close

News WrapGet Handpicked Stories from our editors directly to your mailbox

KSRTC ಬಸ್ ಡಿಕ್ಕಿ; ಪಾದಚಾರಿ ಸಾವು

ಚಾಲಕನ ನಿಯಂತ್ರಣ ತಪ್ಪಿದ ಬಸ್ಸೊಂದು ಪಾದಚಾರಿಗೆ ಡಿಕ್ಕಿ ಹೊಡೆದ ಪರಿಣಾಮ ಪಾದಚಾರಿ ಮಾದೇಶ್(48) ಸ್ಥಳದಲ್ಲೇ ಮೃತಪಟ್ಟಿದ್ದಾರೆ.

Updated: Sep 24, 2018 , 10:29 AM IST
KSRTC ಬಸ್ ಡಿಕ್ಕಿ; ಪಾದಚಾರಿ ಸಾವು
ಸಾಂದರ್ಭಿಕ ಚಿತ್ರ

ಮಂಡ್ಯ: ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ಕೆಎಸ್ಆರ್ಟಿಸಿ ಬಸ್ಸೊಂದು ಮನೆಯ ಗೋಡೆಗೆ ಡಿಕ್ಕಿ ಹೊಡೆದ ಘಟನೆ ಮಂಡ್ಯ ಜಿಲ್ಲೆಯಲ ಮಳವಳ್ಳಿ ಪಟ್ಟಣದ ಕೊಳ್ಳೇಗಾಲ ಮುಖ್ಯ ರಸ್ತೆಯಲ್ಲಿ ಸೋಮವಾರ ನಡೆದಿದೆ. ಘಟನೆಯಲ್ಲಿ ಮೂವರಿಗೆ ಗಾಯವಾಗಿದ್ದು, ಓರ್ವ ಮೃತಪಟ್ಟಿದ್ದಾರೆ ಎನ್ನಲಾಗಿದೆ.

ಮಳವಳ್ಳಿ ಪಟ್ಟಣದ ಕೊಳ್ಳೇಗಾಲ ಮುಖ್ಯರಸ್ತೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಬಸ್ಸೊಂದು ಪಾದಚಾರಿಗೆ ಡಿಕ್ಕಿ ಹೊಡೆದು ರಸ್ತೆ ಬದಿಯಲ್ಲಿದ್ದ ಮನೆಯ ಗೋಡೆಗೆ ಡಿಕ್ಕಿ ಹೊಡೆದಿದೆ. ಈ ಘಟನೆಯಲ್ಲಿ ಪಾದಚಾರಿ ಮಾದೇಶ್(48) ಸ್ಥಳದಲ್ಲೇ ಮೃತಪಟ್ಟಿದ್ದಾರೆ. 

ಮನೆಯ ಗೋಡೆಗೆ ಡಿಕ್ಕಿ ಹೊಡೆದ ಪರಿಣಾಮ ಮನೆ ಗೋಡೆ ಕುಸಿದಿದ್ದು, ಮನೆಯೊಳಗಿದ್ದ ಮೂವರು ಗಾಯಗೊಂಡಿದ್ದಾರೆ. ಇವರನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆ ಬಗ್ಗೆ ಮಳವಳ್ಳಿ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ನಡೆಸುತ್ತಿದ್ದಾರೆ.