ಬೆಂಗಳೂರು: ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಐಟಿ ಅಧಿಕಾರಿಗಳು ಮತ್ತೋರ್ವ ಆರೋಪಿಯನ್ನು ಗುರುವಾರ ಬಂಧಿಸಿದ್ದಾರೆ. 


COMMERCIAL BREAK
SCROLL TO CONTINUE READING

ಪ್ರಕರಣದ ಮುಖ್ಯ ಆರೋಪಿ ಎನ್ನಲಾಗಿರುವ ಪರಶುರಾಮ್ ವಾಗ್ಮೋರೆಗೆ ಸಹಾಯ ಮಾಡಿದ ಆರೋಪದಲ್ಲಿ ಸುಳ್ಯ ಮೂಲದ ಮೋಹನ್ ನಾಯಕ್ ಎಂಬಾತನನ್ನು ಆತನ ನಿವಾಸದಲ್ಲಿಯೇ ಬಂಧಿಸಿದ ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿ, ನ್ಯಾಯಾಲಯದ ಅನುಮತಿ ಮೇರೆಗೆ 14 ದಿನಗಳ ಕಾಲ ತಮ್ಮ ಕಸ್ಟಡಿಗೆ ಪಡೆದುಕೊಂಡು ವಿಚಾರಣೆ ಆರಂಭಿಸಿದ್ದಾರೆ.


ಗೌರಿ ಲಂಕೇಶ್ ಹತ್ಯೆಯಾದ ದಿನ ಗುಂಡು ಹಾರಿಸಿದ ಆರೋಪಿ ಪರುಶರಾಮ ವಾಘ್ಮೋರೆಯನ್ನು ಹಿಂಬದಿಯಲ್ಲಿ ಕೂರಿಸಿಕೊಂಡು ಬೈಕ್​ ಚಾಲನೆ ಮಾಡಿದ್ದು ಈತನೇ ಎಂದು ಹೇಳಲಾಗುತ್ತಿದೆ. ಜತೆಗೆ ಬೆಂಗಳೂರಿನಲ್ಲಿದ್ದ ಪತ್ರಕರ್ತೆ ಗೌರಿ ಲಂಕೇಶ್​ ಮನೆ ಕುರಿತು ತನ್ನ ಸಹಚರರಿಗೆ ಮಾಹಿತಿ ನೀಡಿದ್ದು ಈತನೇ ಎಂದು ಹೇಳಲಾಗುತ್ತಿದೆ.


2017ರ ಸೆಪ್ಟೆಂಬರ್ 5ರಂದು ಬೆಂಗಳೂರಿನ ರಾಜರಾಜೇಶ್ವರಿ ನಗರದ ನಿವಾಸದ ಮುಂದೆ ಗೌರಿ ಲಂಕೇಶ್ ಅವರನ್ನು ಗುಂಡಿಟ್ಟು ಹತ್ಯೆ ಮಾಡಲಾಗಿತ್ತು. ಈ ಪ್ರಕರಣದ ತನಿಖೆಯನ್ನು ಸರ್ಕಾರ ಎಸ್‌ಐಟಿಗೆ ವಹಿಸಿದೆ.