ಫೆ.17 ರಂದು ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಜಗಜ್ಯೋತಿ ಬಸವಣ್ಣನವರ ಭಾವಚಿತ್ರ ಅನಾವರಣ

ಜಿಲ್ಲೆಯ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಫೆ.17 ರಂದು ಸಾಂಸ್ಕøತಿಕ ನಾಯಕ ಜಗಜ್ಯೋತಿ ಬಸವಣ್ಣನವರ ಭಾವಚಿತ್ರ ಅನಾವರಣ ಸಮಾರಂಭ ಆಯೋಜಿಸಬೇಕು ಎಂದು ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಸೂಚನೆ ನೀಡಿದ್ದಾರೆ.

Written by - Manjunath N | Last Updated : Feb 15, 2024, 05:12 PM IST
  • ಜಗಜ್ಯೋತಿ ಬಸವಣ್ಣನವರ ಭಾವಚಿತ್ರದ ಕೆಳಗೆ “ವಿಶ್ವಗುರು ಬಸವಣ್ಣ ಸಾಂಸ್ಕತಿಕ ನಾಯಕ” ಎಂಬ ಅಡಿಬರಹ ಮುದ್ರಿಸಿ ಅಳವಡಿಸಬೇಕು.
  • ಭಾವಚಿತ್ರದ ಡಿಜಿಟಲ್ ಪ್ರತಿಯನ್ನು ಕನ್ನಡ ಮತ್ತು ಸಂಸ್ಕತಿ ಇಲಾಖೆಯಿಂದ ಅಥವಾ ಜಾಲತಾಣ https://kannadasiri.Karnataka.Gov.in ನಲ್ಲಿ ಡೌನ್‍ಲೋಡ್ ಮಾಡಿಕೊಳ್ಳಬಹುದು
 ಫೆ.17 ರಂದು ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಜಗಜ್ಯೋತಿ ಬಸವಣ್ಣನವರ ಭಾವಚಿತ್ರ ಅನಾವರಣ title=

ಬಳ್ಳಾರಿ: ಜಿಲ್ಲೆಯ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಫೆ.17 ರಂದು ಸಾಂಸ್ಕøತಿಕ ನಾಯಕ ಜಗಜ್ಯೋತಿ ಬಸವಣ್ಣನವರ ಭಾವಚಿತ್ರ ಅನಾವರಣ ಸಮಾರಂಭ ಆಯೋಜಿಸಬೇಕು ಎಂದು ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಸೂಚನೆ ನೀಡಿದ್ದಾರೆ.

12ನೇ ಶತಮಾನದಲ್ಲಿ ಕ್ರಾಂತಿಯೋಗಿ ಶ್ರೀ ಜಗಜ್ಯೋತಿ ಬಸವಣ್ಣನವರು ಪ್ರತಿಪಾದಿಸಿದ ಸಾರ್ವತ್ರಿಕ ಮೌಲ್ಯಗಳಾದ ಜಾತಿ ರಹಿತ ಸಮಾಜ, ಕಾಯಕದ ಮಹತ್ವ ಮತ್ತು ವರ್ಗರಹಿತ ಸಮಾಜ, ಜೀವನ ಮಾರ್ಗ ಸರ್ವಕಾಲಕ್ಕೂ ದಾರಿದೀಪವಾಗಿದೆ. ಸಮಾಜದಲ್ಲಿ ಮಹಿಳಾ ಅಸಮಾನತೆ ಹಾಗೂ ಮೂಢನಂಬಿಕೆಗಳ ಬಗ್ಗೆ ವಿರೋಧ ವ್ಯಕ್ತಪಡಿಸಿರುತ್ತಾರೆ. ಅಲ್ಲದೇ ಜಗಜ್ಯೋತಿ ಬಸವಣ್ಣನವರು ಸಾರ್ವತ್ರಿಕ ಮತ್ತು ಸರ್ವಕಾಲಿಕ ಸರ್ವಜನ ಸಮಭಾವದ ತಾತ್ವಿಕತೆಗಳ ಮೂಲಕ ಕಲ್ಯಾಣ ಸಮಾಜವನ್ನು ಕಟ್ಟುವುದಕ್ಕೆ ಬೇಕಾದ ನೀತಿಯನ್ನು ಬೋಧಿಸಿರುವುದರಿಂದ ನಮ್ಮ ದೇಶದ ಸಂವಿಧಾನದ ಆಶಯಗಳಿಗೆ ಅವರ ಚಿಂತನೆಗಳು ಸಾಂಸ್ಕøತಿಕ ರಾಯಭಾರಿತ್ವಕ್ಕೆ ಸಮರ್ಥನೀಯವಾದ ನೆಲೆ ಒದಗಿಸಿರುವ ಮೇರೆಗೆ ಶ್ರೀ ಜಗಜ್ಯೋತಿ ಬಸವಣ್ಣನವರನ್ನು ರಾಜ್ಯ ಸರ್ಕಾರವು “ಕರ್ನಾಟಕ ಸಾಂಸ್ಕøತಿಕ ನಾಯಕ” ಎಂದು ಘೋಷಿಸಿದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ- ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರ : ಯಾರಾಗಲಿದ್ದಾರೆ ಬಿಜೆಪಿ ಅಭ್ಯರ್ಥಿ..?

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಶ್ವಗುರು ಬಸವಣ್ಣನವರ ಭಾವಚಿತ್ರವನ್ನು ಫೆ.13 ರಂದು ಅನಾವರಣಗೊಳಿಸಿದ್ದಾರೆ. ಅದರಂತೆ ಫೆ.17 ರಂದು ರಾಜ್ಯಾದ್ಯಾಂತ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ತದಲ್ಲಿ ಮತ್ತು ತಾಲೂಕು ಕೇಂದ್ರಗಳಲ್ಲಿ ಸ್ಥಳೀಯ ಶಾಸಕರುಗಳ ನೇತೃತ್ವದಲ್ಲಿ ವಿಶ್ವಗುರು ಬಸವಣ್ಣನವರ ಭಾವಚಿತ್ರವನ್ನು ಅನಾವರಣಗೊಳಿಸುವ ಕಾರ್ಯಕ್ರಮವನ್ನು ಆಯೋಜಿಸಲು ರಾಜ್ಯ ಸರ್ಕಾರವು ನಿರ್ದೇಶಿಸಿದೆ ಎಂದು ತಿಳಿಸಿದ್ದಾರೆ.

ಆದ್ದರಿಂದ ಜಿಲ್ಲೆಯ ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳು ಹಾಗೂ ಗ್ರಾಮೀಣ ಸ್ಥಳೀಯ ಸಂಸ್ಥೆಗಳು ಹಾಗೂ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ “ಸಾಂಸ್ಕøತಿಕ ನಾಯಕರಾದ ವಿಶ್ವಗುರು ಬಸವಣ್ಣನವರ ಭಾವಚಿತ್ರವನ್ನು ಅನಾವರಣಗೊಳಿಸುವ ಕಾರ್ಯಕ್ರಮವನ್ನು ಆಯೋಜಿಸಿ, ಬಸವಣ್ಣನವರ ಭಾವಚಿತ್ರವನ್ನು ಕಡ್ಡಾಯವಾಗಿ ಅಳವಡಿಸಬೇಕು.

ಜಗಜ್ಯೋತಿ ಬಸವಣ್ಣನವರ ಭಾವಚಿತ್ರದ ಕೆಳಗೆ “ವಿಶ್ವಗುರು ಬಸವಣ್ಣ ಸಾಂಸ್ಕøತಿಕ ನಾಯಕ” ಎಂಬ ಅಡಿಬರಹ ಮುದ್ರಿಸಿ ಅಳವಡಿಸಬೇಕು. ಭಾವಚಿತ್ರದ ಡಿಜಿಟಲ್ ಪ್ರತಿಯನ್ನು ಕನ್ನಡ ಮತ್ತು ಸಂಸ್ಕøತಿ ಇಲಾಖೆಯಿಂದ ಅಥವಾ ಜಾಲತಾಣ https://kannadasiri.Karnataka.Gov.in ನಲ್ಲಿ ಡೌನ್‍ಲೋಡ್ ಮಾಡಿಕೊಳ್ಳಬಹುದು ಎಂದು ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ತಿಳಿಸಿದ್ದಾರೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=I87DcFM35WY

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

 

Trending News