ಹುಬ್ಬಳ್ಳಿ ರೈಲು ನಿಲ್ದಾಣದಲ್ಲಿ ಸ್ಫೋಟ, ಓರ್ವನಿಗೆ ಗಾಯ

ಆಂಧ್ರಪ್ರದೇಶ ಮೂಲದ ಪ್ರಯಾಣಿಕರೊಬ್ಬರ ಕೈಲಿದ್ದ ಬ್ಯಾಗ್ ಸ್ಫೋಟಗೊಂಡಿದ್ದು, ಬ್ಯಾಗ್ ಹಿಡಿದಿದ್ದ ವ್ಯಕ್ತಿಗೆ ಗಂಭೀರ ಗಾಯಗಳಾಗಿವೆ.

Updated: Oct 21, 2019 , 04:27 PM IST
ಹುಬ್ಬಳ್ಳಿ ರೈಲು ನಿಲ್ದಾಣದಲ್ಲಿ ಸ್ಫೋಟ, ಓರ್ವನಿಗೆ ಗಾಯ

ಹುಬ್ಬಳ್ಳಿ: ರಾಜ್ಯಾದ್ಯಂತ ಭಯೋತ್ಪಾದಕ ದಾಳಿ ಹಿನ್ನೆಲೆಯಲ್ಲಿ ಕಟ್ಟೆಚ್ಚರ ವಹಿಸಿರುವ ಬೆನ್ನಲ್ಲೇ ಹುಬ್ಬಳ್ಳಿ ರೈಲು ನಿಲ್ದಾಣದಲ್ಲಿ ಸ್ಫೋಟ ಸಂಭವಿಸಿದ್ದು, ಓರ್ವ ಗಾಯಗೊಂಡಿರುವ ಘಟನೆ ಸೋಮವಾರ ನಡೆದಿದೆ. 

ಆಂಧ್ರಪ್ರದೇಶ ಮೂಲದ ಪ್ರಯಾಣಿಕರೊಬ್ಬರ ಕೈಲಿದ್ದ ಬ್ಯಾಗ್ ಸ್ಫೋಟಗೊಂಡಿದ್ದು, ಬ್ಯಾಗ್ ಹಿಡಿದಿದ್ದ ವ್ಯಕ್ತಿಗೆ ಗಂಭೀರ ಗಾಯಗಳಾಗಿವೆ. ಕೂಡಲೇ ಆತನನ್ನು ಪೊಲೀಸರು ಆಸ್ಪತ್ರೆಗೆ ದಾಖಲಿಸಿದ್ದಾರೆ ಎನ್ನಲಾಗಿದೆ. 

ಆದರೆ, ಬ್ಯಾಗ್ ನಲ್ಲಿ ಏನಿತ್ತು ಎಂಬುದರ ಬಗ್ಗೆ ನಿಖರವಾದ ಮಾಹಿತಿ ಲಭ್ಯವಾಗಿಲ್ಲ. ಸ್ಫೋಟದಿಂದಾಗಿ ರೈಲು ನಿಲ್ದಾಣದಲ್ಲಿ ಆತಂಕದ ವಾತಾವರಣ ಸೃಷ್ಟಿಯಾಗಿದ್ದು, ಬಿಗಿ ಪೊಲೀಸ್ ಭದ್ರತೆ ಒದಗಿಸಲಾಗಿದೆ.