ಬೆಂಗಳೂರು : ಒಕ್ಕಲಿಗ ಸಮುದಾಯವು ಕೃಷಿಯ ಜತೆಗೆ ಬದಲಾದ ಕಾಲಕ್ಕೆ ತಕ್ಕಂತೆ ಉದ್ಯಮ ರಂಗದಲ್ಲೂ ತೊಡಗಿಸಿಕೊಂಡು ಛಾಪು ಮೂಡಿಸಬೇಕು ಎಂದು ಐಟಿ ಮತ್ತು ಬಿಟಿ ಸಚಿವ ಡಾ.ಸಿ ಎನ್ ಅಶ್ವತ್ಥನಾರಾಯಣ ಹೇಳಿದ್ದಾರೆ.


COMMERCIAL BREAK
SCROLL TO CONTINUE READING

'ಫಸ್ಟ್ ಸರ್ಕಲ್' ಸಂಘಟನೆಯು ನಗರದ ಅರಮನೆ ಮೈದಾನದಲ್ಲಿ ಇದೇ ಮೊದಲ ಬಾರಿಗೆ ಏರ್ಪಡಿಸಿದ್ದ ರಾಜ್ಯ‌ಮಟ್ಟದ ಒಕ್ಕಲಿಗರ ಉದ್ಯಮಿಗಳ 'ಉದ್ಯಮಿ ಒಕ್ಕಲಿಗ' ಸಮಾವೇಶ ಉದ್ಘಾಟಿಸಿ ಅವರು ಶುಕ್ರವಾರ ಮಾತನಾಡಿದರು. ಸಮುದಾಯವು ಕೃಷಿಯ ಜತೆಗಿನ ಸಂಬಂಧವನ್ನು ಬಿಡಬಾರದು. ಆದರೆ ಸಮಕಾಲೀನ ಜಗತ್ತು ಬೇಡುವ ಔದ್ಯಮಿಕ ಕೌಶಲಗಳನ್ನು ಬಳಸಿಕೊಂಡು ಉದ್ಯಮಿಗಳಾಗಲು ಒಕ್ಕಲಿಗ ಸಮುದಾಯದ ಪ್ರತಿಭಾವಂತರು ಪ್ರಯತ್ನಿಸಬೇಕು. ಇದಕ್ಕೆ ಮೊದಲಿನಿಂದಲೇ ಉದ್ಯಮಶೀಲತೆಯನ್ನು ಪೋಷಿಸಬೇಕು ಎಂದು ಅವರು ಹೇಳಿದರು.


ಇದನ್ನೂ ಓದಿ: ಹಾಲಿನ ಉತ್ಪನ್ನಗಳ ದರ ಏರಿಕೆಯಿಂದಾಗಿ ಬರುವ ಲಾಭ ಹೈನುಗಾರರಿಗೇ ನೀಡಲಿ-ಸಿದ್ದರಾಮಯ್ಯ


ರಾಜ್ಯದಲ್ಲಿ ಸಮುದಾಯದವರ ಸಂಖ್ಯೆ ಹೆಚ್ಚಾಗಿದೆ. ಉದ್ಯಮಶೀಲ ಮನಸ್ಸಿದ್ದರೆ ಕೃಷಿಯನ್ನು ಆಧರಿಸಿ ಹಲವು ಉದ್ದಿಮೆಗಳನ್ನು ಆರಂಭಿಸಬಹುದು ಎಂದು ಅವರು ಕಿವಿಮಾತು ಹೇಳಿದರು. ರಾಜ್ಯದಲ್ಲಿ ಉದ್ಯಮಿಯಾಗಲು ತಕ್ಕ ಕಾರ್ಯ ಪರಿಸರವಿದೆ. ಇಲ್ಲಿ ಕೂಡ ಒಳ್ಳೆಯ ಶಿಕ್ಷಣ, ಸಂಸ್ಕಾರ, ಮೌಲ್ಯಗಳು ಪ್ರಮುಖ ಪಾತ್ರ ವಹಿಸುತ್ತವೆ. ಇದನ್ನು ಮರೆತರೆ ಸಮುದಾಯಕ್ಕೆ ಒಳ್ಳೆಯದಾಗುವುದಿಲ್ಲ ಎಂದು ಅವರು ಸಲಹೆ ನೀಡಿದರು.


ಒಕ್ಕಲಿಗ ಜನಾಂಗದ ಉತ್ಸಾಹಿಗಳು ಉದ್ಯಮಿಗಳಾಗಲು ಮುಂದೆ ಬಂದರೆ ಸರಕಾರವು ಅಗತ್ಯ ಪ್ರೋತ್ಸಾಹ ನೀಡಲಿದೆ. ಇಲ್ಲಿ ವೈಯಕ್ತಿಕ ಉದ್ದೇಶಕ್ಕಿಂತ ಹೆಚ್ಚಾಗಿ ಸಾಮುದಾಯಿಕ ಹಿತದ ಬಗ್ಗೆ ಹೆಚ್ಚಿನ ಗಮನ ಇರಬೇಕು ಎಂದು ಅವರು ನುಡಿದರು. ಕಾರ್ಯಕ್ರಮದಲ್ಲಿ ಸಚಿವ ಕೆ.ಗೋಪಾಲಯ್ಯ, ಸಂಸದ ಬಿ ಎನ್ ಬಚ್ಚೇಗೌಡ, ಮುಖ್ಯಮಂತ್ರಿಗಳ ಕಾರ್ಯದರ್ಶಿ ಜಯರಾಂ ರಾಯಪುರ ಮುಂತಾದವರು ಉಪಸ್ಥಿತರಿದ್ದರು.


ಇದನ್ನೂ ಓದಿ: ರಾಜ್ಯದ ಗಡಿ ಹಾಗೂ ಜನರನ್ನು ರಕ್ಷಿಸಲು ಶಕ್ತಿ ಮೀರಿ ಹೋರಾಟ: ಬಸವರಾಜ ಬೊಮ್ಮಾಯಿ


ಫಸ್ಟ್ ಸರ್ಕಲ್ ಸಂಘಟನೆಯು ನಗರದಲ್ಲಿ ಶುಕ್ರವಾರ ಏರ್ಪಡಿಸಿದ್ದ 'ಉದ್ಯಮಿ ಒಕ್ಕಲಿಗ' ಸಮಾವೇಶವನ್ನು ಐಟಿ-ಬಿಟಿ ಸಚಿವ ಡಾ.ಸಿ ಎನ್ ಅಶ್ವತ್ಥ ನಾರಾಯಣ ಉದ್ಘಾಟಿಸಿದರು. ಜತೆಯಲ್ಲಿ ಸಚಿವ ಕೆ. ಗೋಪಾಲಯ್ಯ, ಸಂಸದ ಬಿ ಎನ್ ಬಚ್ಚೇಗೌಡ,  ಜಯರಾಂ ರಾಯಪುರ ಮುಂತಾದವರು ಇದ್ದರು.https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.