Prime Minister  Narendra Modi : ಬೆಂಗಳೂರು-ಕಲಬುರಗಿಗೆ ಸಂಪರ್ಕಿಸುವ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲಿಗೆ ಪ್ರಧಾನಿ ನರೇಂದ್ರ ಮೋದಿ ಮಾರ್ಚ್ 12ರಂದು ಚಾಲನೆ ನೀಡಲಿದ್ದಾರೆ.


COMMERCIAL BREAK
SCROLL TO CONTINUE READING

ಕಲಬುರಗಿ ಸಂಸದ ಡಾ ಉಮೇಶ್ ಜಾಧವ್ ಲೋಕಸಭೆ ಕಲಾಪದಲ್ಲಿ ಸಭಾಪತಿಗಳ ಮೂಲಕ ಈ ಕುರಿತು ರೈಲ್ವೆ ಸಚಿವರ ಗಮನವನ್ನು ಸೆಳೆದಿದ್ದರು. ಬೆಂಗಳೂರು-ಕಲಬುರಗಿಗೆ ನಡುವೆ ವಂದೇ ಭಾರತ್ ರೈಲು ಸಂಪರ್ಕ ಬೇಕು ಎನ್ನುವ ಬೇಡಿಕೆಯನ್ನು ಇಡಲಾಗಿತ್ತು. ಈಗ ಬೆಂಗಳೂರು-ಕಲಬುರಗಿ ಸಂಪರ್ಕಿಸುವ ವಂದೇ ಭಾರತ್ ರೈಲು ಸಂಚಾರಕ್ಕೆ ಒಪ್ಪಿಗೆ ನೀಡಲಾಗಿದ್ದು, ಸದ್ಯದ ಮಾಹಿತಿ ಪ್ರಕಾರ ಮಾರ್ಚ್ 12ರಂದು ಈ ಹೊಸ ರೈಲು ಸೇವೆಗೆ ಚಾಲನೆ ಸಿಗಲಿದೆ. ಬೆಂಗಳೂರಿನಿಂದ ಹೊರಡುವ ರೈಲು ಮಹಾರಾಷ್ಟ್ರದ ಮೂಲಕ ಕಲಬುರಗಿ ತಲುಪಲಿದೆ.


ಕರ್ನಾಟಕದ ಹೊಸ ವಂದೇ ಭಾರತ್ ರೈಲಿಗೆ ಪ್ರಧಾನಿ ನರೇಂದ್ರ ಮೋದಿ ಮಾರ್ಚ್ 12ರಂದು ಚಾಲನೆ ನೀಡಲಿದ್ದಾರೆ ಎಂದು ತಿಳಿಸಲಾಗಿದ್ದು, Kalyana-Karnataka Railway Development ಎಂಬ ಟ್ವೀಟ್ ಖಾತೆಯಲ್ಲಿ ಗುರುವಾರ ಈ ಕುರಿತು ಮಾಹಿತಿ ನೀಡಲಾಗಿದೆ. 


ಇದನ್ನು ಓದಿ : NWKRTC : ನೌಕರರಿಗೆ ನಗದು ರಹಿತ ವೈದ್ಯಕೀಯ ಸೇವೆ ಕಲ್ಪಿಸಲು 'ಸಾರಿಗೆ ಸಂಜೀವಿನಿ' ಯೋಜನೆ


ಈ ರೈಲು ಕರ್ನಾಟಕ, ಮಹಾರಾಷ್ಟ್ರ ನಡುವೆ ಸಂಚಾರ ನಡೆಸಲಿದ್ದು, ಆದರೆ ಈ ರೈಲು ಕರ್ನಾಟಕಕ್ಕಿಂತ ಮಹಾರಾಷ್ಟ್ರಕ್ಕೆ ಹೆಚ್ಚು ಉಪಯೋಗವಾಗಲಿದೆ ಎಂದು ನಿರೀಕ್ಷಿಸಲಾಗಿದೆ. ಇದೀಗ  ಬೆಂಗಳೂರು-ಕಲಬುರಗಿ ನಡುವಿನ ವಂದೇ ಭಾರತ್ ರೈಲಿಗೆ ಮಾರ್ಚ್ 12ರಂದು ಹಸಿರು ನಿಶಾನೆ ತೋರಿಸಲಾಗುತ್ತದೆ ಎಂದು ಮಾತ್ರ ಮಾಹಿತಿ ನೀಡಲಾಗಿದೆ. ಆದರೆ ಸಮಯ, ನಿಲ್ದಾಣಗಳ ಮಾಹಿತಿಯು ಸದ್ಯಕ್ಕೆ ತಿಳಿದು ಬಂದಿಲ್ಲ. ನಿಲ್ದಾಣ, ವೇಳಾಪಟ್ಟಿ ಕುರಿತು ಅಂತಿಮ ಆದೇಶ ಪ್ರಕಟವಾದ ಬಳಿಕ ಹೆಚ್ಚಿನ ವಿವರ ತಿಳಿಯಲಿದೆ. 


ಈ ಕುರಿತು ಕಲಬುರಗಿ ಸಂಸದ ಡಾ. ಉಮೇಶ್ ಜಾಧವ್ ವಿಡಿಯೋ ಮೂಲಕ ಮಾಹಿತಿ ನೀಡಿದ್ದಾರೆ. "ನಮ್ಮ ಬೇಡಿಕೆಗೆ ಸ್ಪಂದಿಸಿ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್‌ ವಂದೇ ಭಾರತ್ ರೈಲಿಗೆ ಅನುಮೋದನೆ ನೀಡಿದ್ದು, ಪ್ರಧಾನಿಗಳು ಉದ್ಘಾಟಿಸುವ ವಿವಿಧ ಕಾರ್ಯಕ್ರಮಗಳ ಪಟ್ಟಿಯಲ್ಲಿ ವಂದೇ ಭಾರತ್ ರೈಲು ಸಹ ಸೇರಿದೆ. ಇತ್ತೀಚೆಗೆ ಕಲಬುರಗಿ-ಬೆಂಗಳೂರು ವಂದೇ ಭಾರತ್ ರೈಲು ಘೋಷಣೆಯಾಗಿತ್ತು" ಎಂದು ಹೇಳಿದ್ದಾರೆ.


ಇದನ್ನು ಓದಿ : Women's Day 2024: ದೇಶಾದ್ಯಂತದ 10 ಕೋಟಿ ಮಹಿಳೆಯರಿಗೆ ಮೋದಿ ಸರ್ಕಾರದ ಭರ್ಜರಿ ಉಡುಗೊರೆ


ಡಿಸೆಂಬರ್‌ನಲ್ಲಿ ಲೋಕಸಭೆಯಲ್ಲಿ ಮಾತನಾಡಿದ್ದ ಸಂಸದ ಡಾ. ಉಮೇಶ್ ಜಾಧವ್ ಮುಂಬೈ-ಸೋಲಾಪುರ ನಡುವೆ ಸಂಚಾರ ನಡೆಸುವ ವಂದೇ ಭಾರತ್ ರೈಲನ್ನು ಕಲಬುರಗಿ ತನಕ ವಿಸ್ತರಣೆ ಮಾಡಬೇಕು ಎಂದು ಒತ್ತಾಯಿಸಿದ್ದರು. ಈ ವರ್ಷದ ಫೆಬ್ರವರಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಈ ರೈಲು ಸೇವೆಗೆ ಚಾಲನೆ ನೀಡಿದ್ದರು. ಕಲಬುರಗಿ ಕಲ್ಯಾಣ ಕರ್ನಾಟಕ ಭಾಗದ 6 ಜಿಲ್ಲೆಗಳ ಕೇಂದ್ರ ಸ್ಥಾನವಾಗಿದೆ. ಮಹಾರಾಷ್ಟ್ರದಲ್ಲಿ ಸಂಚಾರ ನಡೆಸುವ ಮುಂಬೈ-ಸೋಲಾಪುರ ನಡುವಿನ ವಂದೇ ಭಾರತ್ ರೈಲನ್ನು ಕಲಬುರಗಿ ತನಕ ವಿಸ್ತರಣೆ ಮಾಡಿದರೆ ಈ ಭಾಗದ ಜನರ ಸಂಚಾರಕ್ಕೆ ಅನುಕೂಲವಾಗಲಿದೆ. ಅಲ್ಲದೇ ವ್ಯಾಪಾರ ಅಭಿವೃದ್ಧಿಗೆ ಮತ್ತು ಆರ್ಥಿಕ ಸುಧಾರಣೆಗೆ ಸಹಕಾರಿಯಾಗಲಿದೆ ಎಂದು ಸಂಸದರು ವಿವರಣೆ ನೀಡಿದ್ದರುhttps://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://t.co/lCSPNypK2U
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ