ನವದೆಹಲಿ: ಬರೋಬ್ಬರಿ 666 ಕೋಟಿ ರೂ. ಮೌಲ್ಯದ ಚಿನ್ನಾಭರಣವನ್ನು ಸಾಗಿಸುತ್ತಿದ್ದ ಖಾಸಗಿ ಕಂಟೈನರ್ ಪಲ್ಟಿಯಾಗಿರುವ ಘಟನೆ ತಮಿಳುನಾಡಿನಲ್ಲಿ ನಡೆದಿದೆ. ಸೋಮವಾರ (ಮೇ 6) ತಡರಾತ್ರಿ ಈರೋಡ್ ಬಳಿಯ ಚಿತೋಡ್​ನಲ್ಲಿ ಮಗುಚಿ ಬಿದ್ದಿದೆ ಎಂದು ಪೊಲೀಸರು ತಿಳಿಸಿದ್ದಾರೆ.   


COMMERCIAL BREAK
SCROLL TO CONTINUE READING

ಖಾಸಗಿ ಲಾಜಿಸ್ಟಿಕ್ಸ್​ ಸಂಸ್ಥೆಗೆ ಸೇರಿದ ಈ ಕಂಟೈನರ್ 810KGಯಷ್ಟು ಚಿನ್ನಾಭರಣಗಳನ್ನು ತುಂಬಿಕೊಂಡು ಕೊಯಮತ್ತೂರಿನಿಂದ ಸೇಲಂಗೆ ತೆರಳುತ್ತಿತ್ತು. ಆದರೆ ಸಮತುವಪುರಂ ಬಳಿಯ ತಿರುವಿನಲ್ಲಿ ವಾಹನ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದಿದೆ. ಘಟನೆಯಲ್ಲಿ ಚಾಲಕ ಶಶಿಕುಮಾರ್ ಮತ್ತು ಶಸ್ತ್ರಸಜ್ಜಿತ ಭದ್ರತಾ ಸಿಬ್ಬಂದಿ ಬಾಲರಾಜ್‌ಗೆ ಗಂಭೀರ ಗಾಯಗಳಾಗಿವೆ ಎಂದು ತಿಳಿದುಬಂದಿದೆ. 


ಇದನ್ನೂ ಓದಿ: ಕೇರಳದಲ್ಲಿ ವೆಸ್ಟ್ ನೈಲ್ ಫಿವರ್ ಪತ್ತೆ !


ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕಾಗಮಿಸಿದ ಚಿತ್ತೋಡ್​ ಪೊಲೀಸರು ಇಬ್ಬರನ್ನು ವಾಹನದಿಂದ ಹೊರತೆಗೆದು ವೈದ್ಯಕೀಯ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಇದೇ ವೇಳೆ ವಾಹನದಲ್ಲಿದ್ದ ಚಿನ್ನಾಭರಣಗಳು ಸುರಕ್ಷಿತವಾಗಿವೆ. ಆಭರಣಗಳ ಮಾಲೀಕರಿಗೆ ಘಟನೆಯ ಬಗ್ಗೆ ಮಾಹಿತಿ ನೀಡಲಾಗಿದೆ ಅಂತಾ ಪೊಲೀಸರು ತಿಳಿಸಿದ್ದಾರೆ. 


ಜನಸಂದಣಿ ಇಲ್ಲದ ಕಾರಣ ಹೆಚ್ಚಿನ ಅನಾಹುತ ಸಂಭವಿಸಿಲ್ಲ. ಒಂದು ವೇಳೆ ಚಿನ್ನ ಸಾಗಿಸುತ್ತಿದ್ದ ವಾಹನ ಪಲ್ಟಿಯಾಗಿದೆ ಅಂತಾ ಜನರಿಗೆ ಗೊತ್ತಾಗಿದ್ದರೆ ಎಲ್ಲಾ ಚಿನ್ನಾಭರಣಗಳನ್ನು ದೋಚಿಬಿಡುತ್ತಿದ್ದರು. ಈ ವೇಳೆ ಪೊಲೀಸರು ಸಹ ಏನೂ ಮಾಡಲು ಸಾಧ್ಯವಾಗತ್ತಿರಲಿಲ್ಲ. ಮತ್ತೊಂದು ವಾಹನಕ್ಕೆ ಚಿನ್ನಾಭರಣಗಳನ್ನು ತುಂಬಿಸಿ ಕಳುಹಿಸಲಾಯಿತು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. 


ಇದನ್ನೂ ಓದಿ: ರಾಮಮಂದಿರಕ್ಕೆ ಕಾಂಗ್ರೆಸ್‌ ಬೀಗ ಹಾಕಬಾರದು ಎಂದರೆ ನಮಗೆ 400 ಸೀಟು ಕೊಡಿ: ನರೇಂದ್ರ ಮೋದಿ


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.