೊಳ್ಳಬೇಕು.
ರಾಜ್ಯದಲ್ಲಿ ತಲೆದೋರಿರುವ ತೀವ್ರ ಬರಪರಿಸ್ಥಿತಿಯ ಹಿನ್ನೆಲೆಯಲ್ಲಿ ಅಧಿಕಾರಿಗಳು ಯುದ್ಧೋಪಾದಿಯಲ್ಲಿ ಕೆಲಸ ಮುಂದುವರೆಸಬೇಕು.
ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ಜಿಲ್ಲೆಗಳಿಗೆ ಭೇಟಿ ನೀಡಿರುವ, ಪರಿಶೀಲನೆ ನಡೆಸಿರುವ ಕುರಿತಾದ ಸಮಗ್ರ ಮಾಹಿತಿಯನ್ನು ಜಿಲ್ಲಾ ಉಸ್ತುವಾರಿ ಸಚಿವರಿಗೆ ಅಂಕಿ-ಅಂಶಗಳ ಸಹಿತ ಒದಗಿಸಬೇಕು.ರೈತರಿಗೆ ಮೊದಲ ಹಂತದಲ್ಲಿ 2,000 ರೂ. ವರೆಗೆ ಪರಿಹಾರ ಘೋಷಿಸಲಾಗಿದ್ದು, ಈ ಪರಿಹಾರವನ್ನು ತ್ವರಿತವಾಗಿ ವಿತರಿಸಲು ಮಾರ್ಗಸೂಚಿಗಳನ್ನು ರೂಪಿಸಿ, ಡಿ.ಬಿ.ಟಿ. ಮಾಡಲು ಅಗತ್ಯ ಕ್ರಮ ಕೈಗೊಳ್ಳಬೇಕು.
ಸರ್ಕಾರ ಸಮರ್ಪಕವಾಗಿ ನಡೆಯಲು ಅಧಿಕಾರಿಗಳ ಪಾತ್ರ ಬಹುಮುಖ್ಯ. ನೀವು ಸರ್ಕಾರದ ಕಣ್ಣು, ಕಿವಿ ಇದ್ದಹಾಗೆ. ರಾಜಕಾರಣಿಗಳು, ಅಧಿಕಾರಿಗಳು ನಾವೆಲ್ಲರೂ ಜನರಿಗೋಸ್ಕರ ಇರುವುದು. ಜನರ ಕೆಲಸವನ್ನು ವೇಗವಾಗಿ ಮಾಡಬೇಕು.
ಆಯವ್ಯಯ ಭಾಷಣದಲ್ಲಿ 143 ಘೋಷಣೆಗಳನ್ನು ಮಾಡಲಾಗಿದ್ದು, ಇದರಲ್ಲಿ ಈಗಾಗಲೇ 83 ಘೋಷಣೆಗಳಿಗೆ ಸರ್ಕಾರಿ ಆದೇಶ ಹೊರಡಿಸಿ, ಕಾರ್ಯಗತಗೊಳಿಸಲಾಗಿದೆ. ಉಳಿದ ಘೋಷಣೆಗಳನ್ನೂ ಶೀಘ್ರವೇ ಅನುಷ್ಠಾನಕ್ಕೆ ತರಲು ಕ್ರಮ ಕೈಗೊಳ್ಳಬೇಕು.
ಗ್ಯಾರಂಟಿ ಯೋಜನೆಗಳಲ್ಲಿ ನೋಂದಾಯಿಸಿಕೊಂಡು ಇನ್ನೂ ಸೌಲಭ್ಯ ದೊರಕದ ಅರ್ಹ ಕೆಲವು ಫಲಾನುಭವಿಗಳಿಗೆ ಸೌಲಭ್ಯ ದೊರಕಲು ಇರುವ ತಾಂತ್ರಿಕ ಅಡಚಣೆಗಳನ್ನು ಶೀರ್ಘವೇ ನಿವಾರಿಸಬೇಕು.
ಅಧಿವೇಶನ ನಡೆಯುವ ಸಂದರ್ಭದಲ್ಲಿ ಅಧಿಕಾರಿಗಳು ಕಡ್ಡಾಯವಾಗಿ ಹಾಜರಿದ್ದು, ಸಚಿವರಿಗೆ ಸೂಕ್ತ ಸಲಹೆ ನೀಡಬೇಕು.
ಇಲಾಖೆಗಳಲ್ಲಿ ಕಡತಗಳ ವಿಲೇವಾರಿ ಸಮರ್ಪಕವಾಗಿ ನಡೆಯಬೇಕು. ಸಚಿವ ಸಂಪುಟ ಸಭೆಯಲ್ಲಿಯೂ ಬಾಕಿ ಕಡತಗಳ ಕುರಿತು ಪ್ರಗತಿ ಪರಿಶೀಲನೆ ನಡೆಸಲಾಗುವುದು.ವಿವಿಧ ಇಲಾಖೆಗಳಲ್ಲಿ ನ್ಯಾಯಾಲಯ ಉಲ್ಲಂಘನೆಯ ಪ್ರಕರಣಗಳನ್ನು ಅಡ್ವೊಕೇಟ್ ಜನರಲ್ ಜೊತೆ ಚರ್ಚಿಸಿ ಇತ್ಯರ್ಥಕ್ಕೆ ಕ್ರಮ ಕೈಗೊಳ್ಳಬೇಕು.
ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು, ಜಿಲ್ಲಾಧಿಕಾರಿಗಳು ಜನಸಂಪರ್ಕ ಸಭೆ ನಡೆಸುತ್ತಿದ್ದಾರೆಯೇ ಎಂಬುದನ್ನು ಪರಿಶೀಲಿಸಬೇಕು.ಅನಿವಾರ್ಯ ಸಂದರ್ಭಗಳನ್ನು ಹೊರತು ಪಡಿಸಿ, ಕಡತಗಳಲ್ಲಿ ಕನ್ನಡದಲ್ಲಿಯೇ ಟಿಪ್ಪಣಿ ಬರೆಯಬೇಕು. ಕನ್ನಡ ನಮ್ಮ ರಾಜ್ಯ ಭಾಷೆ, ಸಾರ್ವಭೌಮ ಭಾಷೆ.
ತೆರಿಗೆ ಸಂಗ್ರಹ ಇಲಾಖೆಗಳು ಇನ್ನಷ್ಟು ಚುರುಕಾಗಿ ಕಾರ್ಯನಿರ್ವಹಿಸಬೇಕು. ಜೊತೆಗೆ ತೆರಿಗೆಯೇತರ ರಾಜಸ್ವ ಸಂಗ್ರಹ ಹೆಚ್ಚಳ ಮಾಡುವ ಬಗ್ಗೆ ಆಡಳಿತ ಸುಧಾರಣಾ ಆಯೋಗ-2 ಮಾಡಿರುವ ಶಿಫಾರಸುಗಳನ್ನು ಎಲ್ಲ ಕಾರ್ಯದರ್ಶಿಗಳು ಅಧ್ಯಯನ ಮಾಡಬೇಕು.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.