Karnataka School Reopening : `ರಾಜ್ಯದಲ್ಲಿ 1 ರಿಂದ 8 ನೇ ತರಗತಿಗಳ ಶಾಲೆ ಪುನರಾರಂಭ ಬಗ್ಗೆ ಆ.30 ರಂದು ತೀರ್ಮಾನ`
1 ನೇ ತರಗತಿಯಿಂದ 8 ನೇ ತರಗತಿಯವರೆಗೆ ಶಾಲೆಗಳನ್ನು ಮತ್ತೆ ತೆರೆಯಬೇಕೆ ಎಂದು ನಿರ್ಧರಿಸಲು ಈ ತಿಂಗಳ ಅಂತ್ಯದ ವೇಳೆಗೆ ತಜ್ಞರನ್ನು ಭೇಟಿ ಮಾಡುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಬೆಂಗಳೂರು : ಕೋವಿಡ್ ನಡುವೆ ಸುಮಾರು 18 ತಿಂಗಳ ನಂತರ ರಾಜ್ಯದಲ್ಲಿ 9 ರಿಂದ 12 ನೇ ತರಗತಿಯವರೆಗೆ ಶಾಲೆಗಳು ಮತ್ತೆ ಆರಂಭ ಮಾಡಲಾಗಿದೆ. ರಾಜ್ಯ ಸರ್ಕಾರವು 1 ರಿಂದ 8 ನೇ ತರಗತಿಯ ವಿದ್ಯಾರ್ಥಿಗಳಿಗೆ ಶೀಘ್ರದಲ್ಲೇ ಶಾಲೆಗಳಲ್ಲಿ ಆಫ್‌ಲೈನ್ ತರಗತಿಗಳನ್ನು ಪುನರಾರಂಭಿಸಲು ಯೋಜಿಸುತ್ತಿದೆ. ಈ ವಿಷಯದಲ್ಲಿ ಈವರೆಗೂ ಯಾವುದೇ ನಿರ್ಧಾರಕ್ಕೆ ಬಂದಿಲ್ಲವಾದರೂ, 1 ನೇ ತರಗತಿಯಿಂದ 8 ನೇ ತರಗತಿಯವರೆಗೆ ಶಾಲೆಗಳನ್ನು ಮತ್ತೆ ತೆರೆಯಬೇಕೆ ಎಂದು ನಿರ್ಧರಿಸಲು ಈ ತಿಂಗಳ ಅಂತ್ಯದ ವೇಳೆಗೆ ತಜ್ಞರನ್ನು ಭೇಟಿ ಮಾಡುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಈ ಕುರಿತು ಮಾತನಾಡಿರುವ ಶಿಕ್ಷಣ ಸಚಿವ ಬಿಸಿ ನಾಗೇಶ್(BC Nagesh), ಈ ಬಗ್ಗೆ ಅಂತಿಮ ನಿರ್ಧಾರಕ್ಕೆ ಬರಲು ಆಗಸ್ಟ್ 30 ರಂದು ಸಿಎಂ ಬೊಮ್ಮಾಯಿ ನೇತೃತ್ವದ ಕಾರ್ಯಪಡೆಯೊಂದಿಗೆ ಚರ್ಚಿಸಲಾಗುವುದು ಎಂದು ತಿಳಿಸಿದರು.
ಇದನ್ನೂ ಓದಿ : 1 ಕೋಟಿ ರೂ. ಮೌಲ್ಯದ ಕಾರಿನಲ್ಲಿ ಮಾಜಿ ಸಿಎಂ ಬಿಎಸ್‍ವೈ ರಾಜ್ಯ ಪ್ರವಾಸ..!
9 ನೇ ತರಗತಿಯಿಂದ 12 ನೇ ತರಗತಿಗಳ ಕ್ಲಾಸ್(9th to second Pre-University Course) (II ಪಿಯುಸಿ/12 ನೇ ತರಗತಿ) ಈಗಾಗಲೇ ಆಗಸ್ಟ್ 23 ರಿಂದ ಆರಂಭವಾಗಿದೆ. "ನಾವು ಶಿಕ್ಷಕರು, ಪೋಷಕರು ಮತ್ತು ಶಿಕ್ಷಣ ತಜ್ಞರಿಂದ ಉತ್ತಮ ಪ್ರತಿಕ್ರಿಯೆ ಸಿಕ್ಕಿದೆ. ಸಾಧಕ -ಬಾಧಕಗಳ ಆಧಾರದ ಮೇಲೆ, ಒಂದರಿಂದ ಎಂಟನೇ ತರಗತಿಯವರೆಗೆ ತರಗತಿಗಳನ್ನು ಪುನರಾರಂಭಿಸುವ ನಿರ್ಧಾರ ತೆಗೆದುಕೊಳ್ಳಲಾಗುವುದು, ”ಎಂದು ಅವರು ಹೇಳಿದರು.
ಕೋವಿಡ್ -19 ಮೂರನೇ ಅಲೆ ತಡೆಗಟ್ಟುವಿಕೆ ಮತ್ತು ನಿರ್ವಹಣೆಗಾಗಿ ಖ್ಯಾತ ಹೃದ್ರೋಗ ತಜ್ಞ ಡಾ.ದೇವಿ ಶೆಟ್ಟಿ(Dr Devi Shetty) ನೇತೃತ್ವದ 16 ಸದಸ್ಯರ ತಜ್ಞರ ಸಮಿತಿಯು ಪ್ರಾಥಮಿಕ ಶಾಲೆಗಳ ಪುನರಾರಂಭಕ್ಕೆ ಒಲವು ತೋರಿದ್ದರೂ, ಕೋವಿಡ್ -19 ತಾಂತ್ರಿಕ ಸಲಹಾ ಸಮಿತಿಯ ವರದಿಯ ಆಧಾರದ ಮೇಲೆ ಅಂತಿಮ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಹೇಳಿದರು.
ಇದನ್ನೂ ಓದಿ : ಕೊರೊನಾ 3ನೇ ಅಲೆಗೆ ‘ಕೇರಳದ ಯಶಸ್ವಿ ಮಾದರಿ’ ಕಾರಣ: ಸಿಟಿ ರವಿ ಟೀಕೆ
ರಾಜ್ಯ ಸರ್ಕಾರವು ಆದಷ್ಟು ಬೇಗ ಶಾಲೆಗಳನ್ನು ಪುನರಾರಂಭಿಸಬೇಕು(Karnataka School Reopening) ಎಂದು ತಜ್ಞರು ಮತ್ತು ಮಕ್ಕಳ ಹಕ್ಕುಗಳ ಕಾರ್ಯಕರ್ತರು ಅಭಿಪ್ರಾಯಪಟ್ಟಿದ್ದಾರೆ.
ರಾಜ್ಯದ ಕೋವಿಡ್ ಅಪ್ ಡೇಟ್
ರಾಜ್ಯದಲ್ಲಿ ಗುರುವಾರ 1,213 ಹೊಸ ಕೋವಿಡ್ -19 ಪ್ರಕರಣಗಳು(COVID-19 Cases) ಮತ್ತು 25 ಸಾವುಗಳು ಕಂಡು ಬಂದಿವೆ, ಒಟ್ಟು ಪ್ರಕರಣಗಳ ಸಂಖ್ಯೆ 29,43,463 ಮತ್ತು ಸಾವಿನ ಸಂಖ್ಯೆ 37,231 ಕ್ಕೆ ತಲುಪಿದೆ. 1,206 ಜನರನ್ನ ಆಸ್ಪತ್ರೆಯಿಂದ ಮನೆಗೆ ಕಳುಹಿಸಲಾಗಿದೆ. ಇದುವರೆಗೆ ರಾಜ್ಯದಲ್ಲಿ ಒಟ್ಟು ಚೇತರಿಸಿಕೊಂಡವರ ಸಂಖ್ಯೆ 28,86,906 ತಲುಪಿದೆ. ಬೆಂಗಳೂರು ನಗರದಲ್ಲಿ ಅತಿ ಹೆಚ್ಚು ಪ್ರಕರಣಗಳನ್ನು ದಾಖಲಾಗಿವೆ (319), ಏಕೆಂದರೆ ನಗರದಲ್ಲಿ 205 ಜನ ಡಿಸ್ಚಾರ್ಜ್ ಮತ್ತು ಇಬ್ಬರು ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 19,300 ರಷ್ಟಿವೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.